ಚಿತ್ರದುರ್ಗ | ಇಸ್ರೋ ಮಹತ್ವದ ಸಾಧನೆ; ವಿಆರ್‌ಎಲ್‌ ಪುಷ್ಪಕ್ ಮೂರನೇ ಬಾರಿಗೆ ಯಶಸ್ವಿ ಲ್ಯಾಂಡಿಂಗ್

Date:

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಕುದಾಪುರದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಅಭಿವೃದ್ಧಿಪಡಿಸಿದ್ದು, ಪ್ರಯೋಗಗಳಲ್ಲಿ ಸತತ ಯಶಸ್ಸು ಮುಡಿಗೇರಿಸಿಕೊಂಡಿದೆ.

ʼಪುಷ್ಪಕ್’ ಹೆಸರಿನಲ್ಲಿ ಅಭಿವೃದ್ಧಿಪಡಿಸಿರುವ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (ಆರ್‌ಎಲ್‌ವಿ) ಲ್ಯಾಂಡಿಂಗ್ ಪ್ರಯೋಗದಲ್ಲಿ ಸತತ ಮೂರನೇ ಬಾರಿಗೆ ಯಶಸ್ವಿಯಾಗಿದೆ.

ಜೂನ್‌ 23ರ ಬೆಳಿಗ್ಗೆ 7.10ಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ಕುದಾಪುರ ಬಳಿಯಿರುವ ವಾಯು ನೆಲೆ (ಏರೋನಾಟಿಕಲ್ ಟೆಸ್ಟ್ ರೇಂಜ್–ATR)ಯಲ್ಲಿ ಈ ಪರೀಕ್ಷೆ ನಡೆದಿದೆ ಎಂದು ಇಸ್ರೋ ಎಕ್ಸ್ (X) ಖಾತೆಯಲ್ಲಿ ಪ್ರಕಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

LEX-03 ಸರಣಿಯ ಮೂರನೇ ಮತ್ತು ಅಂತಿಮ ಪರೀಕ್ಷೆ ಇದಾಗಿದೆ. RLV LEX-01 ಮತ್ತು LEX-02 ಕಾರ್ಯಾಚರಣೆಗಳ ಯಶಸ್ಸಿನ ನಂತರ, RLV LEX-03 ಹೆಚ್ಚು ಸವಾಲಿನ ಪರೀಕ್ಷೆಯಾಗಿತ್ತು.

ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್‍ನಲ್ಲಿ ಭಾನುವಾರ ಬೆಳಿಗ್ಗೆ ಸರ್ವ ಸನ್ನದ್ಧರಾಗಿದ್ದ ಇಸ್ರೋ ವಿಜ್ಞಾನಿಗಳ ತಂಡ, ‘ಚಿನೂಕ್’ ಹೆಲಿಕಾಫ್ಟರ್ ಮೂಲಕ ‘ಪುಷ್ಪಕ್’ ಲ್ಯಾಂಡಿಂಗ್ ವಾಹನವನ್ನು ರನ್-ವೇಯಿಂದ 4.5 ಕಿಮೀ ಎತ್ತರಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಂದ ಬಿಡುಗಡೆ ಮಾಡಿತು.

ಸಾಕಷ್ಟು ಗಾಳಿ, ಒತ್ತಡದ ಪರಿಸ್ಥಿತಿಯಲ್ಲೂ ರೆಕ್ಕೆಗಳಿಲ್ಲದ ಪುಷ್ಪಕ್ ತನ್ನಲ್ಲಿರುವ ತಂತ್ರಜ್ಞಾನದ ಬಲದಿಂದ ರನ್‍ವೇ ಸಮೀಪಿಸಿತು. ರನ್‍ವೇ ಸೆಂಟರ್‌ಲೈನ್‌ನಲ್ಲಿ ನಿಖರವಾದ ಸಮತಲ ಲ್ಯಾಂಡಿಂಗ್ ಮಾಡಲಾಯಿತು.

ಲ್ಯಾಂಡಿಂಗ್ ವೇಗವು ಪ್ರತಿ ಗಂಟೆಗೆ 320 ಕಿಮೀ ಮೀರಿತ್ತು. ಈ ವೇಗ ವಾಣಿಜ್ಯ ವಿಮಾನಗಳಲ್ಲಿ ಪ್ರತಿ ಗಂಟೆಗೆ 260 ಕಿಮೀ ಮತ್ತು ಸಾಮಾನ್ಯ ಯುದ್ಧ ವಿಮಾನಕ್ಕೆ ಹೋಲಿಸಿದರೆ ಪ್ರತಿ ಗಂಟೆಗೆ 280 ಕಿಮೀ ಇರುತ್ತದೆಂದು ಅಂದಾಜಿಸಲಾಗಿದೆ.

ಪುಷ್ಪಕ್ ಭೂಮಿಗೆ ಲ್ಯಾಂಡ್ ಆದ ಕೂಡಲೇ ವೇಗ ಕಡಿಮೆ ಮಾಡಲು ಬ್ರೇಕ್ ಪ್ಯಾರಾಚೂಟ್ ಬಳಸಿದ್ದು, ಈ ವೇಳೆ ಸುಮಾರು 100 ಕಿಮೀ ವೇಗ ತಗ್ಗಿತು. ಆನಂತರ ಲ್ಯಾಂಡಿಂಗ್ ಗೇರ್ ಬ್ರೇಕ್‍ಗಳನ್ನು ಬಳಸಿ ಮತ್ತಷ್ಟು ನಿಧಾನಗೊಳಿಸಲಾಯಿತು. ರನ್‍ವೇ ಉದ್ದಕ್ಕೂ ಸ್ಥಿರ ಮತ್ತು ನಿಖರವಾಗಿ ನೋಸ್ ವೀಲ್ ಸೇರಿಂಗ್ ಮೂಲಕ ಸಾಗಿತು.

ಅತ್ಯಂತ ನಿರ್ಣಾಯಕ ತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಂಡು ಈ ಕಾರ್ಯಾಚರಣೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿದೆ ಎಂದು ಎಕ್ಸ್ ಖಾತೆಯಲ್ಲಿ ವಿವರಿಸಿದೆ.

ಈ ಕಾರ್ಯಾಚರಣೆಯಲ್ಲಿ VSSC ನೇತೃತ್ವದ ಮಿಷನ್, ಭಾರತೀಯ ವಾಯುಪಡೆ (IAF), ಏರೋನಾಟಿಕಲ್ ಡೆವಲಪ್‍ಮೆಂಟ್ ಎಸ್ಟಾಬ್ಲಿಷ್‌ಮೆಂಟ್(ADE), ವೈಮಾನಿಕ ವಿತರಣಾ ಸಂಶೋಧನೆ ಮತ್ತು ಅಭಿವೃದ್ಧಿ ಸ್ಥಾಪನೆ(ADRDE) ಬೆಂಬಲದೊಂದಿಗೆ ISRO ಕೇಂದ್ರಗಳಾದ SAC, ISTRAC, SDSC-SHAR ಒಳಗೊಂಡ ಸಹಕಾರ ಪಡೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಹಳೆ ಪಿಂಚಣಿ ಯೋಜನೆಗೆ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ತೀವ್ರ ಹೋರಾಟ: ಭೋಜೇಗೌಡ ಎಚ್ಚರಿಕೆ

ಮರುಬಳಕೆಯ ರಾಕೆಟ್ ಪುಷ್ಪಕ್ ಯಶಸ್ವಿ ಲ್ಯಾಂಡಿಂಗ್ ಆಗಿದ್ದು, ಇದೊಂದು ಸರಣಿ ಯಶಸ್ಸಿನ ಕಾರ್ಯಾಚರಣೆ. ಇದರಲ್ಲಿ ಭಾಗಿಯಾಗಿರುವ ಎಲ್ಲ ವಿಜ್ಞಾನಿಗಳ ತಂಡಕ್ಕೆ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅಭಿನಂದಿಸಿದ್ದಾರೆ.

VSSC ನಿರ್ದೇಶಕ ಡಾ ಎಸ್ ಉನ್ನಿಕೃಷ್ಣನ್ ನಾಯರ್, “ಈ ಸ್ಥಿರ ಯಶಸ್ಸು ಭವಿಷ್ಯದ ಕಕ್ಷೆಯ ಮರುಪ್ರವೇಶ ಕಾರ್ಯಾಚರಣೆಗಳಿಗೆ ಅಗತ್ಯವಾದ ನಿರ್ಣಾಯಕ ತಂತ್ರಜ್ಞಾನಗಳಲ್ಲಿ ಇಸ್ರೋ ಸಂಸ್ಥೆಯ ವಿಶ್ವಾಸವನ್ನು ಹೆಚ್ಚಿಸುತ್ತದೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...