ಚಿತ್ರದುರ್ಗ | ಲೋಕಾಯುಕ್ತ ಎಡಿಜಿಪಿ ವಿರುದ್ಧ ಜೆಡಿಎಸ್‌ ಕಾರ್ಯಕರ್ತರಿಂದ ಪ್ರತಿಭಟನೆ

Date:

ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳದ ಮುಖ್ಯಸ್ಥ, ಎಡಿಜಿಪಿ ಎಂ.ಚಂದ್ರಶೇಖರ್ ಅವರನ್ನು ಕೂಡಲೇ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಜೆಡಿಎಸ್‌ ಕಾರ್ಯಕರ್ತರು ಧರಣಿ ನಡೆಸಿದರು.

ಚಿತ್ರದುರ್ಗ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಕೇಡರ್ ಸೆಂಟ್ರಲ್ ಪ್ರಾಧಿಕಾರ, ಕೇಂದ್ರ ಗೃಹ ಸಚಿವಾಲಯಕ್ಕೆ ಪ್ರಸ್ತಾವನೆ ಕಳುಹಿಸಿ, ಶಿಫಾರಸ್ಸು ಮಾಡುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಹಂದಿಗಳ ಜೊತೆ ಗುದ್ದಾಡಿದರೆ ಮೈಯೆಲ್ಲಾ ಕೊಚ್ಚೆಯಾಗುತ್ತದೆಂಬ ಕೀಳು ಪದಗಳನ್ನು ಬಳಸಿದ್ದಾರೆ. ಕೇಂದ್ರ ಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ದುರಹಂಕಾರದ ಮಾತುಗಳನ್ನು ಆಡಿದ್ದಾರೆ. ಹಾಗಾಗಿ, ಎ.ಡಿ.ಜಿ.ಪಿ. ಎಂ.ಚಂದ್ರಶೇಖರ್ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತುಪಡಿಸಿ ತನಿಖೆ ಒಳಪಡಿಸುವಂತೆ ಜೆಡಿಎಸ್‌ ಕಾರ್ಯಕರ್ತರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಯಚೂರು | ರೈತರು ಬೆಳೆದ ಬೆಳೆಗಳ ನಾಶ: ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ರೈತರ ಒತ್ತಾಯ

ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ.ಜಯಣ್ಣ, ದಾವಣಗೆರೆ ಜಿಲ್ಲಾ ಉಸ್ತುವಾರಿ ಡಿ.ಯಶೋಧರ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿನಾಯಕ, ಉಪಾಧ್ಯಕ್ಷ ಮಠದಟ್ಟಿ ವೀರಣ್ಣ, ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಉಪಾಧ್ಯಕ್ಷ ಮಠದಟ್ಟಿ ವೀರಣ್ಣ, ತಾಲ್ಲೂಕು ಅಧ್ಯಕ್ಷ ಸಣ್ಣತಿಮ್ಮಣ್ಣ, ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಯುವ ಘಟಕದ ಜಿಲ್ಲಾಧ್ಯಕ್ಷ ಓ. ಪ್ರತಾಪ್‍ಜೋಗಿ, ಮಂಜಣ್ಣ, ನಗರಸಭೆ ಸದಸ್ಯರುಗಳಾದ ದೀಪು, ನಸ್ರುಲ್ಲಾ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಬ್ಬು, ವೀರಭದ್ರಣ್ಣ, ಕರಿಬಸಪ್ಪ, ರುದ್ರಣ್ಣ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...