ಚಿತ್ರದುರ್ಗ | ಕವಾಡಿಗರ ಹಟ್ಟಿ ನೀರು ಕುಡಿಯಲು ಯೋಗ್ಯವಾಗಿಲ್ಲ; ಮಾದರಿಗಳ ಫಲಿತಾಂಶ

Date:

ಚಿತ್ರದುರ್ಗದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಇದೂವರೆಗೂ 90 ಮಂದಿ ಆಸ್ಪತ್ರೆ ಸೇರಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ. ಭೀರಕ ಪರಿಸ್ಥಿತಿಯ ನಡುವೆ ಅಲ್ಲಿನ ನೀರಿನ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಐದು ಮಾದರಿಗಳ ಪೈಕಿ, ನಾಲ್ಕು ಮಾದರಿಗಳ ಫಲಿತಾಂಶ ಆ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಹೇಳಿವೆ.

ನೀರಿನ ಮಾದರಿಗಳನ್ನು ಪರೀಕ್ಷಿಸಿದ ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಪ್ರಕರಣ ಹೊರಡಿಸಿದೆ. “ಗ್ರಾಮದಲ್ಲಿ ಸಂಗ್ರಹಿಸಲಾಗಿದ್ದ ನೀರಿನ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅಲ್ಲಿನ ನೀರು ಕುಡಿಯಲು ಯೋಗ್ಯವಾಗಿಲ್ಲ. ಅಲ್ಲದೆ, ಮಲದ ಮಾದರಿಯನ್ನು ಪರೀಕ್ಷಿಸಲಾಗಿದ್ದು, ‘ವೈಬ್ರಿಯೋ ಸ್ಪೀಸಿಸ್ ಪಾಸಿಟಿವ್’ ಕಂಡುಬಂದಿದೆ” ಎಂದು ಹೇಳಿದೆ.

ಸದ್ಯ ಗ್ರಾಮಕ್ಕೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಕರ್ತವ್ಯ ಲೋಪ ಎಸಗಿರುವ ನಗರ ನೀರು ಸರಬರಾಜು ವಿಭಾಗದ ಇಂಜಿನಿಯರ್ ಸೇರಿದಂತೆ ಇವರು ನೌಕರರನ್ನು ಅಮಾನತು ಮಾಡಲಾಗಿದೆ. ಪೊಲೀಸರು, ಕಂದಾಯ ಇಲಾಖೆ ಸಿಬ್ಬಂದಿ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳು ಗ್ರಾಮದಲ್ಲಿ ಬೀಡುಬಿಟ್ಟಿದ್ದಾರೆ. ಜಿಲ್ಲಾಡಳಿತದಿಂದ ಕವಾಡಿಗರ ಹಟ್ಟಿಯ ನಾಗರಿಕರಿಗೆ ಫುಡ್ ಕಿಟ್‌ಗಳನ್ನು ವಿತರಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...