ಚಿತ್ರದುರ್ಗ | ಕೆಎಸ್‌ಆರ್‌ಟಿಸಿ ಬಸ್-ಲಾರಿ ನಡುವೆ ಭೀಕರ ಅಪಘಾತ; ಐವರ ಸಾವು

Date:

ಕೆಎಸ್‌ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತವಾಗಿದ್ದು, ಬಸ್‌ನಲ್ಲಿದ್ದ ಐವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದಿದೆ.

ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಐದು ವರ್ಷದ ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಪಾರ್ವತಮ್ಮ(45) ಮತ್ತು ಮಾಬಮ್ಮ (35), ರಾಯಚೂರು ಜಿಲ್ಲೆಯ ಮಸ್ಕಿ ಮೂಲದ ರಮೇಶ್(40) ಮತ್ತು ರವಿ(23), ಮಾನ್ವಿಯ ನರಸಣ್ಣ(5) ಮೃತ ದುರ್ದೇವಿಗಳು. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಸ್ಥಿತಿಯಲ್ಲಿದ್ದ ಮೂವರು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಬಸ್‌ನಲ್ಲಿದ್ದ 6ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರ ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಐಮಂಗಲ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಬಳಿ ಭೀಕರ ಅಪಘಾತ

ಈ ಘಟನೆಯ ಕುರಿತು ಕರ್ನಾಟಕ, ಬೆಂಗಳೂರು ಸಂಚಾರ ಮತ್ತು ರಸ್ತೆ ಸುರಕ್ಷತೆ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಕುಮಾರ್‌ ಅವರು ಟ್ವೀಟ್‌ ಮಾಡಿದ್ದು, “ನೀವು ಬಸ್ಸನ್ನು ಊಹಿಸಬಲ್ಲಿರಾ?. ಕೆಎಸ್ಆರ್ಟಿಸಿ ಬಸ್ಸೊಂದು ಲಾರಿಯನ್ನು ಓವರ್‌ಟೇಕ್ ಮಾಡಲು ಯತ್ನಿಸಿದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಾಲಕನ ಅಜಾರುಕತೆಯಿಂದ ಈ ದುರಂತವಾಗಿದ್ದು, ಚಾಲಕನ ಡಿಎಲ್ ವಶಪಡಿಸಿಕೊಳ್ಳಲಾಗಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಿಜಗುಣಾನಂದರಿಗೆ ಜೀವ ಬೆದರಿಕೆ; ಸ್ವಾಮಿಗಳ ಜೊತೆ ನಾವಿದ್ದೇವೆ ಎಂದ ಕರ್ನಾಟಕ

“ಓವರ್‌ಟೇಕ್ ಮಾಡುವಾಗ ದಯವಿಟ್ಟು ಇಂಡಿಕೇಟರ್ ಹಾಕಿ ಮತ್ತು ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಿ” ಎಂದು ಸಲಹೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...