ಚಿತ್ರದುರ್ಗ | ನಕ್ಷತ್ರ ಆಮೆಗಳ ಬೇಟೆಯಾಡುತ್ತಿದ್ದ ಆರೋಪಿಗಳ ಬಂಧನ

Date:

ಆಮೆಯನ್ನು ಪೂಜಿಸಿದರೆ ಅದೃಷ್ಟ ಖುಲಾಯಿಸುತ್ತದೆ ಎಂಬ ಮೂಡನಂಬಿಕೆ ಜನರಲ್ಲಿ ಬೇರೂರಿದೆ. ಹೀಗಾಗಿ, ಅಳಿವಿನ ಅಂಚಿನಲ್ಲಿರುವ ನಕ್ಷತ್ರ ಆಮೆಗಳ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ಇಂತದ್ದೇ ಒಂದು ಪ್ರಕರಣ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಹೊಸದುರ್ಗ ತಾಲೂಕಿನ ಕಂಚೀಪುರ ಸಮೀಪದ ಕುದುರೆ ಕಣಿವೆ ಗುಡ್ಡಗಾಡು ಪ್ರದೇಶದಲ್ಲಿ ನಕ್ಷತ್ರ ಆಮೆಗಳನ್ನು ಹಿಡಿಯುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಬಳಿ ಇದ್ದ32 ನಕ್ಷತ್ರ ಆಮೆಗಳನ್ನು ರಕ್ಷಣೆ ಮಾಡಿದ್ದಾರೆ.

ಕಂಚಿಪುರ ಗ್ರಾಮದ ಹೊರ ವಲಯದಲ್ಲಿ ಶನಿವಾರ ವಾಹನವನ್ನು ನಿಲ್ಲಿಸಿಕೊಂಡು ಅನುಮಾನಸ್ಪದವಾಗಿ ಓಡಾಡುತ್ತಿದ್ದ ಅಪರಿಚಿತರನ್ನು ಗಮನಿಸಿದ ಸ್ಥಳಿಯರು ಶ್ರೀರಾಂಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು, ನಕ್ಷತ್ರ ಆಮೆಗಳನ್ನು ಬೇಟಿಯಾಡುತ್ತಿದ್ದರನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಧಿತ ಆರೋಪಿಗಳಲ್ಲಿ ಚಿಕ್ಕಬಳ್ಳಾಪುರ ಮೂಲದ ಮೂವರು ಹಾಗೂ ಕೋಲಾರ ಮೂಲದ ಒಬ್ಬ ಸೇರಿ ಒಟ್ಟು ನಾಲ್ವರಿದ್ದಾರೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವಲಯ ಅರಣ್ಯಧಿಕಾರಿ ಸುನಿಲ್‍ಕುಮಾರ್, “ಮಾರಿಕಣಿವೆ ಹಾಗೂ ಲಕ್ಕಿಹಳ್ಳಿ ಅರಣ್ಯ ಪ್ರದೇಶಗಳ ವ್ಯಾಪ್ತಿಯಲ್ಲಿ ನಕ್ಷತ್ರ ಆಮೆಗಳಿದ್ದು ಅಳಿವಿನ ಅಂಚಿನಲ್ಲಿವೆ. ನಮ್ಮ ಜನರಲ್ಲಿದ್ದು ಇವುಗಳು ವಿಷ್ಣುವಿನ ವಾಹನಗಳು ಎಂಬ ನಂಬಿಕೆ ಇದೆ. ಅವುಗಳನ್ನು ಮನೆಯಲ್ಲಿ ಪೂಜಿಸಿದರೆ ಒಳ್ಳೆಯದಾಗುವುದೆಂಬ ನಂಬಿಕೆ ಇರುವುದರಿಂದ ಇವುಗಳಿಗೆ ಹೆಚ್ಚಿನ ಬೇಡಿಕೆ ಇದೆ ಹಾಗಾಗಿ. ಇವುಗಳನ್ನು ಹಿಡಿದು ಮಾರಾಟ ಮಾಡಲಾಗುತ್ತದೆ. ಈ ಪ್ರಭೇದದ ಪ್ರಾಣಿಗಳು ಅಳಿವಿನ ಅಂಚಿನಲ್ಲಿರುವುದರಿಂದ ಇವುಗಳನ್ನು ಸಂರಕ್ಷಿಸುವುದು ಎಲ್ಲರ ಹೊಣೆಯಾಗಿದೆ” ಎಂದು ಹೇಳಿದ್ದಾರೆ.

ವಶಕ್ಕೆ ಪಡೆಯಲಾದ 32 ನಕ್ಷತ್ರ ಆಮೆಗಳನ್ನು ಚಿತ್ರದುರ್ಗದ ಆಡುಮಲ್ಲೇಶ್ವರ ಮೃಗಾಲಯದಲ್ಲಿ ಸಂರಕ್ಷಣೆ ಮಾಡುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...