ಚಿತ್ರದುರ್ಗ | ಬಗರ್ ಹುಕುಂ ಭೂಮಿ ಮಂಜೂರಾತಿಗೆ ಹೋರಾಟ ಅಗತ್ಯ: ಪ್ರಜಾಶಕ್ತಿ ವೇದಿಕೆ ಬೋರಯ್ಯ

Date:

ರಾಜ್ಯದಲ್ಲಿ ಲಕ್ಷಾಂತರ ಮಂದಿ ರೈತರು ಬಗರ್‌ ಹುಕುಂ ಭೂಮಿಯ ಮಂಜೂರಾತಿಗೆ ಅರ್ಜಿ ಸಲ್ಲಿಸಿದ್ದು, ಸರ್ಕಾರದ ಗಮನಸೆಳೆಯಲು ಇವರೆಲ್ಲರ ಹೋರಾಟ ಅಗತ್ಯವಿದೆ ಎಂದು ಪ್ರಜಾಶಕ್ತಿ ವೇದಿಕೆ ಬೋರಯ್ಯ ಅಭಿಪ್ರಾಯಪಟ್ಟರು.

ಚಿತ್ರದುರ್ಗ ಜಿಲ್ಲಾ ಬಗರ್ ಹುಕುಂ ಸಾಗುವಳಿದಾರರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಸಕ್ರಮ ಸಾಗುವಳಿದಾರರ ಪಹಣಿ, ಸಾಗುವಳಿ ಪತ್ರ ವಿತರಣೆಗೆ ಸಂಬಂಧಿಸಿದಂತೆ ಮುಂದಿನ ಹೋರಾಟಗಳ ಬಗ್ಗೆ ರೂಪುರೇಷೆಗಳನ್ನು ನಿರ್ಧರಿಸುವ ಅಗತ್ಯವಿದೆ. ಬಗರ್ ಹುಕುಂ ಅರ್ಜಿಗಳಿಗೆ ಸಂಬಂಧಿಸಿದಂತೆ ಜಿಲ್ಲೆ, ತಾಲೂಕು ಮತ್ತು ರಾಜ್ಯದ ಕಂದಾಯ ಇಲಾಖೆಯ ಅಂಕಿ ಅಂಶಗಳಲ್ಲಿ ಲೋಪ ದೋಷಗಳಿವೆ. ತಾಲೂಕು ಮಟ್ಟದ ಸಮಿತಿಗಳು ನಾಮಕಾವಸ್ತೆ ಅಂಕಿ ಅಂಶಗಳನ್ನು ತೋರಿಸುತ್ತಿವೆ. ನೈಜ ಸಕ್ರಮ ಸಾಗುವಳಿದಾರರಿಗೆ ಸಾಗುವಳಿ ಚೀಟಿ, ಪಹಣಿ ವಿತರಣೆ ಕೆಲಸವಾಗುತ್ತಿಲ್ಲ. ಈ ಬಗ್ಗೆ ಮುಖ್ಯ ಅಂಕಿ ಅಂಶಗಳನ್ನು ಕ್ರೂಢೀಕರಿಸಿ ಮುಂದಿನ ಹೋರಾಟಕ್ಕೆ ಸಿದ್ಧರಾಗಿ, ಸಕ್ರಮ ರೈತರ ಸಾಗುವಳಿ ಪಹಣಿಗೆ ಹೋರಾಟ ಮಾಡಬೇಕಿದೆ” ಎಂದು ಕರೆ ನೀಡಿದರು.

WhatsApp Image 2025 01 13 at 1.37.11 PM

ಸಭೆಯಲ್ಲಿ ನವಯಾನ ಬುದ್ಧ ಸಂಘದ ಮುಖ್ಯಸ್ಥ ಪ್ರೊ. ಸಿ ಕೆ ಮಹೇಶ್ವರಪ್ಪ ಮಾತನಾಡಿ, “ಭೂಮಿ ಸೇರಿದಂತೆ ಉದ್ದಿಮೆಗಳು ಕೇಂದ್ರೀಕೃತವಾಗದೆ ರಾಷ್ಟ್ರೀಕರಣವಾಗಬೇಕು ಎಂಬುದು ಸಂವಿಧಾನದಲ್ಲಿ ಉಲ್ಲೇಖವಾಗಿದೆ. ಸಾಮೂಹಿಕ ಬೇಸಾಯ ಪದ್ಧತಿ ಜಾರಿಯಲ್ಲಿರಬೇಕು. ಅದರಿಂದ ಬಂದ ಉತ್ಪನ್ನಗಳನ್ನು ಎಲ್ಲ ವರ್ಗದ ಜಾತಿ ಧರ್ಮದ ಜನ ಹಂಚಿಕೊಂಡು ತಿನ್ನಬೇಕು. ಇದು ಅಂಬೇಡ್ಕರ್ ಅವರ ಆಶಯವಾಗಿತ್ತು. ಭೂಮಿ ಎನ್ನುವುದು ಒಂದು ಕೇಂದ್ರೀಕೃತ ವ್ಯವಸ್ಥೆಯಾಗುತ್ತದೆ. ಇದನ್ನು ಕೇಂದ್ರವಾಗಿಟ್ಟುಕೊಂಡು ಅದರ ಒಡೆತನವನ್ನು ಸಾಧಿಸಿದವರು ಆರ್ಥಿಕ, ರಾಜಕೀಯವಾಗಿ ಸಬಲರಾಗುತ್ತಾರೆ. ಹೀಗಾಗಿಯೇ ಕೃಷಿ ಭೂಮಿ ಸಮಾನ ಹಂಚಿಕೆಯಾಗಬೇಕು ಎಂಬುದು ಸಂವಿಧಾನದ ಆಶಯವಾಗಿದೆ. ಮುಂದಿನ ದಿನಗಳಲ್ಲಿ ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲ ವರ್ಗದವರಿಗೂ ಸಮಾನ ಕೃಷಿ ಭೂಮಿ ಹಂಚಿಕೆಯಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಚಿತ್ರದುರ್ಗ | ಸಾಣೆಹಳ್ಳಿ ಶ್ರೀ ವಿರಚಿತ ‘ಮೋಳಿಗೆ ಮಾರಯ್ಯ’ ಕಿರುನಾಟಕ ಯಶಸ್ವಿ ಪ್ರದರ್ಶನ

ಸಭೆಯಲ್ಲಿ ಮಾಧ್ಯಮ ಅಕಾಡೆಮಿ ಸದಸ್ಯ ಪತ್ರಕರ್ತ ಆಹೋಬಲಪತಿ, ಹೊಳೆಯಪ್ಪ, ರಾಜಣ್ಣ ಲಕ್ಷ್ಮಿಸಾಗರ, ದಸಂಸದ ದುರುಗೇಶ್, ಗೋನೂರು ಹನುಮಂತಪ್ಪ, ಮದಕರಿಪುರ ಸೂರಣ್ಣ, ನೆಲಗೇತನಹಟ್ಟಿ ಬೋರಯ್ಯ, ಹಿರಿಯೂರು ಹುಸೇನ್, ಯಾದವ್ ಹೊಸದುರ್ಗ, ಚಿಕ್ಕುಳ್ಳಾರ್ತಿ ತಿಪ್ಪಯ್ಯ, ನಿಂಗಪ್ಪ, ಗೌನಹಳ್ಳಿ ಈರಣ್ಣ ಕರಿಯಪ್ಪ ಮತ್ತು ಚಿತ್ರದುರ್ಗ ಜಿಲ್ಲೆಯ ಎಲ್ಲ ತಾಲೂಕಿನ ನೂರಾರು ಅರಣ್ಯ ಮತ್ತು ಬಗರ್ ಹುಕುಂ ಸಾಗುವಳಿದಾರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...