ಚಿತ್ರದುರ್ಗ | ನಾಯಿ ಕಚ್ಚಿದ ಸ್ಥಿತಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ; ಖಾಸಗಿ ಶಾಲೆ ಸಿಬ್ಬಂದಿ ಪೊಲೀಸರಿಗೆ ದೂರು

Date:

ನಾಯಿಯೊಂದು ನವಜಾತ ಶಿಶುವಿನ ದೇಹವನ್ನು ಕಚ್ಚಿ ಖಾಸಗಿ ಶಾಲೆಯ ಆವರಣವನ್ನು ಪ್ರವೇಶಿಸಿದ್ದು, ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ನಾಯಿಯನ್ನು ಓಡಿಸಿ ಮಗುವಿನ ದೇಹವನ್ನು ಬಿಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಚಿತ್ರದುರ್ಗ ನಗರದ ಚಳ್ಳಕೆರೆಯ ಗೇಟ್ ಬಳಿ ನಾಯಿಯೊಂದು ನವಜಾತ ಶಿಶುವಿನ ದೇಹವನ್ನು ಕಚ್ಚಿಕೊಂಡು ತಿರುಗಾಡಿರುವ ಘಟನೆ ನಡೆದಿದೆ. ನಾಯಿಯು ಶಾಲೆಯ ಆವರಣದೊಳಗೆ ಬಂದಿದ್ದು ಭದ್ರತಾ ಸಿಬ್ಬಂದಿ ಬೆದರಿಸಿದಾಗ ಅರ್ಧಂಬರ್ಧ ಇರುವ ನವಜಾತ ಶಿಶುವಿನ ದೇಹವನ್ನು ಬಿಟ್ಟು ಓಡಿಹೋಗಿದೆ.

ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬಡಾವಣೆ ಪೊಲೀಸ್ ಠಾಣೆ ಅಧಿಕಾರಿಗಳು, ಸಿಬ್ಬಂದಿಗಳು ತನಿಖೆ ಕೈಗೊಂಡಿದ್ದಾರೆ. ನಾಯಿ ಕಚ್ಚಿ ಹಿಡಿದಿದ್ದ ದೇಹವು ಅರ್ಧ ಮಾತ್ರ ಇದ್ದು ಇನ್ನರ್ಧ ಕೆಳಗಿನ ಭಾಗವನ್ನು ನಾಯಿ ತಿಂದಿರಬಹುದು ಎಂದು ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಗು ಎರಡರಿಂದ ಮೂರು ದಿನಗಳ ಹಿಂದೆ ಜನಿಸಿರಬಹುದೆಂದು ಅಂದಾಜಿಸಲಾಗಿದೆ. ಮೃತಪಟ್ಟ ಮಗುವನ್ನು ಅಥವಾ ಜೀವಂತ ಶಿಶುವನ್ನು ಪೋಷಕರೇ ಎಲ್ಲೋ ಎಸೆದು ಹೋಗಿರಬಹುದು. ಇದರಿಂದ ಮಗುವಿನ ದೇಹ ನಾಯಿಗಳಿಗೆ ಸಿಕ್ಕಿದೆ. ನಂತರ ನಾಯಿಯ ಬಾಯಿಗೆ ಆಹಾರವಾಗಿ ದೇಹ ಛಿದ್ರವಾಗಿರಬಹುದು” ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

“ಶಿಶುವಿನ ಉಳಿದ ದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಶಿಶುವಿನ ಕೆಳಗಿನ ಅರ್ಧಭಾಗ ಇಲ್ಲದಿರುವುದರಿಂದ ಮಗು ಗಂಡು ಅಥವಾ ಹೆಣ್ಣೋ ಎಂದು ಗುರುತಿಸಲು ಸಾಧ್ಯವಾಗಿಲ್ಲ. ಲಿಂಗ, ಗುರುತು ಪತ್ತೆಗೆ ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆ, ಡಿಎನ್ಎ ವರದಿ ಮತ್ತು ತನಿಖೆ ವರದಿ ನಂತರವೇ ಸತ್ಯಾಸತ್ಯತೆ ತಿಳಿಯಲಿದೆ.‌ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ” ಎಂದು ಬಡಾವಣೆ ಠಾಣೆ ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...