ಚಿತ್ರದುರ್ಗ | ನಿಧಿ ಆಸೆಗಾಗಿ ಪರಿಚಯಸ್ಥನನ್ನು ಕರೆದೊಯ್ದು ಬಲಿ ಕೊಟ್ಟ ದುರುಳರು

Date:

ನರಬಲಿ ಕೊಟ್ಟರೆ ನಿಧಿ ದೊರೆಯುತ್ತದೆ ಎಂದು ವಾಮಾಚಾರಿಯೊಬ್ಬ ಹೇಳಿದ್ದು, ಆತನ ಮಾತನ್ನು ನಂಬಿದ ಇಬ್ಬರು ಆಸೆಬುರುಕ ದುರುಳರು ತಮ್ಮ ಪರಿಯಸ್ಥನನ್ನು ಕರೆದೊಯ್ದು ಬಲಿ ಹೆಸರಿನಲ್ಲಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ಘಟನೆ ನಡೆದಿದೆ. ವಾಮಾಚಾರಿ ರಾಮಕೃಷ್ಣ ಮತ್ತು ಆನಂದ ರೆಡ್ಡಿ ಎಂಬವರು ಕೃತ್ಯ ಎಸಗಿದ್ದಾರೆ. ಈ ಇಬ್ಬರು ದುರುಳರು ತಮಗೆ ಪರಿಚಯವಿದ್ದ, ಚಪ್ಪಲಿ ಹೊಲೆಯುವ ಕೆಲಸ ಮಾಡುತ್ತಿದ್ದ ಪ್ರಭಾಕರ್ ಎಂಬವರನ್ನು ಕರೆದೊಯ್ದು, ಕೊಲೆ ಮಾಡಿದ್ದಾರೆ.

ಆನಂದ ರೆಡ್ಡಿಗೆ ವಾಮಾಚಾರಿ ರಾಮಕೃಷ್ಣ ಗ್ರಾಮದ ಪಶ್ಚಿಮ ದಿಕ್ಕಿನಲ್ಲಿ ನರಬಲಿ ಕೊಟ್ಟರೆ ನಿಧಿ ಸಿಗುತ್ತದೆ ಎಂದು ಆಮಿಷವೊಡ್ಡಿದ್ದಾನೆ. ಆತನ ಮೌಢ್ಯದ ಆಮಿಷಕ್ಕೆ ಒಳಗಾಗಿ ಆನಂದ ರೆಡ್ಡಿ ತನಗೆ ಪರಿಚಯವಿದ್ದ ಪ್ರಭಾಕರ್‌ನನ್ನು ಡ್ರಾಪ್‌ ಕೊಡುವ ನೆಪದಲ್ಲಿ ಕೊರೆದೊಯ್ದು, ಬಲಿ ಹೆಸರಿನಲ್ಲಿ ಹತ್ಯೆ ಮಾಡಿದ್ದಾರೆ. ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಆನಂದ ರೆಡ್ಡಿ ಮೂಲತಃ ಆಂಧ್ರಪ್ರದೇಶದ ಕಲ್ಯಾಣದುರ್ಗ ಬಳಿಯ ಕುಂದುರ್ಪಿ ಗ್ರಾಮದವನು. ಆತ ಕರ್ನಾಟಕದಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ, ಜಿಲ್ಲೆಗಳಿಂದ ಜಿಲ್ಲೆಗಳಿಗೆ ಓಡಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...