ಚಿತ್ರದುರ್ಗ | ಶಿಕ್ಷಣವಿಲ್ಲದೆ ಯಾವುದೇ ಸಮಾಜದ ಏಳಿಗೆಯಾಗುವುದಿಲ್ಲ: ಈಶ್ವರಾನಂದಶ್ರೀ

Date:

ಯಾವುದೇ ಸಮುದಾಯಗಳು ಮುಂದುವರೆಯಬೇಕೆಂದರೆ ಶಿಕ್ಷಣದಲ್ಲಿ ಮುಂದೆ ಬರಬೇಕು. ಶಿಕ್ಷಣದಲ್ಲಿ ಜಾಗೃತಿ ಇರಬೇಕು. ಶಿಕ್ಷಣವಿಲ್ಲದೇ ಸಮಾಜಗಳು ಏಳಿಗೆಯಾಗುವುದಿಲ್ಲ. ಇತ್ತೀಚೆಗೆ ಹಿಂದುಳಿದ ಸಮುದಾಯಗಳಲ್ಲಿಯೂ ಶಿಕ್ಷಣದ ಬಗ್ಗೆ ಜಾಗೃತಿಯಾಗುತ್ತಿದೆ ಎಂದು ಕನಕ ಗುರುಪೀಠದ ಈಶ್ವರಾನಂದಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ತಾಲೂಕು ಕನಕ ನೌಕರರ ಕ್ಷೇಮಾಭಿವೃದ್ದಿ ಸಂಘ ಹಾಗೂ ಜಿಲ್ಲಾ ಕುರುಬರ ಸಂಘದಿಂದ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ 2023-2024ನೇ ಸಾಲಿನಲ್ಲಿ ಕುರುಬ ಸಮಾಜದ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

“ನಮ್ಮ ಸಮುದಾಯದಲ್ಲಿ ಅನೇಕ ಪ್ರತಿಭಾವಂತರಿದ್ದರೂ ಸಮಾಜ, ಸಂಘಸಂಸ್ಥೆಗಳು ಹಾಗೂ ಸಂಘಟನೆಗಳು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಹಿಂದೆ ಬಿದ್ದಿವೆ. ತಾತ್ಸಾರ ಮನೋಭಾವನೆ ಬೇಡ. 2002ರಲ್ಲಿ ಆರಂಭಗೊಂಡ ಪ್ರತಿಭಾ ಪುರಸ್ಕಾರ ಇಲ್ಲಿಯವರೆಗೂ ಪ್ರತಿ ವರ್ಷ ನಿರಂತರವಾಗಿ ನಡೆದುಕೊಂಡು ಬರುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000404417

“ನಮ್ಮ ಸಮುದಾಯದಲ್ಲಿ ಬಡವರಿರಬಹುದು. ಆದರೆ ಪ್ರತಿಭಾವಂತರಿಗೆ ಕೊರತೆಯಿಲ್ಲ. ಅಂತಹವರನ್ನು ಗುರುತಿಸಿ ಬೆಳಕಿಗೆ ತರುವ ಕೆಲಸವಾಗಬೇಕು. ಇದಕ್ಕೆ ಹೆಚ್ಚಿನ ನೆರವು ಅಗತ್ಯವಿದೆ. ಪ್ರತಿಯೊಬ್ಬರೂ ಆರ್ಥಿಕ ನೆರವು ನೀಡಿದರೆ ಪ್ರತಿ ವರ್ಷವೂ ದೊಡ್ಡ ಮಟ್ಟದಲ್ಲಿ ಪ್ರತಿಭೆಗಳಿಗೆ ಸಹಾಯವಾಗಲಿದೆ” ಎಂದು ಮನವಿ ಮಾಡಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡದಿದ್ದರೂ ಅಧಿಕಾರಿಗಳು ವಿನಾಕಾರಣ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಕುತಂತ್ರ ಮಾಡುತ್ತಿದ್ದಾರೆ.ಹಾಗಾಗಿ ನೈತಿಕವಾಗಿ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಲ್ಲಬೇಕು. ದ್ವೇಷ ಅಸೂಯೆ ಬಿಟ್ಟು ಮೊದಲು ಸಂಘಟಿತರಾಗಿ ಧರ್ಮ, ದೇಶ ಕಾಯುವ ಸಮರ್ಥ ಮಕ್ಕಳನ್ನು ತಯಾರು ಮಾಡಿ” ಎಂದು ಕುರುಬ ಜನಾಂಗದವರಿಗೆ ಸ್ವಾಮೀಜಿ ಕರೆ ನೀಡಿದರು.

ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಮಾತನಾಡಿ, “ಪ್ರತಿ ಮಗುವಿನಲ್ಲಿರುವ ಪ್ರತಿಭೆ ಗುರುತಿಸುವ ಕೆಲಸ ಮಾಡಬೇಕು. ಅಂಕಗಳು ಮಾನದಂಡವಾಗುವ ಬದಲು ಸಾಮರ್ಥ್ಯವನ್ನು ಗುರುತಿಸಬೇಕು. ಮಕ್ಕಳಿಗೆ ಗುರು ಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಬೇಕು. ಇಂದು ಮಕ್ಕಳು ಮೊಬೈಲ್, ಫೇಸ್‌ಬುಕ್‌, ವಾಟ್ಸಾಪ್ ವ್ಯಾಮೋಹಕ್ಕೆ ಒಳಗಾಗುತ್ತಿದ್ದು, ಪೋಷಕರು, ಶಿಕ್ಷಕರು ಅದರಿಂದ ಅವರನ್ನು ಹೊರತರಬೇಕು” ಎಂದು ಸಲಹೆ ನೀಡಿದರು.

ಜಿಲ್ಲಾ ಕುರುಬರ ಸಂಘದ ಕಾರ್ಯದರ್ಶಿ ಬಿ ಟಿ ಜಗದೀಶ್ ಮಾತನಾಡಿ, “ಡಾ.ಅಂಬೇಡ್ಕರ್ ಅವರ ಘೋಷವಾಕ್ಯದಂತೆ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಎಲ್ಲ ಸಮಾಜಗಳು ಒತ್ತುಕೊಡಬೇಕು. ಬಡತನ ದಾರಿದ್ರ್ಯದಿಂದ ಹೊರಬರಲು ಶಿಕ್ಷಣವೊಂದೇ ದಾರಿ. ಅದರಿಂದ ಶಿಕ್ಷಣದ ಬಗ್ಗೆ ಜಾಗೃತಿ ಹೊಂದಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷೆ ರಜಿನಿ ಲೇಪಾಕ್ಷಿ, ಕುರುಬರ ಸಂಘದ ಮಹಿಳಾಧ್ಯಕ್ಷೆ ಎನ್ ಎಂ ಪುಷ್ಪವಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣುಪ್ರಸಾದ್, ಡಾ. ರೇಖಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಆರ್.ಮಂಜುನಾಥ್ ಸೇರಿದಂತೆ ಇತರ ಮುಖಂಡರು ಹಾಗೂ ಸಮಾಜ ಬಾಂಧವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...