ಚಿತ್ರದುರ್ಗ | ಅಲೆಮಾರಿ, ಅರೆ ಅಲೆಮಾರಿಗಳಿಗೂ ಭೂಮಿ, ವಸತಿ ಸಿಗಬೇಕು: ಡಾ. ಸಿ ಎಸ್ ದ್ವಾರಕಾನಾಥ್

Date:

ಕರ್ನಾಟಕಾದ್ಯಂತ ಅಲೆಮಾರಿ ಸಮುದಾಯಗಳು ಪ್ರಸ್ತುತದಲ್ಲಿಯೂ ಟೆಂಟ್‌ಗಳಲ್ಲಿ ವಾಸವಾಗಿದ್ದು, ಟೆಂಟ್ ಮುಕ್ತ ರಾಜ್ಯವಾಗಬೇಕಾದ ಅಗತ್ಯವಿದೆ. ನಿರಂತರವಾಗಿ ನಿರ್ಲಕ್ಷ್ಯಕ್ಕೊಳಪಟ್ಟಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳಿಗೆ ಸರ್ಕಾರದಿಂದ ಭೂಮಿ, ವಸತಿ ಮತ್ತು ನಾಗರಿಕ ಸೌಲಭ್ಯಗಳು ಸಿಕ್ಕಾಗ ಶೋಷಣೆಗೆ ಒಳಗಾಗಿರುವ ಜನಾಂಗದವರು ನೆಮ್ಮದಿ ಬದುಕು ಕಾಣಲು ಸಾಧ್ಯವಾಗುತ್ತದೆ ಎಂದು ಹಿಂದುಳಿದ  ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ ಎಸ್ ದ್ವಾರಕಾನಾಥ್ ಹೇಳಿದರು.

ಚಿತ್ರದುರ್ಗ ಭಾರತ್ ಸೇವಾದಳ ಸಭಾಂಗಣದಲ್ಲಿ ಅಲೆಮಾರಿ ಸಮುದಾಯ ಮತ್ತು ಕರ್ನಾಟಕ ರಾಜ್ಯ ಅಲೆಮಾರಿ, ಬುಡಕಟ್ಟು ಮಹಾಸಭಾ, ವಿಮುಕ್ತಿ ವಿದ್ಯಾ ಸಂಸ್ಥೆ ಹಾಗೂ ಕರ್ನಾಟಕ ಶಾಂತಿ ಮತ್ತು ಸೌಹಾರ್ದ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಅಲೆಮಾರಿಗಳ ಸಮಸ್ಯೆ ಮತ್ತು ಸವಾಲು” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಸರ್ಕಾರ ಅಲೆಮಾರಿ ಸಮುದಾಯದ ನೆರವಿಗೆ ಧಾವಿಸಬೇಕು. ಅಲೆಮಾರಿ ಜನಾಂಗದವರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಸಂದರ್ಶನವಿಲ್ಲದೆ, ವಸತಿಯುತ ಶಾಲೆಗಳಲ್ಲಿ ಮಕ್ಕಳಿಗೆ ಅವಕಾಶ ಕಲ್ಪಿಸುವುದು ಸೇರಿದಂತೆ ಸರ್ಕಾರ ಹೆಚ್ಚು ಆದ್ಯತೆ ನೀಡಿದರೆ ಅಲೆಮಾರಿಗಳೂ ಕೂಡ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಕಾರ್ಯಕರ್ತ ಎಪಿಡಿ ಸಂಸ್ಥೆಯ ಉಪನಿರ್ದೇಶಕ ಬಾಬು ಎಸ್ ಮಾತನಾಡಿ, “ಅಲೆಮಾರಿ ಸಮುದಾಯದಲ್ಲಿ ನಿರ್ಲಕ್ಷ್ಯಕ್ಕೊಳಗಾದವರು ಮತ್ತು ಅಲೆಮಾರಿ ಜನಾಂಗದ ವಿಶೇಷಚೇತನರಿಗೆ ಆದತ್ಯೆ ನೀಡಬೇಕಾದ ಅಗತ್ಯತೆ ಇದೆ. ಅಲೆಮಾರಿಗಳಲ್ಲಿಯೂ ಅಲೆಮಾರಿ ವಿಶೇಷಚೇತನರು ಈಗಲೂ ಹಿಂದುಳಿದ್ದಾರೆ. ಇವರನ್ನು ಸಂಘಟಿತರಾಗಿಸುವ ಕೆಲಸಗಳಾಗಬೇಕಿದೆ. ವಿಶೇಷ ಚೇತನರ ಅಗತ್ಯತೆಗಳ ಬಗ್ಗೆ ಗಮನ ಹರಿಸಲು ವಿವರವಾದ ಅಧ್ಯಯನ ನಡೆಸಲು ಸರ್ಕಾರ ಮುಂದಾಗಬೇಕಿದೆ” ಎಂದರು.

ಕೊರೊನಾ ಸಾಂಕ್ರಾಮಿಕ ಅವಧಿಯಲ್ಲಿ ದಿ ಅಸೋಸಿಯೇಷನ್ ಆಫ್ ದಿ ಪೀಪಲ್ ವಿತ್ ಡಿಸೆಬಿಲಿಟಿ(ಎಪಿಡಿ) ವತಿಯಿಂದ ಸಾವಿರಾರು ಅಲೆಮಾರಿ ಕುಟುಂಬಗಳಿಗೆ ಪಡಿತರ ಕಿಟ್ ನೀಡಿದರ ಕುರಿತು ಅವರು ಮಾಹಿತಿ ನೀಡಿದರು‌.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಬೆಳೆಹಾನಿ ಸಮೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

ಅಲೆಮಾರಿ ಸಮುದಾಯದವರ ಸಮಸ್ಯೆ ಮತ್ತು ಸವಾಲುಗಳ ಕುರಿತ ಸಂವಾದಗೋಷ್ಠಿಯಲ್ಲಿ ಅಲೆಮಾರಿ ಮತ್ತು  ಬುಡಕಟ್ಟು ಮಹಾಸಭಾದ ಅಧ್ಯಕ್ಷ ಹನುಮಂತಪ್ಪ, ಕಾರ್ಯದರ್ಶಿ ನಾಗರಾಜ್, ದಾವಣಗೆರೆ ಮುಖಂಡರುಗಳಾದ ತಿಪ್ಪೇಶಪ್ಪ, ತಿಪ್ಪಣ್ಣ, ಅಲೆಮಾರಿ ಸಮುದಾಯದ ಮುಖಂಡರಾದ ಕೆ ಎಂ ನಾಗರಾಜ್, ಬಾಬು, ಕಮಲಹಾಸನ್, ಧನಂಜಯ, ಸಿಳ್ಳೆಕ್ಯಾತರ ಸಂಘಟನೆಯ ಕೃಷ್ಣಪ್ಪ, ಬುಡ್ಗ ಜಂಗಮ ಜನಾಂಗದ ಮುಖಂಡರಾದ ಗುರುಮೂರ್ತಿ, ಸಣ್ಣಹುಸೇನಿ, ವಕೀಲರು ಮತ್ತು ಅಲೆಮಾರಿ ಸಂಘಟನೆ ಮುಖಂಡ ಪ್ರತಾಪ್‌ ಜೋಗಿ, ಕೊರಚ ಸಮುದಾಯದ ಜಿಲ್ಲಾ ಅಧ್ಯಕ್ಷ ವೈ.ಕುಮಾರ್, ಅಲೆಮಾರಿ ಸಂಘಟನೆಯ ಮಹಿಳಾ ಮುಖಂಡರು, ಕರ್ನಾಟಕ ಶಾಂತಿ ಮತ್ತು ಸೌಹಾರ್ದ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್ ಕುಮಾರ್, ಹನೀಪ್ ಕೋಟೆ, ಧಮ್ಮ ಸಾಂಸ್ಕೃತಿಕ ಕೇಂದ್ರ ಅರಣ್ಯ ಸಾಗರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...