ಚಿತ್ರದುರ್ಗ | ʼನಾನು ಕಂಡಂತೆ ಪಾರ್ಥಸಾರಥಿʼ ನೆನಪಿನ ಕಾರ್ಯಕ್ರಮ

Date:

ಪಾರ್ಥಸಾರಥಿ ಪಕ್ಷಭೇದ ಮರೆತು ನಾಡಿನಾದ್ಯಂತ ಸುತ್ತಾಡಿ ಎಲ್ಲರೊಂದಿಗೂ ಸಂಪರ್ಕವಿಟ್ಟುಕೊಂಡಿದ್ದರು. ದಲಿತರಲ್ಲಿ ಒಳಮೀಸಲಾತಿ ಕುರಿತು ಜಾಗೃತಿ ಮೂಡಿಸಿ, ಹೋರಾಟಕ್ಕೆ ಚುರುಕು ನೀಡಿದರು” ಎಂದು ಎಂಆರ್‌ಎಚ್‌ಎಸ್ ರಾಜ್ಯ ಕಾರ್ಯದರ್ಶಿ ರಾಯಚೂರಿನ ಅಂಬಣ್ಣ ಅರೋಲಿಕರ್ ಪ್ರಶಂಸೆ ವ್ಯಕ್ತಪಡಿಸಿದರು.

ಚಿತ್ರದುರ್ಗದ ಪಾರ್ಥಸಾರಥಿ ಗೆಳೆಯರ ಬಳಗದಿಂದ ರೋಟರಿ ಬಾಲಭವನದಲ್ಲಿ ಆಯೋಜಿಸಿದ್ದ ನಾನು ಕಂಡಂತೆ ಪಾರ್ಥಸಾರಥಿ ನೆನಪಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಪಂಜಾಬ್, ಹರಿಯಾಣ, ತಮಿಳುನಾಡು, ಕರ್ನಾಟಕ, ಆಂಧ್ರದಲ್ಲಿ ಹೋರಾಟ ತೀವ್ರಗೊಂಡ ಪರಿಣಾಮ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೆನೆಪದರ ವಿಚಾರ ಬೇಡ. ಏಕೆಂದರೆ ಸರ್ಕಾರ ಕೆನೆಪದರ ಮುಂದಿಟ್ಟುಕೊಂಡು ಒಳಮೀಸಲಾತಿ ಜಾರಿಗೊಳಿಸುವುದನ್ನು ತಡ ಮಾಡುಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಳಮೀಸಲಾತಿಯನ್ನು ಪಡೆದೇ ಪಡೆಯುತ್ತೇವೆಂಬ ಗಟ್ಟಿ ನಿರ್ಧಾರ ಪಾರ್ಥಸಾರಥಿಯವರದಾಗಿತ್ತು. ದಲಿತರಿಗಾಗುತ್ತಿರುವ ಅನ್ಯಾಯವನ್ನು ಎಲ್ಲಿ ಬೇಕಾದರೂ ಯಾರಿಗೆ ಬೇಕಾದರೂ ವಿವರಿಸಿ ಮನವರಿಕೆ ಮಾಡಿಕೊಡುವ ತಾಕತ್ತು ಅವರಲ್ಲಿತ್ತು. ಐಎಎಸ್ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳ ಜೊತೆ ಒಳಮೀಸಲಾತಿ ವಿಚಾರವಾಗಿ ಚರ್ಚೆ ನೆಡೆಸುತ್ತಿದ್ದರು. ಹೋರಾಟ, ಕಾಲ್ನಡಿಗೆ, ಜಾಥ ಮೂಲಕ ದಲಿತರಲ್ಲಿ ಸಂಚಲನ ಮೂಡಿಸಿದ ಪಾರ್ಥಸಾರಥಿಯ ಕನಸು ನನಸಾಗುವ ಕಾಲ ಕೂಡಿ ಬಂದಿದೆ. ಆದರೆ ಮೈಮರೆತು ಕುಳಿತುಕೊಳ್ಳಬಾರದು. ʼಒಳಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯಗಳಿಗಿದೆʼಯೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆದ್ದರಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಶೀಘ್ರ ಒಳಮೀಸಲಾತಿ ಜಾರಿಯಾಗುವಂತೆ ನೋಡಿಕೊಳ್ಳಬೇಕು” ಎಂದು ಅಭಿಪ್ರಾಯಪಟ್ಟರು.

“ಕೆನೆಪದರದ ಕುತಂತ್ರಕ್ಕೆ ಬಲಿಯಾಗುವುದು ಬೇಡ. ಒಳಮೀಸಲಾತಿಯನ್ನು ತೆಗೆದುಕೊಳ್ಳುವುದಕ್ಕೆ 75 ವರ್ಷ ಬೇಕಾಯಿತಾ? ಸುಪ್ರೀಂ ಕೋರ್ಟ್ ತೀರ್ಪಿನಿಂದ ಮಾದಿಗರಿಗೆ, ಶೋಷಿತರಿಗೆ ಗೆಲುವು ಸಿಕ್ಕಂತಾಗಿದೆ. ಇದೊಂದು ನ್ಯಾಯಯುತವಾದ ಹೋರಾಟ. ರಾಜ್ಯ ಸರ್ಕಾರ ಜಾರಿಗೊಳಿಸುತ್ತದೆಂಬ ನಂಬಿಕೆಯಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡ ಭಾರತಿ ಕುವೆಂಪು ವಿಶ್ವವಿದ್ಯಾಲಯ ಶಂಕರಘಟ್ಟದ ನಿರ್ದೇಶಕ ಡಾ. ಶಿವಾನಂದ ಕೆಳಗಿನಮನಿ ಮಾತನಾಡಿ, “ಕರ್ನಾಟಕ ದಲಿತ ಸಂಘರ್ಷ ಸಮಿತಿ ಹುಟ್ಟು ಹಾಕಿದ ಪ್ರೊ.ಬಿ.ಕೃಷ್ಣಪ್ಪನವರ ಅಧ್ಯಯನ ಪೀಠ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪನೆಯಾಗಬೇಕೆಂದು ಮೊದಲು ಧ್ವನಿಯೆತ್ತಿದ್ದೇ ಪಾರ್ಥಸಾರಥಿ. ವಿಶ್ವವಿದ್ಯಾಲಯಗಳ ಮೇಷ್ಟ್ರುಗಳಿಗೂ ಇಲ್ಲದಷ್ಟು ಅರಿವು, ತಿಳುವಳಿಕೆ ಆತನಲ್ಲಿತ್ತು. ಕರ್ನಾಟಕದ ಚರಿತ್ರೆಯನ್ನು ತುದಿ ನಾಲಿಗೆಯಲ್ಲಿರಿಸಿಕೊಂಡಿದ್ದ” ಎಂದು ಹೋರಾಟದ ಹಾದಿಯನ್ನು ನೆನಪಿಸಿದರು.

“ಪಾರ್ಥಸಾರಥಿಯಲ್ಲಿ ಸಾಂಸ್ಕೃತಿಕ ನಾಯಕರನ್ನು ಬೆಳಕಿಗೆ ತರುವ ಹಂಬಲದೊಟ್ಟಿಗೆ ಸೂಕ್ಷ್ಮ ಸಂವೇದನೆಯಿತ್ತು. ಸಮಾಜದ ಹಿತಕ್ಕಾಗಿ ದುಡಿಯುವ ಆತನ ಪ್ರಯತ್ನ ಪ್ರಾಮಾಣಿಕ ಹೋರಾಟವಾಗಿತ್ತು” ಎಂದು ಹೇಳಿದರು.

ಹೋರಾಟಗಾರ ದಲಿತ ಸಂಘರ್ಷ ಸಮಿತಿ ದಾವಣಗೆರೆಯ ಬಿ ಎಂ ಹನುಮಂತಪ್ಪ, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಡಾ ಟಿ ತಿಪ್ಪೇಸ್ವಾಮಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಸಾಗುವಳಿ ಭೂಮಿ ಕಬಳಿಸಲು ಕೆಐಎಡಿಬಿ ಹುನ್ನಾರ; ಕರ್ನಾಟಕ ಪ್ರಾಂತ ರೈತ ಸಂಘ ಆರೋಪ

ಈ ಸಂದರ್ಭದಲ್ಲಿ ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ ಚಳ್ಳಕೆರೆ ನಗರಸಭೆ ಮಾಜಿ ಸದಸ್ಯ ಎಂ ಶಿವಮೂರ್ತಿ, ನ್ಯಾಯವಾದಿಗಳಾದ ಶರಣಪ್ಪ, ಬೀಸ್ನಳ್ಳಿ ಜಯಣ್ಣ, ಸಿ ಮುನಿಸ್ವಾಮಿ, ಡಾ ಎಂ ಶ್ರೀನಿವಾಸ್‍ಮೂರ್ತಿ, ಮಂಡ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯರಾದ ಡಾ ಬರಗೂರಪ್ಪ, ಡಾ ಮಂಜುನಾಥ್, ನಿವೃತ್ತ ಉಪನ್ಯಾಸಕ ಚಂದ್ರಣ್ಣ ಬೆಳ್ಳಿಪಟ್ಲು, ಶಿಕ್ಷಣ ಇಲಾಖೆಯ ಡಾ ಹಂಪಿಲಿಂಗಯ್ಯ, ಎಂಆರ್‌ಎಚ್‌ಎಸ್ ಜಿಲ್ಲಾಧ್ಯಕ್ಷ ಹುಲ್ಲೂರು ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ ಪಿ ಪ್ರಕಾಶ್‍ ಮೂರ್ತಿ, ಡಾ. ಬಿ ಆರ್ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ ಪಿ ತಿಪ್ಪೇಸ್ವಾಮಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...