ಚಿತ್ರದುರ್ಗ | ತಪಾಸಣೆ ನೆಪದಲ್ಲಿ ಪೊಲೀಸರ ಕಿರುಕುಳ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

Date:

ಪೊಲೀಸರು ತಪಾಸಣೆ ನೆಪದಲ್ಲಿ ಕಿರುಕುಳ ನೀಡಿ ದಂಡ ಕಟ್ಟುವಂತೆ ಒತ್ತಾಯಿಸುತ್ತಿದ್ದಾರೆಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಆಟೋ ಚಾಲಕರೊಬ್ಬರು ಮನನೊಂದು ಚಿತ್ರದುರ್ಗ ನಗರದ ಮುಖ್ಯ ವೃತ್ತದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಆಟೋ ಚಾಲಕ ಮಾಳಪ್ಪನಹಟ್ಟಿಯ ತಿಪ್ಪೇಸ್ವಾಮಿ ಎಂದು ಗುರುತಿಸಲಾಗಿದೆ. ವಿನಾಕಾರಣ
ಪೊಲೀಸರು ದಂಡ ಕಟ್ಟುವಂತೆ ಒತ್ತಾಯಿಸಿದರರಂದು ಆರೋಪಿಸಿರುವ ಇವರು ನೋಡನೋಡುತ್ತಿದ್ದಂತೆಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹೊತ್ತಿಸಿಕೊಂಡಿದ್ದಾರೆ. ಬಳಿಕ ಅಲ್ಲೇ ಇದ್ದ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೂ ಕೂಡ ಆಟೋ ಚಾಲಕನ ದೇಹ ಶೇ.50 ರಿಂದ 60ರಷ್ಟು ಸುಟ್ಟಿದೆ ಎಂದು ಸ್ಥಳದಲ್ಲಿದ್ದವರೊಬ್ಬರು ಮಾಹಿತಿ ನೀಡಿದ್ದಾರೆ.

“ಪೊಲೀಸರು ತಪಾಸಣೆ ನೆಪದಲ್ಲಿ ಆಟೋ ಚಾಲಕರಿಗೆ ತೊಂದರೆ ನೀಡುತ್ತಿದ್ದಾರೆ ಮತ್ತು ಇಲ್ಲದ ಕಾರಣಗಳನ್ನು ಹೇಳಿ ದಂಡ ಕಟ್ಟುವಂತೆ ಒತ್ತಾಯಿಸುತ್ತಿದ್ದಾರೆ. ಆಟೋಗಳನ್ನು ನಿಲ್ಲಿಸಿಕೊಳ್ಳಲು ಬಿಡುತ್ತಿಲ್ಲ. ವಿನಾಕಾರಣ ಸಂಚಾರ ವ್ಯವಸ್ಥೆ ನೆಪದಲ್ಲಿ ತೊಂದರೆ ನೀಡುತ್ತಿದ್ದಾರೆ. ದುಡಿಮೆ, ಸಂಪಾದನೆ ಮಾಡಲು ಸಾಧ್ಯವಾಗುತ್ತಿಲ್ಲ” ಎಂದು ಸ್ಥಳದಲ್ಲಿದ್ದ ಆಟೋ ಚಾಲಕರೊಬ್ಬರು ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕುಮಟಾ | ರೈಲ್ವೆ ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ದಾಖಲೆ ತೋರಿಸಿ ₹6.46 ಲಕ್ಷ ವಂಚನೆ; ಆರೋಪಿತ ನಾಪತ್ತೆ

“ಆಟೋಚಾಲಕ ಮನನೊಂದು ಬೆಂಕಿ ಹಚ್ಚಿಕೊಂಡ ಹಿನ್ನೆಲೆಯಲ್ಲಿ ಆಟೋ ಚಾಲಕರ ಸಂಘದ ಸದಸ್ಯರು ಮತ್ತು ಇತರೆ ಆಟೋ ಚಾಲಕರು ಪೊಲೀಸರು ವಿನಾಕಾರಣ ತೊಂದರೆ ನಡೆಯುತ್ತಿದ್ದಾರೆ” ಎಂದು ಪ್ರತಿಭಟನೆ ನಡೆಸಿದ್ದಾರೆ.

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸರ್ಕಾರಿ ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...