ಚಿತ್ರದುರ್ಗ | ರಸ್ತೆ ಪಾಲಾಗಿವೆ ಲಕ್ಷಾಂತರ ರೂ. ಮೌಲ್ಯದ ಮಾತ್ರೆಗಳು

Date:

ಬಡ ರೋಗಿಗಳಿಗೆ, ಅಗತ್ಯವುಳ್ಳವರಿಗೆ ಬಳಕೆಯಾಗಬೇಕಾದ ಲಕ್ಷಾಂತರ ರೂಪಾಯಿ ಮೌಲ್ಯದ ಮಾತ್ರೆಗಳು, ಬಳಕೆಯಾಗದೇ ಆಸ್ಪತ್ರೆಲ್ಲಿ ಹಾಗೆಯೇ ಉಳಿದಿದ್ದು, ಇದೀಗ ರಸ್ತೆ ಬದಿಯ ತಿಪ್ಪೆ ಸೇರಿವೆ.

ಚಿತ್ರದುರ್ಗಯ ಪ್ರಾದೇಶಿಕ ಸಾರಿಗೆ ಕಚೇರಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಬಳಿ ಅವಧಿ ಮೀರಿದ ಲಕ್ಷಾಂತರ ರೂ. ಮೌಲ್ಯದ ಮಾತ್ರಗಳು ಮತ್ತು ಔಷಧಿಗಳು ಪತ್ತೆಯಾಗಿವೆ. ಅಲ್ಲದೆ, ಕೆಲವು ಮಾತ್ರಗಳ ಅವಧಿ ಇನ್ನೂ ಒಂದು ವರ್ಷವಿದ್ದರೂ ಕೂಡ, ಅವುಗಳೂ ತಿಪ್ಪೆ ಸೇರಿವೆ.

ಶೀತ, ಕೆಮ್ಮು, ಅಲರ್ಜಿಯಂತಹ ಸಮಸ್ಯೆಗಳಿಗೆ ನೀಡಲಾಗುವ ಸಿಟ್ರಿಜನ್‌ ಮಾತ್ರೆಗಳು ಅಧಿಕವಾಗಿ ತಿಪ್ಪೆಯಲ್ಲಿ ಬಿದ್ದಿವೆ. ಅವುಗಳ ಮೇಲೆ, ಕರ್ನಾಟಕ ಸರ್ಕಾರ, ನಾಟ್ ಫಾರ್ ಸೇಲ್ (ಮಾರಾಟಕ್ಕಲ್ಲ) ಎಂದು ಬರೆಯಲಾಗಿದೆ. ಅವುಗಳಲ್ಲಿ ಹಲವು ಮಾತ್ರಗಳ ಅವಧಿ 2024ರವರೆಗೆ ಇದ್ದರೂ, ಅವುಗಳನ್ನು ಎಸೆಯಲಾಗಿದೆ. ಸರ್ಕಾರ ಬಡ ರೋಗಿಗಳಿಗೆ ಉಚಿತವಾಗಿ ವಿತರಣೆಗಾಗಿ ಕೊಟ್ಟಿದ್ದ ಮಾತ್ರೆಗಳನ್ನು ರಸ್ತೆ ಬದಿಯ ಕಸ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರದ ಮಾತ್ರೆಗಳನ್ನು ರಸ್ತೆ ಬದಿಯಲ್ಲಿ ಬಿಸಾಡಿರುವುದರ ಹಿಂದೆ, ಹೊಸದಾಗಿ ಮಾತ್ರೆಗಳನ್ನು ಖರೀದಿಸಿ, ಮಾತ್ರೆ ತಯಾಕರು ಹಾಗೂ ಸರಬರಾಜು ದಾರರಿಗೆ ಅನುಕೂಲ ಮಾಡಿಕೊಡುವ ದುರುದ್ದೇವೆ ಇರುವಂತೆ ಕಾಣುತ್ತಿದೆ” ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

“ಈ ಹಿಂದೆಯೂ ಅವಧಿ ಮೀರಿದ ಮಾತ್ರೆಗಳನ್ನು ಬಿಸಾಡಲಾಗಿತ್ತು. ನಿಯಮಗಳ ಪ್ರಕಾರ, ಅಂತಹ ಮಾತ್ರೆಗಳನ್ನು ಯಾರಿಗೂ ಸಿಗದಂತೆ ಗುಂಡಿಯಲ್ಲಿ ಮುಚ್ಚಬೇಕು. ಆದರೆ, ಈ ರೀತಿ ರಸ್ತೆ ಬದಿಯಲ್ಲಿ ಬಿಸಾಡಿರುವುದು ಹಲವು ರೀತಿಯ ಅನುಮಾನಗಳನ್ನು ಹುಟ್ಟುಹಾಕುತ್ತಿವೆ” ಎಂದು ಸಾಮಾಜಿಕ ಕಾರ್ಯಕರ್ತರು ಹೇಳಿದ್ದಾರೆ.

“ಮಾತ್ರೆಗಳನ್ನು ಯಾರು ಬಿಸಾಡಿದರು, ಯಾಕೆ ಬಿಸಾಡಿದರು ಎಂಬ ಬಗ್ಗೆ ಆರೋಗ್ಯ ಅಧಿಕಾರಿಗಳು ತನಿಖೆ ನಡೆಸಬೇಕು. ದುರುದ್ದೇಶದಿಂದ ಬಿಸಾಡಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ನಗರ ವಾಸಿಗಳು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...