ರಾಜ್ಯಪಾಲರ ನಡೆ ವಿರೋಧಿಸಿ ಚಿತ್ರದುರ್ಗದಲ್ಲಿ ಹೆದ್ದಾರಿ ತಡೆದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

Date:

ಜನಪರ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ರಾಜ್ಯಪಾಲರಿಗೆ ಒತ್ತಡ ಹೇರಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋಡಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಘಟಕ ಸೋಮವಾರ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಕಾರ್ಯಕರ್ತರು ಚಿತ್ರದುರ್ಗದ ಐಯ್ಯನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ತಡೆದು ಆಕ್ರೋಶ ಹೊರ ಹಾಕಿದರು. ಬಳಿಕ ಟೈಯರ್‌ಗೆ ಬೆಂಕಿ ಹಚ್ಚಿ, ರಾಜ್ಯಪಾಲರು ಸತ್ತು ಹೋದ್ರು ಅಂತಾ ಬಾಯಿ ಬಡಿದು ಕೊಂಡು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ಅಮಿತ್ ಷಾ ವಿರುದ್ಧ ಘೋಷಣೆ ಕೂಗಿದರು.

ಮುಖ್ಯಮಂತ್ರಿಗೆ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಸಿಕ್ಕಿಸಲು ಬಿಜೆಪಿ ಯತ್ನಿಸುತ್ತಿದೆ. ಮುಡಾದಿಂದ ನಿವೇಶನ ಹಂಚಿಕೆ ಮಾಡಿದಾಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರಲಿಲ್ಲ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು, ಬಿಜೆಪಿಯವರೇ ಮುಡಾ ಅಧ್ಯಕ್ಷರಾಗಿದ್ದರು. ಕಾನೂನಾತ್ಮಕವಾಗಿ ಯಾವುದೇ ಆಧಾರ ಇಲ್ಲದಿದ್ದರೂ ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದು ಅಧಿಕಾರದ ದುರುಪಯೋಗ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ಭ್ರಷ್ಟಾಚಾರ ಆರೋಪವಿಲ್ಲದ ಒಂದು ಕಪ್ಪು ಚುಕ್ಕೆಯೂ ಇಲ್ಲದಂತೆ ಅಧಿಕಾರ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಮುಡಾ ಹಗರಣದ ಆರೋಪ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಅವರ ಪತ್ನಿ ಜಮೀನನ್ನು ಸಹೋದರನಿಂದ ದಾನವಾಗಿ ಪಡೆದಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಅವರ ಕೈವಾಡ ಇಲ್ಲ. ಬೇಕಾದರೆ ನಿವೇಶನಗಳನ್ನು ವಾಪಸ್ ಪಡೆಯಲಿ. ಆದರೆ, ಬಿಜೆಪಿಯವರು ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿಸುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಮನವಿ ಪತ್ರ ಸಲ್ಲಿಸಿದರು. ಬಿಜೆಪಿ, ರಾಜ್ಯಪಾಲರ ಭಾವಚಿತ್ರ ಸುಟ್ಟು ಅವರ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದರು. 

ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಮಾತನಾಡಿ ಯಾವುದೇ ಆರೋಪವಿಲ್ಲದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿದ್ದಾರೆ.‌ಇದಕ್ಕೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹೆದರುವುದಿಲ್ಲ. ಇದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ನೀಡುತ್ತಾರೆ ಎಂದು ರಾಜ್ಯಪಾಲರ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಸಚಿವ ಆಂಜನೇಯ ಮಾತನಾಡಿ, ಸಾಮಾಜಿಕ ನ್ಯಾಯದ ಬಡವರ, ಅಹಿಂದ ವರ್ಗದ ನಾಯಕ ಸಿದ್ದರಾಮಯ್ಯನವರನ್ನು ಕೆಳಗಿಳಿಸಲು ಕುತಂತ್ರ ಮಾಡುತ್ತಿದ್ದು, ಸಿದ್ದರಾಮಯ್ಯನವರನ್ನು ಕೆಣಕಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ. ಇಡೀ ಕಾಂಗ್ರೆಸ್ ಮತ್ತು ಅಹಿಂದ ವರ್ಗದ ಜನ ಅವರ ಪರವಾಗಿ ನಿಲ್ಲುತ್ತಾರೆ. ರಾಜಭವನವನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯಪಾಲರು ಅವರು ಕೈಗೊಂಬೆ ರೀತಿ ವರ್ತಿಸುತ್ತಿದ್ದಾರೆ. ಇದು ಸಂವಿಧಾನದ ಕಗ್ಗೊಲೆ. ಕೇಂದ್ರ ಸರ್ಕಾರ ಮತ್ತು ಬಿಜೆಪಿ ಸರ್ಕಾರ ಅಸ್ಥಿರಗೊಳಿಸಲು ರಾಜಭವನವನ್ನು ಉಪಯೋಗಿಸಿಕೊಂಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ತಾಜಪೀರ್, ಶಾಸಕರಗಳಾದ ಗೋವಿಂದಪ್ಪ ಗೋಪಾಲಕೃಷ್ಣ, ರಘುಮೂರ್ತಿ, ಮಾಜಿ ಸಂಸದ ಚಂದ್ರಪ್ಪ, ಮುಖಂಡರುಗಳಾದ ಆರ್ ಕೆ ಸರ್ದಾರ್, ಯಾಸಿನ್, ಮಂಜುನಾಥ್ ಇತರ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...