ಚಿತ್ರದುರ್ಗ | ಪಿಎಸ್​ಐ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ

Date:

ಚಿತ್ರದುರ್ಗ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಗಾದಿಲಿಂಗಪ್ಪ ಮೇಲೆ ಬಿಜೆಪಿ ಮಧುಗಿರಿ ಘಟಕದ ಹನುಮಂತೇಗೌಡ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿರುವ ಹನುಮಂತೇಗೌಡ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿತ್ರದುರ್ಗದಲ್ಲಿ ತುರುವನೂರು ರಸ್ತೆಯಲ್ಲಿ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ, ಆರೋಪಿ ಹನುಮಂತೇಗೌಡ ತನ್ನ ಸಂಗಡಿಗರೊಂದಿಗೆ ಗುಂಪು ಕಟ್ಟಿಕೊಂಡು ರಸ್ತೆಯಲ್ಲಿ ನಿಂತಿದ್ದರು. ಅದನ್ನು ಪ್ರಶ್ನಿಸಿದ್ದಕ್ಕಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಪಿಎಸ್‌ಐ ಗಾದಿಲಿಂಗಪ್ಪ ಅವರ ಕೈಗಳಿಗೆ ಗಾಯಗಳಾಗಿವೆ.

ಆರೋಪಿ ಹನುಮಂತೇಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದಾಗ್ಯೂ, ಪೊಲೀಸರೇ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹನುಮಂತೇಗೌಡ ಕೂಡ ಆರೋಪ ಮಾಡಿದ್ದಾರೆ. ತಮಗೂ ಎದೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...