ಚಿತ್ರದುರ್ಗ | ಪ್ರಜಾಪ್ರಭುತ್ವದ ರಕ್ಷಣೆಗಾಗಿ ರಾಜಭವನ ಚಲೋ : ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ

Date:

ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುತ್ತಿರುವ ಬಿಜೆಪಿ-ಜೆಡಿಎಸ್ ಕುತಂತ್ರಗಳನ್ನು ವಿರೋಧಿಸಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಆ.27 ರಂದು ರಾಜಭವನ ಚಲೋ ನಡೆಸಲಾಗುವುದು ಎಂದು
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮುಖಂಡ ಆರ್ ಕೆ ಸರ್ದಾರ್ ತಿಳಿಸಿದರು.

ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ. ರಾಜಭವನವನ್ನು ಕೋಮುವಾದಿ ರಾಜಕಾರಣ ಮಾಡುತ್ತಿರುವ ಬಿಜೆಪಿ ಮತ್ತು ಪ್ಯೂಡಲ್ವಾದಿ ರಾಜಕಾರಣ ಮಾಡುತ್ತಿರುವ ಜೆಡಿಎಸ್ ಪಕ್ಷಗಳ ಕಛೇರಿಯನ್ನಾಗಿ ಪರಿವರ್ತಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಇದನ್ನು ವಿರೋಧಿಸಿ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಒಕ್ಕೂಟದಿಂದ ಹಾಗೂ ಎಲ್ಲಾ ಜನಪರ ಸಂಘಟನೆಗಳ ವತಿಯಿಂದ ರಾಜಭವನ ಚಲೋ ಆಯೋಜಿಸಿದ್ದೇವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯಪಾಲರು ಬಿಜೆಪಿ-ಜೆಡಿಎಸ್ ಪಕ್ಷಗಳ ತಾಳಕ್ಕೆ ಕುಣಿಯುತ್ತಿರುವುದಷ್ಟೇ ಅಲ್ಲ, ಪಕ್ಷಪಾತಿ ಧೋರಣೆಯನ್ನು ತಾಳಿದ್ದಾರೆ. ಜನರಿಂದ ಆಯ್ಕೆಯಾದ ಸರ್ಕಾರದ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿಗಳ ವಿರುದ್ಧ ನಡೆಯುತ್ತಿರುವ ಪಿತೂರಿ-ಪಡ್ಯಂತ್ರಗಳ ಭಾಗವಾಗಿದ್ದಾರೆ. ಆ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ಬಿಜೆಪಿ-ಜೆಡಿಎಸ್ ಪಕ್ಷಗಳ ಹಿತಾಸಕ್ತಿಗೆ ಅಡ ಇಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಲೋಕಾಯುಕ್ತ, ಎಸ್‌ ಐಟಿ ಮುಂತಾದ ತನಿಖಾ ಸಂಸ್ಥೆಗಳು ಪ್ರಾಥಮಿಕ ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತಾದ ಪ್ರಮುಖ ಕುಮಾರಸ್ವಾಮಿಯವರ ಗಣಿ ಹಗರಣ, ಶಶಿಕಲಾ ಜೊಲ್ಲೆಯವರ ಮೊಟ್ಟೆ ಹಗರಣ, ಜನಾರ್ಧನ ರೆಡ್ಡಿಯವರ ಹಗರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದೆ ಯಾವುದೇ ಪಾತ್ರ ಇರದ ಮುಡ ಹಗರಣದಲ್ಲಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಲಾಗಿದ್ದು ರಾಜಭವನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಇದರ ವಿರುದ್ಧವಾಗಿ ಆಗಸ್ಟ್ 27 ರಂದು ಫ್ರೀಡಂ ಪಾರ್ಕಿನಲ್ಲಿ ಸಾವಿರಾರು ಜನರು ಸೇರಿ ರಾಜಭವನಕ್ಕೆ ತೆರಳಿ ಪ್ರತಿಭಟಿಸಲಿದ್ದೇವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಹಿಂದ ಒಕ್ಕೂಟದ ಅಧ್ಯಕ್ಷರು ಸಿಟಿಕೆ ಕೃಷ್ಣಮೂರ್ತಿ, ಸಂಚಾಲಕ ಜಗದೀಶ್, ಮುಖಂಡರಾದ ಮೊಹಮ್ಮದ್ ಯಾಸಿನ್, ಮಹಾಬೂಬ್ ಖಾನ್ , ಝಾಕೀರ್ ಹುಸೈನ್, ಮಂಜು , ದುರ್ಗೆಷ್ , ರಘು ಸೇರಿದಂತೆ ಹಲವು ಅಹಿಂದ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...