ಚಿತ್ರದುರ್ಗ | ಮನರೇಗಾ ಯೋಜನೆಯಡಿ ಕೆಲಸಕ್ಕಾಗಿ ಆಗ್ರಹ

Date:

ಬರಗಾಲದಲ್ಲಿ ನೆಪ ಹೇಳುವುದು ಬಿಟ್ಟು ಕೆಲಸ ಮಾಡಲು ಹೇಳುವಲ್ಲಿ ತಾಲೂಕು ಪಂಚಾಯತಿ ಮನರೇಗಾ ವಿಭಾಗದವರು ವಿಫಲರಾಗಿದ್ದಾರೆ ಎಂದು ಗ್ರಾಕೂಸ್‌ (ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ಚಿತ್ರದುರ್ಗಾ) ಸಂಘಟನೆಯ ಜಿಲ್ಲಾ ಸಂಚಾಲಕಿ ತೇಜೇಶ್ವರಿ ಆರೋಪಿಸಿದರು.

ಚಿತ್ರದುರ್ಗ ಗ್ರಾಮೀಣ ಕೂಲಿ ಕಾರ್ಮಿಕರು ಸಂಘಟನೆಯ ವತಿಯಿಂದ, ಮನರೇಗಾ ಯೋಜನೆಯಡಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಬಡವರಿಗೆ ಕೂಲಿ ಕೆಲಸ ನೀಡುವಲ್ಲಿ ವಿಫಲವಾಗಿರುವ ಗ್ರಾಮ ಪಂಚಾಯಿತಿ ಮತ್ತು ಇಲಾಖೆಗೆ ಕೆಲಸ ನೀಡಲು ಆದೇಶಿಸಲು ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾ ಅಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿದರು.

ಕಳೆದ 4 ತಿಂಗಳಿಂದ ದುಡಿಯುವ ಕೈಗಳಿಗೆ ಕೆಲಸ ಸಿಗದೇ ಕಾರ್ಮಿಕ ಕುಟುಂಬಗಳು ಗುಳೆ ಹೋಗಿದ್ದು, ನರೇಗಾ ಯೋಜನೆ ಇದ್ದು ಗ್ರಾಮೀಣ ಕಾರ್ಮಿಕರಿಗೆ ಮಾಹಿತಿಲ್ಲದೇ ಸರಿಯಾಗಿ ಅನುಷ್ಠಾನವಾಗದೆ ಮರೀಚಿಕೆ ಆಗಿದೆ.‌ 5 ತಿಂಗಳಿಂದಲೂ ಹಳ್ಳಿ ಹಳ್ಳಿಗೆ ಹೋಗಿ ಕಾರ್ಮಿಕರ ಗುಂಪುಗಳನ್ನು ಮಾಡಿ ಧೈರ್ಯ ತುಂಬಿ ಕೆಲಸ ಕೇಳಿದರೆ ಪಿಡಿಪಿಗಳೂ ನಿರ್ಲಕ್ಷ ಮಾಡಿ ಕೆಲಸ ಕೊಡುತ್ತಿಲ್ಲ ಜಾಬ್ ಕಾರ್ಡ್ ಮಾಡಿಕೊಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ಪಂಚಾಯತಿಗಳು ಮಾತ್ರ ಕಡಿಮೆ ಜನರಿಗೆ ಕೆಲಸ ಕೊಟ್ಟು ಕೈತೋಳೆದುಕೊಳ್ಳುತ್ತಿದ್ದೂ ಬೇಸರ ತಂದಿದೆ. ಕೆಲವು ತಾಂತ್ರಿಕ ಸಹಾಯಕರು ಕೆಲಸ ಮಾಡಿದ ಕಾರ್ಮಿಕರಿಗೆ ಕಡಿಮೆ ಕೂಲಿ ಹಾಕುವುದು, ಕೆಲಸ ಮಾಡಲು ಸಾಧ್ಯವಿಲ್ಲದ ಸ್ಥಳದಲ್ಲಿ ಕೆಲಸ ಕೊಟ್ಟು ಸಮಸ್ಯೆ ಮಾಡುತ್ತಿದ್ದಾರೆ. ಒಟ್ಟಾರೆ ನರೇಗಾ ಯೋಜನೆ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ ಎಂದರು.

ಕೊಳಾಳು, ಯಳಗೋಡು, ಚಿಕ್ಕಗೊಂಡನಹಳ್ಳಿ, ಗುಡ್ಡದರಂಗವ್ವನಹಳ್ಳಿ, ಐನಹಳ್ಳಿ-ಕುರುಬರಹಳ್ಳಿ ಹಾಗೂ ಇತರ ಗ್ರಾಮ ಪಂಚಾಯಿತಿಗಳಲ್ಲಿ ಕೆಲವು ಕಡೆ ಕೆಲಸ ಕೊಟ್ಟಿಲ್ಲ, ಕೆಲವೆಡೆ ನಮೂನೆ-6 ಕೊಟ್ಟರೂ ಕೆಲಸ ನೀಡಿಲ್ಲ, ಇದರಿಂದ ದುಡಿದು ತಿನ್ನುವ ಕೂಲಿ ಕಾರ್ಮಿಕರ ಜೀವನ ನಿರ್ವಹಣೆ ಕಷ್ಟವಾಗಿದೆ. ಇದನ್ನು ನಿವಾರಿಸಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ನರೇಗದಡಿ ಕೆಲಸ ನೀಡಲು ಮನವಿ ಎಂದು ಮನವಿ ಮಾಡಿದರು.

ಶೀಘ್ರ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಮುಂದಿನ ಸೋಮವಾರ ನೂರಾರು ಮನರೇಗಾ ಕಾರ್ಮಿಕರು ತಾಲೂಕು ಪಂಚಾಯತ್ ಮುಂದೆ ಅನಿರ್ದಿಷ್ಟ ಹೋರಾಟ ಮಾಡಲಿದ್ದಾರೆ ಎಂದು ಎಚ್ಚರಿಸಿದರು.

ಈ ವೇಳೆ ಗ್ರಾಕೂಸ ಸಂಘಟನೆಯ ರಾಮಪ್ಪ, ನಾಗರತ್ನಮ್ಮ, ರೇಖಾ, ಶಾಮರಾಜು, ಮಲ್ಲೇಶ್ ಇತರ ಕಾರ್ಮಿಕರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...