ಚಿತ್ರದುರ್ಗ | ಭದ್ರಾ ಮೇಲ್ದಂಡೆ ಕಾಮಗಾರಿಗೆ ಶೀಘ್ರ ₹5,300 ಕೋಟಿ ಅನುದಾನ ಬಿಡುಗಡೆ: ಸಂಸದ ಗೋವಿಂದ ಎಂ ಕಾರಜೋಳ

Date:

ಭರವಸೆಯಂತೆ ಭದ್ರಾ ಮೇಲ್ದಂಡೆ ಕಾಮಗಾರಿಗೆ ₹5,300 ಕೋಟಿ ಅನುದಾನ ಶೀಘ್ರ ಬಿಡುಗಡೆಯಾಗಲಿದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ಭರವಸೆ ನೀಡಿದರು.

ಚಿತ್ರದುರ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ದೆಹಲಿಗೆ ಆಗಮಿಸಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತರಾಮನ್‌ ಜತೆ ರಾಜ್ಯದ ಸಂಸದರ ಸಭೆ ನಡೆಸಿದ್ದು, ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ವಿಚಾರ ಮೊದಲು ಪ್ರಸ್ತಾಪ ಮಾಡಲಾಯಿತು’ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

“ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸಂಸದ ಬಸವರಾಜ್‌ ಬೊಮ್ಮಾಯಿ ಮತ್ತು ನಾನು ಸ್ಪಷ್ಟವಾಗಿ ವಿವರಣೆ ನೀಡಿದೆವು. ಈ ವೇಳೆ‌ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ‌ ನೀರಾವರಿ ಇಲಾಖೆಗೆ ಕೆಲ ತಾಂತ್ರಿಕ ವಿವರಣೆ ಕೇಳಿದ್ದೇವೆ. ಆ ಮಾಹಿತಿ ಎಷ್ಟು ಬೇಗ ಕೊಡುತ್ತೀರೋ ಅಷ್ಟು ಬೇಗ ₹5,300 ಕೋಟಿ ಅನುದಾನ ಬಿಡುಗಡೆ ಆಗಲಿದೆಯೆಂದು ಸ್ಪಷ್ಟಪಡಿಸಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರ ತಾಂತ್ರಿಕ ವಿವರಣೆ ನೀಡಿದ ಕೂಡಲೇ ಯೋಜನೆಗೆ ₹5,300 ಕೋಟಿ‌ ಬಿಡುಗಡೆಯಾಗುತ್ತದೆ. ಆದರೆ ರಾಜ್ಯ ಸರ್ಕಾರ ಈ ವರ್ಷ ₹800 ಕೋಟಿ ಮೀಸಲಿಟ್ಟಿದೆ. ಆದರೆ, ಇದು ಬಹಳ‌ ಕಡಿಮೆ. ಹಿಂದೆ ಬಿಜೆಪಿ ಸರ್ಕಾರ ಸಾವಿರ ಕೋಟಿ ಲೆಕ್ಕದಲ್ಲಿ ಅನುದಾನ ನೀಡಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ನೂರರ ಲೆಕ್ಕದಲ್ಲಿ ಕೊಡುತ್ತಿರುವ ಅನುದಾನವನ್ನು ಹೆಚ್ಚಿಸಬೇಕಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಶೋಷಿತ ಸಮಾಜದ ವಿದ್ಯಾರ್ಥಿಗಳ ಕುಂದುಕೊರತೆ ಮತ್ತು ಜಾಗೃತಿ ಕಾರ್ಯಕ್ರಮ

ಮಾಜಿ ಶಾಸಕ ಜಿ ಎಚ್‌ ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ ಮುರುಳಿ, ಮುಖಂಡರುಗಳಾದ ಜಿ ಟಿ ಸುರೇಶ್‌, ಸಂಪತ್‌ ಕುಮಾರ್, ವೆಂಕಟೇಶ್‌ ಯಾದವ್, ನವೀನ್‌ ಚಾಲುಕ್ಯ, ಮಾಧುರಿ ಗಿರೀಶ್‌, ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್‌ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...