ಚಿತ್ರದುರ್ಗ | ವಕ್ಫ್‌ ಮಸೂದೆ-2024 ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ

Date:

ಮುಸ್ಲಿಮರನ್ನು ಮೂರನೇ ದರ್ಜೆಯ ಪ್ರಜೆಗಳನ್ನಾಗಿ ನೋಡುವ ಬಲಪಂಥೀಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹೆಸರಲ್ಲಿ ವಕ್ಫ್‌ ಮಸೂದೆ-2024 ಜಾರಿ ಮಾಡುವ ನಿಲುವು ಖಂಡನೀಯ ಎಂದು ಎಸ್‌ಡಿಪಿಐ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ತಹಶೀಲ್ದಾರರ ಜಂಟಿ ಪಾರ್ಲಿಮೆಂಟ್ ಸಮಿತಿಗೆ ಹಕ್ಕೊತ್ತಾಯ ಮಂಡಿಸಿ ಮಾತನಾಡಿದ ಎಸ್‌ಡಿಪಿಐ ಕಾರ್ಯಕರ್ತರು, “ವಕ್ಫ್‌ ಬೋರ್ಡ್ ಆಸ್ತಿಗಳ ಸಂರಕ್ಷಣೆ ಹಾಗೂ ಸುಧಾರಣೆ ಹೆಸರಿನಲ್ಲಿ ಇತ್ತೀಚೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಿಲ್‌ ಪಾಸ್ ಮಾಡಿದೆ. ಮುಸ್ಲಿಂ ಸಮುದಾಯವನ್ನು ಧಾರ್ಮಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಕಡೆಗಣಿಸಿರುವ ಕೇಂದ್ರ ಸರ್ಕಾರ ಹಂತ ಹಂತವಾಗಿ ಇಂತಹ ಕಾನೂನು ಕಟ್ಟಳೆಗಳ ಮೂಲಕ ಕೆಳವರ್ಗದ ಮತ್ತು ಅಲ್ಪಸಂಖ್ಯಾತ ವರ್ಗದ ಜನರನ್ನು ಹತ್ತಿಕ್ಕಲು ಮುಂದಾಗಿದೆ” ಎಂದು ಆರೋಪಿಸಿದರು.

ವಕ್ಫ್‌ ಮನವಿ 1

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್ ಬಹಳ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, “ಸಂವಿಧಾನದ ಆಶಯದಲ್ಲಿ ಬದುಕುತ್ತಿರುವ ಅಲ್ಪಸಂಖ್ಯಾತರನ್ನು ಕೇಂದ್ರ ಸರ್ಕಾರ ವಕ್ಫ್‌ ಬೋರ್ಡ್ ಮಸೂದೆ-2024ರ ಮೂಲಕ ಹಣಿಯಲು ಹೊರಟಿದೆ. ಬಾಬರಿ ಮಸೀದಿಯನ್ನು ನಮ್ಮಿಂದ ಕಿತ್ತುಕೊಂಡ ಹಾಗೆ, ವಕ್ಫ್‌ ಬೋರ್ಡನ್ನೂ ಕಿತ್ತುಕೊಳ್ಳಲು ನೋಡುತ್ತಿದ್ದೀರಿ. ನಾವು ಈ ದೇಶದ ಪ್ರಜೆಗಳು ಇಲ್ಲಿಯೇ ಹುಟ್ಟಿದ್ದೇವೆ ಇಲ್ಲಿಯೇ ಸಾಯುತ್ತೇವೆ. ನಿಮ್ಮ ಹಾಗೆ ಧಾರ್ಮಿಕ ವಿರೋಧ ಮಾಡುವುದಿಲ್ಲ. ನಾವು ಪ್ರೀತಿಯನ್ನು ಹಂಚುತ್ತೇವೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಸರಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರಿಗೆ ಮಧ್ಯಾಹ್ನದ ಬಿಸಿಯೂಟ; ಸಂದೀಪ್‌ ರೆಡ್ಡಿ

ಕಾರ್ಯಕ್ರಮಕ್ಕೂ ಮುನ್ನ, ʼನಮ್ಮ ದೇಶ ನಮ್ಮ ಹಕ್ಕು, ನಮ್ಮ ಸಂವಿಧಾನ, ನಾವು ಭೀಮನ ಮಕ್ಕಳು ಎನ್ನುವ ಘೋಷಣೆಗಳನ್ನು ಕೂಗುವ ಮೂಲಕ ವಕ್ಫ್‌ ಬೋರ್ಡ್ ಮಸೂದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಎಸ್‌ಡಿಪಿಐ ಹಿರಿಯ ಮುಖಂಡರಾದಂತಹ ನಜೀರ್, ಶೋಯಬ್, ಉಮರ್ ಸೇರಿದಂತೆ ಅನೇಕ ಯುವ ಹೋರಾಟಗಾರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...