ಚಿತ್ರದುರ್ಗ | ಆ.30ರಂದು ‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ’ ಕುರಿತ ವಿಚಾರ ಸಂಕಿರಣ

Date:

ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್.‌ ಅಂಬೇಡ್ಕರ್‌ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್‌/ಎಸ್‌ಟಿ ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್‌ 30ರಂದು ‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ’ ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಆಯೋಜಿಸಿದೆ.

ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್‌ ಅವರು ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದಾರೆ.

“ಡಾ. ಬಿ ಆರ್ ಅಂಬೇಡ್ಕರ್‌ ಅವರ ಕ್ರಾಂತಿಕಾರಿ ಚಿಂತನೆಗಳು, ಇಂದಿನ ದಿನದಲ್ಲಿಯೂ ಅವುಗಳ ಪ್ರಸ್ತುತತೆ, ಪತ್ರಕರ್ತರಾಗಿ ಅವರ ಕೊಡುಗೆ ಮತ್ತು ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣಕ್ಕೆ ಮುಂದಿನ ಹಾದಿ ಮುಂತಾದ ವಿಷಯಗಳ ಚರ್ಚೆಗೆ ಈ ವಿಚಾರ ಸಂಕಿರಣವು ವೇದಿಕೆಯಾಗಲಿದೆ” ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಪತ್ರಕರ್ತ ಡಿ. ಉಮಾಪತಿ ಅವರು ದಿಕ್ಸೂಚಿ ಭಾಷಣ ಮಾಡುವರು. ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್‌, ಸಂಸದ ಗೋವಿಂದ ಎಂ. ಕಾರಜೋಳ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿದ್ದೀರಾ? ಖಾಸಗಿ ಶಾಲೆಗೆ ಸೆಡ್ಡು ಹೊಡೆಯುತ್ತಿರುವ ಹೊಸೂರು ಸರ್ಕಾರಿ ಶಾಲೆ: ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ

ಈ ವಿಚಾರ ಸಂಕಿರಣದಲ್ಲಿ ‘ಅಂಬೇಡ್ಕರ್‌ ಅವರ ಪತ್ರಿಕಾ ವೃತ್ತಿ’ ವಿಷಯದ ಕುರಿತು ಪತ್ರಕರ್ತ ಎನ್ ರವಿಕುಮಾರ್‌, ‘ಪತ್ರಕರ್ತರಾಗಿ ಅಂಬೇಡ್ಕರ್‌ ಅವರ ಬರವಣಿಗೆಗಳು’ ವಿಷಯದ ಕುರಿತು ವಿ ಎಲ್ ನರಸಿಂಹಮೂರ್ತಿ, ‘ಅಂಬೇಡ್ಕರ್‌ ದೃಷ್ಟಿಯಲ್ಲಿ ಲಿಂಗಸಮಾನತೆ’ ಕುರಿತು ಡಾ. ಭಾರತಿದೇವಿ ಹಾಗೂ ಪತ್ರಕರ್ತರಲ್ಲಿ ಸಾಮಾಜಿಕ ನ್ಯಾಯದ ಪ್ರಜ್ಞೆ ವಿಷಯದ ಕುರಿತು ರಿಷಿಕೇಶ್‌ ಬಹದ್ದೂರ್‌ ದೇಸಾಯಿ ವಿಷಯ ಮಂಡಿಸಲಿದ್ದಾರೆ. ಹಿರಿಯ ಪತ್ರಕರ್ತ ಸನತ್‌ ಕುಮಾರ್‌ ಬೆಳಗಲಿ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ.

ಪತ್ರಕರ್ತರು ಹಾಗೂ ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಸಹನಾ ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...