ಚಿತ್ರದುರ್ಗ | ಸರಣಿ ಅಪಘಾತ; ನಾಲ್ಕು ಎತ್ತುಗಳು, ಓರ್ವ ಚಾಲಕ ದುರ್ಮರಣ, ಜೋಡೆತ್ತು, ರೈತರಿಗೆ ಗಾಯ

Date:

ಮೊಳಕಾಲ್ಮುರು ನಗರದ ಸಮೀಪ ಇಂದು ಬೆಳಿಗ್ಗೆ ನಸುಕಿನ ವೇಳೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ಕು ಎತ್ತುಗಳು, ಓರ್ವ ಚಾಲಕ ದುರ್ಮರಣ ಹೊಂದಿದ ಘಟನೆ ರಾಷ್ಟ್ರೀಯ ಹೆದ್ದಾರಿ 150ರ ಬೈರಾಪುರ ಬಳಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಬಳಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಟಿಪ್ಪರ್ ಲಾರಿಯೊಂದು ರಸ್ತೆಯಲ್ಲಿ ಹೋಗುತ್ತಿದ್ದ ಮೂರು ಎತ್ತಿನ ಬಂಡಿಗಳಿಗೆ ಡಿಕ್ಕಿ ಹೊಡೆದಿದ್ದು, ಬಂಡಿ ಎಳೆಯುತ್ತಿದ್ದ ನಾಲ್ಕು ಎತ್ತುಗಳು ಬಲಿಯಾಗಿವೆ. ಘಟನೆಯಲ್ಲಿ ಟಿಪ್ಪರ್ ಕೂಡ ಪಲ್ಟಿಯಾಗಿದೆ. ಈ ವೇಳೆ ಟಿಪ್ಪರ್ ಚಾಲಕ ಕೂಡ ಮತಪಟ್ಟಿದ್ದು, ಬಂಡಿಯಲ್ಲಿದ್ದ ರೈತರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಟಿಪ್ಪರ್‌ ಪಲ್ಟಿ

ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ನಾಲ್ಕು ಮುಗ್ಧ ಮೂಕ ಪ್ರಾಣಿಗಳು ಬಲಿಯಾಗಿದ್ದು, ಎತ್ತಿನ ಬಂಡಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಘಟನೆ ಅಪಘಾತದ ತೀವ್ರತೆಗೆ ಸಾಕ್ಷಿಯಾಗಿತ್ತು. ಮೃತಪಟ್ಟ ಟಿಪ್ಪರ್ ಚಾಲಕನನ್ನು ಇಮ್ರಾನ್ ಎಂದು ಗುರುತಿಸಲಾಗಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೈಕ್ರೋ ಫೈನಾನ್ಸ್ ಕಿರುಕುಳ; ಆರು ತಿಂಗಳ ಕಾಲಾವಕಾಶ ನೀಡುವಂತೆ ಪ್ರತಿಭಟನೆ

ಅಚ್ಚರಿ ಎಂಬಂತೆ ಎರಡು ಎತ್ತುಗಳು ಮತ್ತು ಗಾಡಿಯಲ್ಲಿದ್ದ ರೈತರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಮನೆಮಕ್ಕಳಂತೆ ಸಾಕಿದ್ದ ಎತ್ತುಗಳು ತಮ್ಮ ಕಣ್ಣೆದುರೇ ಮೃತಪಟ್ಟಿದ್ದನ್ನು ಕಂಡ ರೈತರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರ ಕಣ್ಣಾಲಿಗಳು ತುಂಬಿ ಬಂದಿದ್ದವು.

ಸ್ಥಳಕ್ಕೆ ಮೊಳಕಾಲ್ಮುರು ಠಾಣೆಯ ಪೊಲೀಸ್ ಉಪನಿರೀಕ್ಷಕ ಪಾಂಡುರಂಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...