ಚಿತ್ರದುರ್ಗ | ಹಾಸ್ಟೆಲ್ ವಾರ್ಡನ್‌ನಿಂದ ದೌರ್ಜನ್ಯ ಆರೋಪ: ವಿದ್ಯಾರ್ಥಿಗಳಿಂದ ಪ್ರತಿಭಟನೆ

Date:

ಹಾಸ್ಟೆಲ್ ವಾರ್ಡನ್ ವಿದ್ಯಾರ್ಥಿಗಳ ಮೇಲೆ ಅವಾಚ್ಯವಾಗಿ ಮಾತನಾಡಿ ದೌರ್ಜನ್ಯ ಮಾಡುತ್ತಿದ್ದಾರೆ ಮತ್ತು ಉತ್ತಮ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಆರೋಪಿಸಿ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದ್ದು, ವಜಾ ಮಾಡಲು ಮನವಿ ಸಲ್ಲಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪಾವಗಡ ರಸ್ತೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೇವರಾಜ ಅರಸು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಸರಿಯಾಗಿ ಸೌಲಭ್ಯಗಳನ್ನು ಒದಗಿಸುತ್ತಿಲ್ಲ. ಇಲ್ಲಿನ ವಾರ್ಡನ್ ವಿದ್ಯಾರ್ಥಿಗಳ ಜೊತೆಗೆ ಅನುಚಿತವಾಗಿ ವರ್ತಿಸುತ್ತಿದ್ದು, ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಉತ್ತಮವಾದ ಊಟದ ವ್ಯವಸ್ಥೆ ಇಲ್ಲ. ಊಟಕ್ಕೆ ಮತ್ತು ಉಪಾಹಾರಕ್ಕೆ ಕಳಪೆ ಗುಣಮಟ್ಟದ ಹಾಗೂ ಕೊಳೆತ ಸೊಪ್ಪು ತರಕಾರಿಗಳನ್ನು ಬಳಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದರೆ ವಿದ್ಯಾರ್ಥಿಗಳ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯ ಎಸಗುತ್ತಿದ್ದಾರೆ. ಇವರ ಕುಕೃತ್ಯಗಳನ್ನು ಮರೆಮಾಚಲು ಹಾಸ್ಟೆಲ್ ಕಟ್ಟಡದಲ್ಲಿರುವ ಸಿ ಸಿ ಕ್ಯಾಮರಾಗಳನ್ನು ಮುರಿದು ಹಾಕಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 18 at 6.12.39 PM

ಹಾಸ್ಟೆಲಿಗೆ ಬರುವ ವೇಳೆ ಮೇಲ್ವಿಚಾರಕರು ಮದ್ಯಪಾನ ಮಾಡಿ ಬರುತ್ತಾರೆ. ಈ ಬಗ್ಗೆ ಪ್ರಶ್ನಿಸಿದರೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ಕೂಡ ಮಾಡುತ್ತಾರೆ. ಕೆಲವೊಮ್ಮೆ ಬಡಿಗೆಯಿಂದ ಕೂಡ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ದೂರು ನೀಡುತ್ತೇವೆ ಎಂದು ಹೇಳಿದರೆ, ‘ಜಿಲ್ಲಾ ಕಲ್ಯಾಣಾಧಿಕಾರಿಗಳು ನಮ್ಮ ಸ್ವಂತ ಸಂಬಂಧಿಯಾಗಿದ್ದು ನೀವು ದೂರು ನೀಡಿದರೂ ನನಗೇನು ಆಗುವುದಿಲ್ಲ, ನನ್ನ ಮೇಲೆ ಕ್ರಮ ಕೈಗೊಳ್ಳುವುದಿಲ್ಲ. ಬದಲಾಗಿ ನಿಮ್ಮನ್ನೇ ನಾನು ಹಾಸ್ಟೆಲ್‌ನಿಂದ ಹೊರಗೆ ಹಾಕುತ್ತೇನೆ’ ಎಂದು ಬೆದರಿಸುತ್ತಾರೆ ಎಂದು ಅಳಲನ್ನು ತೋಡಿಕೊಂಡರು.

ಇದನ್ನು ಓದಿದ್ದೀರಾ? ಚನ್ನಪಟ್ಟಣ | ಬಾಡೂಟದ ಆಸೆಯಲ್ಲಿದ್ದ ಯೋಗೇಶ್ವರ್ ಬೆಂಬಲಿಗರಿಗೆ ನಿರಾಸೆ; ತಯಾರಾಗಿದ್ದ ಊಟ ವಶಕ್ಕೆ!

ಈ ಬಗ್ಗೆ ಚಳ್ಳಕೆರೆ ತಾಲೂಕು ತಹಶೀಲ್ದಾರ್ ರೆಹಾನ್ ಪಾಷ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಕ್ಷಣವೇ ಮೇಲ್ವಿಚಾರಕರನ್ನು ವಜಾಗೊಳಿಸಿ, ಹಾಸ್ಟೆಲಿಗೆ ಉತ್ತಮ ಸೌಲಭ್ಯಗಳನ್ನು ಕಲಿಸಬೇಕು, ಅವರ ಸ್ಥಾನಕ್ಕೆ ಉತ್ತಮ ವಾರ್ಡನ್‌ ಅನ್ನು ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...