ಚಿತ್ರದುರ್ಗ | ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ವೈದ್ಯನ ಪ್ರಿವೆಡ್ಡಿಂಗ್ ಶೂಟ್; ಸಾರ್ವಜನಿಕರ ಕಿಡಿ

Date:

ವಿಭಿನ್ನ ಫೋಟೋಶೂಟ್‌ ಹುಚ್ಚಿನಲ್ಲಿ ವೈದ್ಯರೊಬ್ಬರು ಆಪರೇಷನ್ ಥಿಯೇಟರ್​ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಘಟನೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಜಿಲ್ಲಾಸ್ಪತ್ರೆಯ ಗುತ್ತಿಗೆ ವೈದ್ಯ ಡಾ.ಅಭಿಷೇಕ್ ಯಡವಟ್ಟಿಗೆ ಆಕ್ರೋಶ ವ್ಯಕ್ತವಾಗಿದೆ. ವೈದ್ಯ ಅಭೀಷೇಕ್‌, ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದಾರೆ. ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ವಿಡಿಯೋ ಶೂಟ್ ಮಾಡಿಸಿದ್ದು ಡಾ.ಅಭಿಷೇಕ್ ಜೋಡಿಯ ಪ್ರಿವೆಡ್ಡಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಈ ಬಗ್ಗೆ ಟೀಕೆಗಳು ಕೇಳಿಬಂದಿವೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆಯಾಗಿದೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

ಘಟನೆ ಸಂಬಂಧ ಸುದ್ದಿ ಮಾದ್ಯಮಗಳಿಗೆ ಪ್ರತಿಕ್ರಿಯಿಸಿರುವ ಚಿತ್ರದುರ್ಗ ಡಿಎಚ್​​ಒ ಡಾ. ರೇಣುಪ್ರಸಾದ್, ಆಸ್ಪತ್ರೆ ಆಪರೇಷನ್ ಥಿಯೇಟರ್ ದುರ್ಬಳಕೆಯಾಗಿದೆ. ಭರಮಸಾಗರ ಆಸ್ಪತ್ರೆ ವೈದ್ಯಾಧಿಕಾರಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಒಂದು ತಿಂಗಳ ಹಿಂದೆ ಡಾ.ಅಭಿಷೇಕ್ ನೇಮಕವಾಗಿದ್ದು, ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿದ್ದಾರೆ.ಘಟನೆಯಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...