ಚಿತ್ರದುರ್ಗ | ‌ಚಿತ್ರಮಂದಿರಗಳು ʼಧೀರ ಭಗತ್ ರಾಯ್ʼ ಚಲನಚಿತ್ರ ನಿರ್ಲಕ್ಷಿಸುತ್ತಿವೆ: ಕರುನಾಡ ವಿಜಯಸೇನೆ

Date:

ರಾಜ್ಯದಲ್ಲಿ ಚಿತ್ರಮಂದಿರಗಳನ್ನು ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಪ್ರದರ್ಶನಕ್ಕೆ ನೀಡಿ ಕನ್ನಡದ ʼಧೀರ ಭಗತ್ ರಾಯ್ʼ ಚಲನಚಿತ್ರ ನಿರ್ಲಕ್ಷಿಸುತ್ತಿದ್ದಾರೆ ಎಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.

“ಅಲ್ಲು ಅರ್ಜುನ್, ರಶ್ಮಿಕ ಮಂದಣ್ಣ ಅಭಿನಯದ ʼಪುಷ್ಪ 2ʼ ರಾಜ್ಯ ಮತ್ತು ರಾಷ್ಟ್ರಾದ್ಯಂತ ತೆರೆಕಂಡಿದ್ದು, ಜಿಲ್ಲಾ ಕೇಂದ್ರಗಳಲ್ಲಿಯೂ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ ನೈಜ ಕನ್ನಡ ಚಿತ್ರವಾದ ಧೀರ ಭಗತ್ ರಾಯ್ ಚಲನಚಿತ್ರಕ್ಕೆ ಚಿತ್ರಮಂದಿರ ನೀಡದೆ ಕನ್ನಡ ಚಿತ್ರಗಳಿಗೆ ಅವಮಾನಿಸುತ್ತಿದ್ದಾರೆ. ಕನ್ನಡ ಚಿತ್ರರಂಗವನ್ನು ಕಡೆಗಣಿಸುತ್ತಿದ್ದಾರೆ. ಇದರಿಂದ ಕನ್ನಡ ಚಿತ್ರಗಳಿಗೆ ಸೋಲಾಗುತ್ತಿದೆ” ಎಂದು ಚಿತ್ರಮಂದಿರ ಮಾಲೀಕರು ಮತ್ತು ವಿತರಕರ ವಿರುದ್ಧ ಪ್ರತಿಭಟನೆ ನಡೆಸಿದರು.

“ಚಿತ್ರದುರ್ಗದಲ್ಲಿ ಧೀರ ಭಗತ್ ರಾಯ್ ಕನ್ನಡ ಚಲನಚಿತ್ರಕ್ಕೆ ಕೂಡಲೇ ಚಿತ್ರಮಂದಿರ ಒದಗಿಸಬೇಕು, ಇದಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು” ಎಂದು ಆಹ್ರಹಿಸಿ ನಗರದ ಪ್ರಸನ್ನ ಮತ್ತು ವೆಂಕಟೇಶ್ವರ ಚಿತ್ರಮಂದಿರಗಳ ಪುಷ್ಪ 2 ಚಲನಚಿತ್ರದ ಪೋಸ್ಟರ್‌ಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಶೋಷಿತ ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಅಗತ್ಯ : ಸಂಸದ ಸಾಗರ್‌ ಖಂಡ್ರೆ

ಈ ವೇಳೆ ಕರುನಾಡ ವಿಜಯ ಸೇನೆಯ ಮುಖಂಡ ಕೆ ಟಿ ಶಿವಕುಮಾರ್ ಮಾತನಾಡಿ, “ಕರ್ನಾಟಕ ರಾಜ್ಯದಲ್ಲಿ 50ನೇ ಸುವರ್ಣ ಮಹೋತ್ಸವ, 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಇಂತಹ ಸಮಯದಲ್ಲಿ ಕನ್ನಡದ ಮೂಲ ಚಿತ್ರಗಳಿಗೆ ಪ್ರದರ್ಶನಕ್ಕೆ ಅವಕಾಶ ನೀಡದೆ, ತೆಲುಗು ಚಿತ್ರಗಳಿಗೆ ಅವಕಾಶ ನೀಡಿರುವುದು ಖಂಡನೀಯ.‌ ಕನ್ನಡ ಚಿತ್ರಗಳು ಬಿಡುಗಡೆಯಾಗಿದ್ದರೂ ಪ್ರದರ್ಶನಕ್ಕೆ ಅವಕಾಶ ನೀಡದೆ ತೆಲುಗು ಚಿತ್ರಗಳನ್ನು ಪ್ರದರ್ಶಿಸುತ್ತಿರುವುದು ಕನ್ನಡಕ್ಕೆ ಮಾಡಿದ ಅವಮಾನ. ಕೇವಲ ಹಣ ಮಾಡುವ ಉದ್ದೇಶದಿಂದ ಚಿತ್ರಮಂದಿರಗಳ ಮಾಲೀಕರು ಅನ್ಯ ಭಾಷೆಯ ಚಿತ್ರಗಳಿಗೆ ಅವಕಾಶ ನೀಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ನಿಸಾರ್ ಅಹಮದ್, ಹರೀಶ್ ಅಖಿಲೇಶ್, ತಿಪ್ಪೇಸ್ವಾಮಿ, ಕರಿಯಪ್ಪ, ಸೈಯದ್ ಖುದ್ದುಸ್, ದೇವರಾಜ್ ಮತ್ತು ಕನ್ನಡಾಭಿಮಾನಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...