ಚಿತ್ರದುರ್ಗ | ಕಾವಾಡಿಗರಹಟ್ಟಿಗೆ ಉಪಲೋಕಾಯುಕ್ತ ನ್ಯಾ. ಫಣೀಂದ್ರ ಭೇಟಿ

Date:

ವರ್ಷದ ಹಿಂದೆ ಕಲುಷಿತ ನೀರು ಸೇವಿಸಿ ಅಮಾಯಕರು ಬಲಿಯಾಗಿದ್ದ ಚಿತ್ರದುರ್ಗದ ಹೊರ ವಲಯದ ಕಾವಾಡಿಗರಹಟ್ಟಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್‌ ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಕೈಗೊಂಡ ಕ್ರಮಗಳ ಬಗ್ಗೆ ಹಾಗೂ ಒಳಚರಂಡಿ ವ್ಯವಸ್ಥೆ, ಓವರ್ ಹೆಡ್ ಟ್ಯಾಂಕ್, ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಮೂಲ ಸೌಕರ್ಯಗಳ ವ್ಯವಸ್ಥೆ ಹೇಗಿದೆ ಎಂಬುದನ್ನು ಜನರಿಂದಲೇ ಕೇಳಿ ತಿಳಿದುಕೊಂಡರು. ಪ್ರತಿ ಮನೆಗೂ ಹೊಸದಾಗಿ ನಳ ಸಂಪರ್ಕ ಕಲ್ಪಿಸಿ ಸಮರ್ಪಕವಾಗಿ ನೀರಿನ ಸೌಲಭ್ಯ ಕಲ್ಪಿಸಲಾಗಿದ್ದು, ಕುಡಿಯುವ ನೀರಿಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಕವಾಡಿಗರಹಟ್ಟಿ ನಿವಾಸಿಗಳು ಮಾಹಿತಿ ನೀಡಿದರು.

ಬಳಿಕ ಮಾತನಾಡಿದ ನ್ಯಾ. ಕೆ ಎನ್ ಫಣೀಂದ್ರ, ಓವರ್ ಹೆಡ್ ಟ್ಯಾಂಕ್‍ಗಳನ್ನು ಕನಿಷ್ಟ 6 ತಿಂಗಳಿಗೊಮ್ಮೆಯಾದರೂ ಸ್ವಚ್ಛಗೊಳಿಸಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು ಎಂದು ನಗರಸಭೆ ಆಯುಕ್ತೆ ಎಂ ರೇಣುಕಾ ಅವರಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾವಾಡಿಗರಹಟ್ಟಿ ಜನರಿಗೆ ನಿವೇಶನ ಹಂಚಿಕೆಗಾಗಿ ಈಗಾಗಲೇ ಮೂರು ಎಕರೆ ಜಮೀನು ಮಂಜೂರಾಗಿದ್ದು, ಆ ಪೈಕಿ 62 ಮಂದಿ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗಿದೆ. ರಸ್ತೆ ಅಗಲೀಕರಣಕ್ಕಾಗಿ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಮೊದಲು ನಿವೇಶನ ಹಂಚಿಕೆಯಲ್ಲಿ ಪ್ರಾಶಸ್ತ್ಯ ನೀಡಬೇಕು. ಉಳಿದ ಕುಟುಂಬಗಳಿಗೆ ಸುತ್ತಮುತ್ತ ಇರುವ ಸರ್ಕಾರಿ ಜಮೀನು ಗುರುತಿಸಿ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡುವಂತೆ ತಾಕೀತು ಮಾಡಿದರು.

ಕಾವಾಡಿಗರಹಟ್ಟಿ ಘಟನೆ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ನಗರಸಭೆ ಪೌರಾಯುಕ್ತರು, ಜಿಲ್ಲಾಧಿಕಾರಿಗಳನ್ನು ಪಾರ್ಟಿಗಳನ್ನಾಗಿ(ಸಾಕ್ಷಿದಾರರು) ಮಾಡಿಕೊಳ್ಳಲಾಗುವುದು. ಬಡಾವಣೆಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತು ಕಾಲಕಾಲಕ್ಕೆ ವರದಿ ನೀಡಬೇಕು. ಇಲ್ಲಿನ ನಿವಾಸಿಗಳಿಗೆ ಅನುಕೂಲ ಕಲ್ಪಿಸಿಕೊಡುವವರೆಗೂ ಪ್ರಕರಣ ಚಾಲ್ತಿಯಿದ್ದು, ಆಗಾಗ್ಗೆ ಪರೀಶೀಲನೆಯಲ್ಲಿರಲಿದೆ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?: ಚಿತ್ರದುರ್ಗ | ಕಾನೂನು, ಸಂವಿಧಾನ ನಮ್ಮ ಧರ್ಮ ಗ್ರಂಥವಾಗಬೇಕು: ಹಿರಿಯ ವಕೀಲೆ ವಿಜಯಲಕ್ಷ್ಮಿ

ಭೇಟಿ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಜೆ ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್ ವಾಸುದೇವರಾಮ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ತಹಶೀಲ್ದಾರ್ ಡಾ ನಾಗವೇಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...