ಚಿತ್ರದುರ್ಗ | ವಕ್ಫ್ ಆಸ್ತಿ ವಿವಾದ; ಆತಂಕ ನಿವಾರಣೆಗೆ ಸರ್ಕಾರ ಕ್ರಮ ಕೈಗೊಳ್ಳುವಂತೆ ಮಾದಾರ ಗುರುಪೀಠದ ಶ್ರೀ ಮನವಿ

Date:

ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಮತ್ತು ವಕ್ಫ್‌ ಬೋರ್ಡ್ ಜಮೀನು ಮತ್ತು ಆಸ್ತಿಗಳ ಇಂಡೀಕರಣ ವಿವಾದ ಜೋರಾಗಿ ಸದ್ದು ಮಾಡುತ್ತಿದ್ದು, ರೈತರ ಜಮೀನುಗಳನ್ನು ವಕ್ಸ್ ಬೋರ್ಡ್‌ಗೆ ನೀಡಿರುವುದು ಬೆಳಕಿಗೆ ಬಂದಿರುವುದರಿಂದ ವಿವಾದ ಸೃಷ್ಟಿಸಿದೆ.

ವಕ್ಫ್‌ ಆಸ್ತಿ ವಿವಾದದಿಂದ ರೈತರು ಒಳಗೊಂಡಂತೆ ಹಿಂದೂ, ಕ್ರೈಸ್ತ, ಮುಸ್ಲಿಂ ಬಾಂಧವರು ಆತಂಕಕ್ಕೆ ಒಳಗಾಗಿದ್ದಾರೆ. ಇದರ ಭಯ ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕಾನೂನು ಜಾರಿಗೆ ತರಬೇಕು. ಅನಧಿಕೃತವಾಗಿ ಹಿಂದೂ, ಮುಸ್ಲಿಂ, ಕ್ರೈಸ್ತ ಭೂಮಿಗಳ ಮೇಲೆ ವಕ್ಸ್ ಹಿಡಿತ ಸಾಧಿಸುವುದನ್ನು ತಡೆಯಬೇಕು ಎಂದು ಚಿತ್ರದುರ್ಗ ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, “ವಿಜಯಪುರ, ಹಾವೇರಿ, ಬಾಗಲಕೋಟೆ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಿಂದ ರೈತರು ಹಾಗೂ ಶ್ರೀಸಾಮಾನ್ಯರ ಭೂಮಿಯ ಅತಿಕ್ರಮಣದ ವಿವರಗಳು ನಿತ್ಯವೂ ಹೊರ ಬರುತ್ತಿವೆ. ಹಲವು ಜಿಲ್ಲೆಗಳಲ್ಲಿ ರೈತರು, ಶ್ರೀಸಾಮಾನ್ಯರು ಭೂಮಿ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಸಂಬಂಧಿತರ ಸಚಿವರು ವಕ್ಫ್‌ ಆಸ್ತಿ ಅತಿಕ್ರಮಣದ ನೆಪದಲ್ಲಿ ರೈತರಿಗೆ ನೋಟಿಸ್‌ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿರುವುದು ಸಮಸ್ಯೆ ಉಲ್ಬಣಿಸಲು ಕಾರಣವಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರ ಇದನ್ನು ಗಂಭೀರ ವಿಷಯವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು. ಸೂಕ್ತ ತೀರ್ಮಾನ ಕೈಗೊಳ್ಳುವುದರ ಮೂಲಕ ವಕ್ಫ್‌ ಆಕ್ರಮಣ ನೀತಿಗೆ ತಡೆ ನೀಡಬೇಕು. ಅಗತ್ಯ ಬಂದಲ್ಲಿ 1975ರ ಗೆಜೆಟ್ ನೋಟಿಫಿಕೇಷನ್ ಹಿಂದಕ್ಕೆ ಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಜಾಮಿಯಾ ಮಸೀದಿ ಅಧ್ಯಕ್ಷರಾಗಿ 18 ವರ್ಷ ಸೇವೆ ಸಲ್ಲಿಸಿದ್ದ ಜನಾಬ್ ಅಬ್ದುಲ್ ವಾಜಿದ್ ಸಾಬ್‌ ವಿಧಿವಶ

ಸಿಎಂ ಸಿದ್ದರಾಮಯ್ಯ ಹಾಲಿ ರೈತರಿಗೆ ನೀಡಿರುವ ನೋಟಿಸ್ ವಾಪಸ್‌ ಪಡೆದಿರಬಹುದು. ಇದು ತಾತ್ಕಾಲಿಕ ಕ್ರಮವಾಗುತ್ತದೆ. ಮುಂದೆ ಬರುವ ಸರ್ಕಾರಗಳು ಇದೇ ನೀತಿ ಅನುಸರಿಸುತ್ತಾರೆನ್ನುವ ಖಚಿತತೆ ಇಲ್ಲ. ಈ ಹಿನ್ನೆಲೆಯಲ್ಲಿ ಈಗಲೇ ಇದಕ್ಕೊಂದು ಶಾಶ್ವತ ಪರಿಹಾರ ಕಂಡುಹಿಡಿಯಬೇಕು. ಜನಸಾಮಾನ್ಯರ ಆತಂಕವನ್ನು ದೂರ ಮಾಡುವತ್ತ ರಾಜ್ಯ ಸರ್ಕಾರ ಕಟ್ಟುನಿಟ್ಟಾದ, ಸ್ಪಷ್ಟವಾದ ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...