ಚಿತ್ರದುರ್ಗ | ಲಿಂಗಾಯತ ಸಮುದಾಯದಿಂದ ಗೆದ್ದ ಯಡಿಯೂರಪ್ಪ, ಸಮುದಾಯದ ವಿರುದ್ಧವೇ ಮಾತನಾಡುವುದು ಸರಿಯಲ್ಲ: ಅಗ್ರಹಾರ ಮಂಜುನಾಥ್

Date:

ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಏನಾದರೂ ಶಾಸಕರಾಗಿದ್ದರೆ ಅದು ಯಡಿಯೂರಪ್ಪ ಹಾಗೂ ಅವರ ಕುಟುಂಬದ ಕೃಪಾಶೀರ್ವಾದದಿಂದ ಅದನ್ನು ಅವರು ಮನಗಾಣಬೇಕೆಂದು ಹೊಳಲ್ಕೆರೆಯ ಅಗ್ರಹಾರದ ಮಂಜುನಾಥ್ ಹೇಳಿದರು.

ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಲಿಂಗಾಯಿತ ಸಮುದಾಯದ ಬಗ್ಗೆ ಹಾಗೂ ಯಡಿಯೂರಪ್ಪ ಅವರ ಬಗ್ಗೆ ಕೀಳಾಗಿ ಮಾತಾಡುವುದು ಸರಿಯಲ್ಲ. ಕೂಡಲೇ ಕ್ಷಮೆ ಕೇಳಬೇಕು ಎಂದರು.

ಇನ್ನು ಗೋವಿಂದ ಕಾರಜೋಳ ಅವರು ನಿರಾತಂಕವಾಗಿ ಚುನಾವಣೆಯನ್ನು ಮಾಡಬಹುದು. ನಾವು ಹೆಚ್ಚಿನ ಮತಗಳನ್ನು ಹಾಕಿಸುತ್ತೇವೆ ಎಂದರು. ಹೊಳಲ್ಕೆರೆ ಶಾಸಕ ಚಂದ್ರಪ್ಪ ತಮ್ಮ ಚುನಾವಣೆಯನ್ನು ಮಾಡಿದ್ದಾರೆಯೇ ಹೊರೆತು ಬೇರೆಯಾವ ಚುನಾವಣೆಯನ್ನು ಮಾಡಿಲ್ಲ. ಇಂದು ಕೂಡ ತಮಗೆ ಬೇಕಿರುವ ಕೆಲವು ಜನರನ್ನು ಇಟ್ಟುಕೊಂಡು ಸಭೆ ಮಾಡಿದ್ದಾರೆ. ಅವರಿಗೆ ತಾಕತ್ ಇದ್ದರೆ ಅವರಿಗೆ ಗಂಡಸುತನ ಇದ್ದರೆ ಅವರು ಒಂದು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದು ಬರಲಿ, ಎಂಎಲ್‌ಎ ನಿಗಮ ಮಂಡಳಿ ಸ್ಥಾನ ನಮಗೆ ಬೇಕು ಎಂದು ಹೇಳುತ್ತಾರೆ. ಕುಟುಂಬಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆಯೇ ಹೊರೆತು ಸಂಘ ಸಂಸ್ಥೆ ಪಕ್ಷಗಳಿಗಾಗಿ ಚುನಾವಣೆ ಮಾಡಿಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಸದಸ್ಯ ಜಯಸಿಂಹ ಕಾಟ್ರೋತ್ ಅವರು ಮಾತನಾಡಿ ಇಂತಹ ವ್ಯಕ್ತಿ ಬಿಜೆಪಿ ಯಡಿಯೂರಪ್ಪ ಅವರ ಬಗ್ಗೆ ಮಾತಾಡುತ್ತಾರೆ. ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 10 ಸದದಸ್ಯರನ್ನು ಗೆಲ್ಲಿಸಿಕೊಳ್ಳುವ ಗಂಡಸುತವಿರಲಿಲ್ಲವೇ? ಸದಾನಂದಗೌಡರು ಸಿಎಂ ಈಶ್ವರಪ್ಪ ನಂತವರಿಗೇ ಟಿಕೆಟ್ ಕೊಟ್ಟಿಲ್ಲ. ಅವರಿಗಿಂತ ಇವರು ದೊಡ್ಡವರ ಅವರಿಗಿಂತ ಇವರು ದೊಡ್ಡವರಾ? ಪಕ್ಷ ಯಾರಿಗೆ ಟಿಕೆಟ್ ಕೊಟ್ಟಿದಿಯೋ ಅವರ ಪರ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಪಾರ್ಟಿವಿಥ್ ಎ ಡಿಫರೆನ್ಸ್ ಗೊತ್ತಿಲ್ಲ. ಇದರಿಂದ ಈ ರೀತಿ ಮಾತಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಯ ನಿಷ್ಠಾವಂತರ ಶಾಪ ತಟ್ಟುತ್ತದೆ. ಕೂಡಲೇ ಚಂದ್ರಪ್ಪ ಬೇಷರತ್ ಕ್ಷಮೆ ಯಾಚಿಸಿ ಬಿಜೆಪಿ ಪರವಾಗಿ ಕೆಲಸ ಮಾಡಿದರೆ ಗೌರವ ಬರುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಯಸಿಂಹ ಕಾಟ್ರೋತ್, ಅಗ್ರಹಾರ ಬಸವರಾಜ್,  ತಿಪ್ಪೇಸ್ವಾಮಿ ಮತ್ತಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...