ಚಿತ್ರದುರ್ಗ | ಅತ್ಯಾಚಾರ ಆರೋಪಿ ಶಿವಮೂರ್ತಿ ಮುರುಘಾ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ

Date:

ಮಠದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತನಾಗಿರುವ ಶಿವಮೂರ್ತಿ ಮುರುಘಾ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ಮುರುಘಾ ಅವರ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಅವರನ್ನು ದಾವಣಗೆರೆಯ ವಿರಕ್ತ ಮಠದಲ್ಲಿ ಸೋಮವಾರ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ಡಿ.2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶೆ ಬಿ.ಕೆ ಕೋಮಲಾ ಆದೇಶಿಸಿದ್ದಾರೆ.

ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ 2022ರ ಸೆಪ್ಟೆಂಬರ್ 1ರಂದು ಮುರುಘಾ ಅವರನ್ನು ಬಂಧಿಸಲಾಗಿತ್ತು. ಅಂದಿನಿಂದ ಅವರನ್ನು ಚಿತ್ರದುರ್ಗದ ಕಾರಾಗೃಹದಲ್ಲಿ ಇರಿಸಲಾಗಿತ್ತು. ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆರೋಪಿ ಮುರುಘಾ ಅವರ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿತ್ತು. ಬಳಿಕ, ಮುರುಘಾ ಅವರ ವಕೀಲು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ಒಂದು ಪ್ರಕರಣದಲ್ಲಿ ಜಾಮೀನು ನೀಡಿತ್ತು. ನವೆಂಬರ್ 16ರಂದು ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಎರಡನೇ ಪ್ರಕರಣದಲ್ಲಿ ಈಗ ಮತ್ತೆ ಜೈಲು ಸೇರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...