ಚಿತ್ರದುರ್ಗ | ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನ, ಕೃಷಿ ಘಟಕಗಳಿಗೆ ರೈತರ ಅರ್ಜಿ ಆಹ್ವಾನ.‌

Date:

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆ ವಿಸ್ತರಣೆ, ಕೃಷಿ ಪರಿಕರ, ಕೃಷಿ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ರೈತರು 2025 ಜೂನ್ 20ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1002057458
ರೈತರಿಗೆ ಸಹಾಯಧನ, ಕೃಷಿ ಘಟಕಗಳಿಗೆ ಚಿತ್ರದುರ್ಗ ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿಯಲ್ಲಿ ದಾಳಿಂಬೆ, ಕಂದು ಬಾಳೆ/ಅಂಗಾಂಶ ಬಾಳೆ, ಪಪ್ಪಾಯ, ಡ್ರಾಗನ್ ಪ್ರೂಟ್ ಹಣ್ಣಿನ ಬೆಳೆಗಳು, ಹೈಬ್ರೆಡ್ ತರಕಾರಿ, ಕಟ್ ಪ್ಲವರ್ಸ್ (ಗುಲಾಬಿ, ಜೆರ್ಬೆರಾ, ಕಾರ್ನೇಷನ್) ಸುಗಂಧರಾಜ, ಇತರೆ ಹೂವುಗಳು ಮತ್ತು ಕರಿಮೆಣಸು ಸೇರಿದಂತೆ ಹಲವು ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಅಣಬೆ ಉತ್ಪಾದನಾ ಘಟಕ, ಬಹುವಾರ್ಷಿಕ ಸಾಂಬಾರು ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಮತ್ತು  ಪುನಶ್ಚೇತನ ಕಾರ್ಯಕ್ರಮ, ಪಾಲಿಥೀನ್ ನರ್ಸರಿ ಘಟಕ, ಪಕ್ಷಿ ನಿರೋದಕ ಬಲೆ, ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಪಾಲಿಹೌಸ್, ಪ್ಲಾಸ್ಟಿಕ್ ಮಲ್ಚಿಂಗ್, ಕಳೆ ನಿಯಂತ್ರಕ ಮ್ಯಾಟ್ (ವೀಡ್ ಮ್ಯಾಟ್), ತರಕಾರಿ ಬೆಳೆಗಳಿಗೆ ಆಧಾರ ನೀಡುವ ವ್ಯವಸ್ಥೆ, ಎರೆಹುಳು ಗೊಬ್ಬರ ಘಟಕ, ಜೇನು ಪೆಟ್ಟಿಗೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೇ ಕೃಷಿ ಉಪಕರಣಗಳಾದ 20 ಹೆಚ್.ಪಿ ವರೆಗಿನ ಟ್ರ್ಯಾಕ್ಟರ್, ಪವರ್ ಟ್ರಿಲ್ಲರ್, ಭೂಮರ್ ಸ್ಪ್ರೆಯರ್, ಶೀಥಲಗೃಹ ಘಟಕ, ಪ್ರಾಥಮಿಕ ಸಂಸ್ಕರಣಾ ಘಟಕ, ಸೋಲಾರ್ ಕ್ರಾಪ್ ಡ್ರೈಯರ್, ಪ್ಯಾಕ್‍ಹೌಸ್ ಹಾಗೂ ಈರುಳ್ಳಿ ಶೇಖರಣ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿರುತ್ತದೆ.

ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ 2025ರ ಜೂನ್ 20 ರೊಳಗೆ ನಿಯಮಾನುಸಾರ ಸಲ್ಲಿಸಲು ಕೋರಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಫಲಿತಾಂಶ ಕುಂಠಿತ ಸರ್ಕಾರಿ ಶಾಲೆ, ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕದ ಮೇಲೆ ಕ್ರಮಕ್ಕೆ ರೈತ ಸಂಘ ಆಗ್ರಹ.

ಹೆಚ್ಚಿನ ಮಾಹಿತಿಗಾಗಿ ರೈತರು ಆಯಾ ತಾಲ್ಲೂಕಿನ ಸಂಬಂಧಪಟ್ಟ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಜಂಟಿನಿರ್ದೇಶಕರು ತಿಳಿಸಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಹಾಯ್ಕಲ್ ಗ್ರಾಮದಲ್ಲಿ ಚರಂಡಿ ಅವ್ಯವಸ್ಥೆ; ಅನುದಾನವಿಲ್ಲ ಎಂದ ಪಂಚಾಯಿತಿ, ಶಾಸಕರಿಗೆ ದೂರು

​ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿ ಬೆಳಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಯ್ಕಲ್...

ಚಿತ್ರದುರ್ಗ | ಲಿಂಗ ಸಮಾನತೆಯಿಂದ ಮಹಿಳಾ ಸಬಲೀಕರಣ ಸಾಧ್ಯ : ನ್ಯಾ.ಎಂ.ವಿಜಯ್

ಸಮಾಜದಲ್ಲಿ ಲಿಂಗ ಸಮಾನತೆ ಕಾಯ್ದುಕೊಳ್ಳುವ ಮೂಲಕ ಮಹಿಳೆಯರಿಗೆ ಗೌರವ ಮತ್ತು ಸಮಾನ...

ಚಿತ್ರದುರ್ಗ |ನೀರು ಸರಬರಾಜು ವಿಳಂಬ; ನಗರಸಭೆ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಸಮಾಧಾನ

ಚಿತ್ರದುರ್ಗ ನಗರದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದಕ್ಕೆ ನಗರಸಭೆ...

ಚಿತ್ರದುರ್ಗ | ದಂತ ವೈದ್ಯಕೀಯ ಸ್ನಾತಕೋತ್ತರ ಪದವಿಯಲ್ಲಿ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಡಾ. ಸಾಧನಾ ಎಸ್. ಎಂ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆಸಿದ ದಂತ ವೈದ್ಯಕೀಯ ಸ್ನಾತಕೋತ್ತರ...