ಚಿತ್ರದುರ್ಗ | ಅಡಿಕೆ, ತೆಂಗು, ಹನಿ ನೀರಾವರಿ ಉಪಕರಣಗಳು ಬೆಂಕಿಗಾಹುತಿ, ರೈತ ಕಂಗಾಲು.

Date:

ಅಗ್ನಿ ಅವಘಡದಿಂದ ಅಡಿಕೆ ಸೇರಿದಂತೆ ತೆಂಗಿನ ಮರಗಳು, ಹನಿ ನೀರಾವರಿ ಉಪಕರಣಗಳು ಬೆಂಕಿಗಾಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕ್ಯಾದಿಗುಂಟೆ ಗ್ರಾಮದಲ್ಲಿ ನಡೆದಿದೆ.

ಚಳ್ಳಕೆರೆ ತಾಲೂಕಿನ ಕ್ಯಾದಿಗುಂಟೆ ಗ್ರಾಮದ ಶಿವಾನಂದಪ್ಪ ಎನ್ನುವವರಿಗೆ ಸುಮಾರು 1700 ಅಡಿಕೆ ಮರಗಳು, ನೂರಕ್ಕೂ ಹೆಚ್ಚು ತೆಂಗಿನ ಮರಗಳು, ಹಾನಿ ನೀರಾವರಿ ಉಪಕರಣಗಳು ಸೇರಿದಂತೆ ಇತರೇ ಮರಗಳು ಬೆಂಕಿಗಾಹುತಿಯಾಗಿ ಜೀವನಾಧಾರವಾಗಬೇಕಿದ್ದ ತೋಟ ಸುಟ್ಟು ಹೋಗಿರುವುದು ರೈತನಿಗೆ ಬರಸಿಡಿಲು ಬಡಿದಂತಾಯಿತು.

1001774822
ಬೆಂಕಗಾಹುತಿಯಾಗಿರುವ ಅಡಿಕೆ ತೋಟ

“ಸುಮಾರು ಎಂಟು ವರ್ಷ ವಯಸ್ಸಿನ ಅಡಿಕೆ ಮರಗಳು ಸುಟ್ಟು ಹೋಗಿದ್ದು, ಸಂಪೂರ್ಣವಾಗಿ ನಾಶವಾಗುವ ಅಂತ ತಲುಪಿವೆ. ಎಂಟತ್ತು ವರ್ಷಗಳಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹಾಕಿದ್ದ ಅಡಿಕೆ ತೋಟ ಮತ್ತು ತೆಂಗಿನ ಮರಗಳು ಆಕಸ್ಮಿಕ ಬೆಂಕಿಗಾಹುತಿಯಾಗಿದ್ದು , ಹೇಗೆ ಬೆಂಕಿ ತಗುಲಿದೆ ಎನ್ನುವ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಅಡಿಕೆ ತೋಟ ಈ ವರ್ಷದಿಂದ ಫಲ ಬಿಡಲು ಶುರು ಮಾಡಿದ್ದು ರೈತ ಶಿವಾನಂದಪ್ಪನ ಮುಂದಿನ ಜೀವನಾಧಾರವಾಗಬೇಕಿದ್ದ ತೋಟ ನಾಶವಾಗಿದ್ದು, ಸಾಲದ ಹೊರೆ ಹೇಗೆ ಎದುರಿಸಬೇಕು ಎಂದು ತಿಳಿಯದಾಗಿದೆ.‌ ಸಾಲ ಮಾಡಿ ಬೋರ್ವೆಲ್ಗಳನ್ನು ಕೊರೆಸಿ, ಇಷ್ಟು ವರ್ಷ ತೋಟವನ್ನು ಸಾಕಿದ್ದೇವೆ. ಈಗ ತೋಟ ಬೆಂಕಿಗಾಹುತಿಯಾಗಿರುವುದು ನಾವು ವಿಷ ಕುಡಿಯುವ ಪರಿಸ್ಥಿತಿಯನ್ನು ತಂದಂತಾಗಿದೆ” ಎಂದು ರೈತ ಅಳಲನ್ನು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001774823 1

ಸ್ಥಳಕ್ಕೆ ತೋಟಗಾರಿಕೆ, ಹಿರಿಯ ನಿರ್ದೇಶಕ ವಿರೂಪಾಕ್ಷಪ್ಪ, ಕಂದಾಯ ನಿರೀಕ್ಷಕ ರಾಜೀವ್ ಭೇಟಿ ನೀಡಿದ್ದು ‘ಅಡಿಕೆ ತೋಟ ಬೆಂಕಿಯಾಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡಲಿದ್ದು, ವರದಿ ನೀಡುತ್ತೇವೆ. ಸರ್ಕಾರದಿಂದ ಬರುವ ಪರಿಹಾರವನ್ನು ರೈತರಿಗೆ ಕೊಡಿಸಲು ಅಗತ್ಯಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಹಬ್ಬಕ್ಕೆ ಗ್ರಾಮ ಸ್ವಚ್ಛಗೊಳಿಸದ ಬಂಡ ಅಧಿಕಾರಿಗಳು, ರೊಚ್ಚಿಗೆದ್ದ ವೃದ್ಧನಿಂದ ಚರಂಡಿ ಸ್ವಚ್ಛತೆ.

ಸ್ಥಳಕ್ಕೆ ಅಖಂಡ ಕರ್ನಾಟಕ ರೈತ ಸಂಘದ ಮುಖಂಡರಾದ ನಾಗರಾಜ್, ಚಿದಾನಂದಗೌಡ , ದೇವೇಂದ್ರಪ್ಪ, ಹನುಮಂತರಾಯ ಸೇರಿದಂತೆ ಹಲವು ರೈತರು ಸ್ಥಳದಲ್ಲಿದ್ದು, “ಕಳೆದ ವರ್ಷ ಬೇರೊಬ್ಬ ರೈತರ ಬೆಳೆ ಸುಟ್ಟು ಹೋಗಿದೆ. ಅವರಿಗೆ ಇದುವರೆಗೂ ಪರಿಹಾರ ಬಂದಿಲ್ಲ. ಈಗ ಶಿವಾನಂದಪ್ಪನ ತೋಟ ಸುಟ್ಟಿದೆ. ಹತ್ತು ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ಕೂಡಲೇ ಜಿಲ್ಲಾಡಳಿತ ಮತ್ತು ಸ್ಥಳೀಯ ಅಧಿಕಾರಿಗಳು ರೈತನಿಗೆ ನ್ಯಾಯ ಒದಗಿಸಿ ಅಗತ್ಯ ಕ್ರಮ ಕೈಗೊಂಡು ಸೂಕ್ತ ಪರಿಹಾರ ಒದಗಿಸಿಕೊಡಬೇಕು” ಎಂದು ಒತ್ತಾಯಿಸಿದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...