ಚಿತ್ರದುರ್ಗ | ಹಬ್ಬಕ್ಕೆ ಗ್ರಾಮ ಸ್ವಚ್ಛಗೊಳಿಸದ ಬಂಡ ಅಧಿಕಾರಿಗಳು, ರೊಚ್ಚಿಗೆದ್ದ ವೃದ್ಧನಿಂದ ಚರಂಡಿ ಸ್ವಚ್ಛತೆ.

Date:

ಗ್ರಾಮಗಳಲ್ಲಿ ಹಬ್ಬ ಹರಿದಿನ, ಜಾತ್ರೆಗಳು ಬಂದಿತೆಂದರೆ ಆರಂಭಕ್ಕೆ ಮುನ್ನ ಚರಂಡಿ, ರಸ್ತೆ ಸೇರಿದಂತೆ ಗ್ರಾಮವನ್ನು ವರ್ಷಕ್ಕೆ ಒಂದೆರಡು ಬಾರಿ ಸ್ವಚ್ಛಗೊಳಿಸುವುದು ಮಾಮೂಲಿ. ಆದರೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸದೇ ತುಂಬಿ ದುರ್ವಾಸನೆ ಸೂಸುವ ಚರಂಡಿಯನ್ನು ಸ್ವಚ್ಛಗೊಳಿಸದ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳು, ಆಡಳಿತದ ವಿರುದ್ಧ ರೊಚ್ಚಿಗೆದ್ದ ವೃದ್ಧ ಹನುಮಂತಪ್ಪ ಯುಗಾದಿ ಹಬ್ಬದ ಆರಂಭಕ್ಕೆ ಮುನ್ನ ತಾನೇ ಚರಂಡಿಗಿಳಿದು ಸ್ವಚ್ಛ ಮಾಡಿದ ಘಟನೆ ನಡೆದಿದೆ.

1001763870
ಚರಂಡಿ ಸ್ವಚ್ಛಗೊಳಿಸುತ್ತಿರುವ ಹನುಮಂತಪ್ಪ

ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಸಂಪೂರ್ಣ ವಿಫಲರಾಗಿದ್ದಾರೆ. ಈ ನಿರ್ಲಕ್ಷ್ಯದಿಂದ ಬೇಸತ್ತು ವೃದ್ದ ಹನುಮಂತಪ್ಪ ಎಂಬ ವ್ಯಕ್ತಿ ತಮ್ಮ ಮನೆಯ ಮುಂಭಾಗದಲ್ಲಿ ಚರಂಡಿಯನ್ನು ಅವರೇ ಸ್ವಚ್ಛತೆ ಮಾಡಿಕೊಂಡಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಗ್ರಾಮಸ್ಥರು, ಸಾರ್ವಜನಿಕರು ಬಂಡ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲೆಯ ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕಿದೆ.‌ ಇತ್ತ ಕಡೆ ಗಮನ ಹರಿಸಿ ಕ್ರಮ ಕೈಗೊಳ್ಳುತ್ತಾರಾ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

1001763872
ಹೂಳು ತುಂಬಿದ ಚರಂಡಿ

ಇತ್ತೀಚಿಗೆ ಗ್ರಾಮಗಳು ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿ ಸ್ವಚ್ಛತೆ ಗ್ರಾಮಗಳಲ್ಲಿ ಮರೀಚಿಕೆಯಾಗಿದೆ. ಕಸ ಸಂಗ್ರಹಕ್ಕೆ ನಿಯೋಜಿಸಿದ್ದ ಕಸಸಂಗ್ರಹ ಗಾಡಿಗಳು ಗ್ರಾಮ ಪಂಚಾಯಿತಿ ಮುಂದೆಯೇ ಕಸವಾಗುತ್ತಿದೆ. ಬಹಳಷ್ಟು ಹಳ್ಳಿಗಳು ಪ್ಲಾಸ್ಟಿಕ್ ಕಸದ ತ್ಯಾಜ್ಯದಿಂದ ತುಂಬಿ ತುಳುಕುತ್ತಿವೆ. ಇದರ ಬಗ್ಗೆ ಗಮನಹರಿಸಬೇಕಿದ್ದ ಅಧಿಕಾರಿಗಳು ತಮ್ಮ ತಮ್ಮ ಮನೆಗಳನ್ನು ಸ್ವಚ್ಛಗೊಳಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮರಳುಗಾರಿಕೆ ನಿಷೇಧಿಸಿ, ತುಂಗಭದ್ರ ನದಿ ಸಂರಕ್ಷಣೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...