ಚಿತ್ರದುರ್ಗ | ಬಸವಣ್ಣ, ಅಂಬೇಡ್ಕರ್ ಜೀವನದುದ್ದಕ್ಕೂ ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದರು; ದಸಂಸ ಮುಖಂಡ ಗುರುಮೂರ್ತಿ.

Date:

ಬಸವಣ್ಣ, ಡಾ.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ರವರು ಜೀವನದುದ್ದಕ್ಕೂ ಅಸಮಾನತೆ, ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದ ಮಹನೀಯರು ಎಂದು ಚಿತ್ರದುರ್ಗದಲ್ಲಿ ದಲಿತ ಸಂಘರ್ಷ ಸಮಿತಿಯ (ಪ್ರೊ.ಕೃಷ್ಣಪ್ಪ) ರಾಜ್ಯ ಸಂಚಾಲಕ ಎಂ ಗುರುಮೂರ್ತಿ ಸ್ಮರಿಸಿದರು.

1001950549

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮದ್ದೇರು ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿಯ ವತಿಯಿಂದ ಆಯೋಜಿಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜಯಂತಿ ಹಾಗೂ ಡಾಕ್ಟರ್ ಬಾಬು ಜಗಜೀವನ್ ರಾಮ್ ರವರ 118ನೇ ಜಯಂತಿ ಹಾಗೂ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

1001950553

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು “ಬಾಬಾ ಸಾಹೇಬ್ ಅಂಬೇಡ್ಕರ್ ರವರು ವಿಶ್ವ ಜ್ಞಾನಿಯಾಗಿದ್ದು, ಜಗತ್ತಿನ ಶ್ರೇಷ್ಠ ಸಂವಿಧಾನವನ್ನು ಭಾರತಕ್ಕೆ ನೀಡಿದ್ದಾರೆ.‌ ಬಾಬು ಜಗಜೀವನ್ ರಾಮ್ ಅವರು ಕೂಡ ದಲಿತರ ಏಳಿಗೆಗಾಗಿ ಶ್ರಮಿಸಿದ್ದಾರೆ.‌ 12ನೇ ಶತಮಾನದಲ್ಲಿಯೇ ಬಸವಣ್ಣನವರು ಅಸ್ಪೃಶ್ಯತೆ, ಜಾತಿ ನಿರ್ಮೂಲನೆಗಾಗಿ ಶ್ರಮಿಸಿದ್ದಾರೆ.‌ ಈ ಮೂವರು ಮಹನೀಯರ ಜಯಂತಿಗಳನ್ನು ಒಟ್ಟಿಗೆ ಆಚರಿಸುತ್ತಿರುವುದು ವಿಶೇಷ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001950546

“ಇಂದು ಅಸ್ಪೃಶ್ಯತೆ ತಾಂಡವವಾಡುತ್ತಿದೆ. ದಲಿತರು ಮುಂಚೂಣಿಗೆ ಬಂದರೆ ಸಹಿಸುವುದಿಲ್ಲ. ಹಲ್ಲೆ ಮಾಡುವ ಕೆಲಸ ನೆಡೆಯುತ್ತಿದೆ. 12ನೆಯ ಶತಮಾನದಲ್ಲಿಯೇ ಬಸವಣ್ಣನವರು ಸಮಾಜದ ಅಸಮಾನತೆ ವಿರುದ್ಧ ಹೋರಾಟ ಪ್ರಾರಂಭಿಸಿದರು. ಅಂದು ದೇವಸ್ಥಾನದ ಪ್ರವೇಶ ಇರಲಿಲ್ಲ. ಕೆರೆ ಬಾವಿಗಳನ್ನು ಮುಟ್ಟಿ ಉಪಯೋಗಿಸುವ ಹಾಗಿರಲಿಲ್ಲ. ಸಾಮಾಜಿಕವಾಗಿ ದೂರ ಇಟ್ಟಂತಹ ಕಾಲದಲ್ಲಿ ಬಸವಣ್ಣನವರು ನಮಗೆ ಬೆಳಕಾಗಿ ಬಂದವರು. ನಂತರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಸ್ಪೃಶ್ಯತೆ ನಿವಾರಣೆಗೆ ಸಮಾನತೆಗೆ ಜೀವನದುದ್ದಕ್ಕೂ ಹೋರಾಟ ನೆಡೆಸಿದ್ದರು.‌ ದಲಿತ ಸಂಘರ್ಷ ಸಮಿತಿಯು ಪ್ರೊ. ಕೃಷ್ಣಪ್ಪನವರ ಆಶಯದಂತೆ ಅಂಬೇಡ್ಕರ್ ಅವರ ಸಾಮಾಜಿಕ ಸಮಾನತೆ, ಅವರ ವಿಚಾರಧಾರೆಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡುತ್ತಿದೆ” ಎಂದು ತಿಳಿಸಿದರು.

1001950547

ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜಯಂತಿ ಹಾಗೂ ಡಾಕ್ಟರ್ ಬಾಬು ಜಗಜೀವನ್ ರಾಮ್ ರವರ 118ನೇ ಜಯಂತಿ ಹಾಗೂ ಬಸವೇಶ್ವರ ಜಯಂತಿಯ ಕಾರ್ಯಕ್ರಮದಲ್ಲಿ ದಲಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಮನೆಗೊಂದು ಸಸಿ ವಿತರಣೆ ಮಾಡುವ ಮೂಲಕ ಆಚರಿಸಿದ್ದು ವಿಶೇಷವಾಗಿತ್ತು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಅಪಘಾತ, ಓರ್ವ ಸಾವು.

1001950544

ಕಾರ್ಯಕ್ರಮದಲ್ಲಿ ದಸಂಸ ಗ್ರಾಮ ಶಾಖೆ ಅಧ್ಯಕ್ಷ ಮಂಜುನಾಥ, ಶಾಖೆ ಸಂಚಾಲಕ ಡಿ ರಾಮ, ಗೌರವ ಉಪಸ್ಥಿತಿಯಪ್ಪ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯ್ಯಣ್ಣ, ಕೆಇಬಿ ಇಂಜಿನಿಯರ್ ವಿಜಯಕುಮಾರ್, ಪ್ರೊಫೆಸರ್ ವಿ ನಾಗಪ್ಪ, ಚಿತ್ರಹಳ್ಳಿ ಉಪನಿರೀಕ್ಷಕ ಕಾಂತರಾಜ್, ದಸಂಸ ಮುಖಂಡರಾದ ನವೀನ್ ಮದ್ದೇರು, ಸುಂದರಮೂರ್ತಿ, ಕುಬೇರಪ್ಪ, ಜಗದೀಶ್, ರಂಗಪ್ಪ, ಅಶೋಕ್, ಮನು, ಸ್ವಾಮಿ, ಕಲ್ಲೇಶ್, ರಘು, ದಿವಾಕರ್, ಅಜ್ಜಪ್ಪ, ಶೇಖರಪ್ಪ, ಜಯಪ್ಪ, ಲೋಕಪ್ಪ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...