ಚಿತ್ರದುರ್ಗ | ರಾತ್ರಿ ವೇಳೆ ಜಮೀನಿನಲ್ಲಿ ರೈತನ ಮೇಲೆ ಕರಡಿ ದಾಳಿ.‌

Date:

ಅಡಿಕೆ ತೋಟದಲ್ಲಿ ರಾತ್ರಿ ನೀರು ಹಾಯಿಸಲು ಹೋಗಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಅಳಗವಾಡಿಯಲ್ಲಿ ನಡೆದಿದೆ.

1001727779

ಚಿತ್ರದುರ್ಗ ತಾಲೂಕಿನ ಸಿರಿಗೆರೆ ಸಮೀಪದ ಅಳಗವಾಡಿ ಗ್ರಾಮದ ಶಿವಪ್ಪ ಹಾಗೂ ಅವರ ಮಗ ರಂಗನಾಥ್ (25)  ಇಬ್ಬರು ಶುಕ್ರವಾರ ರಾತ್ರಿ ವಿದ್ಯುತ್ ಗೆ ಬೋರ್ವೆಲ್ ನಿಂದ ಅಡಿಕೆ ತೋಟಕ್ಕೆ ನೀರು ಹಾಯಿಸಲು ಜಮೀನಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಯುವಕ ರಂಗನಾಥ್ ನೀರು ಹಾಯಿಸುವ ವೇಳೆ ಆಯಾಸ ನಿವಾರಿಸಿಕೊಳ್ಳಲು ಹಲಸಿನ ಮರದ ಕೆಳಗೆ ಮಲಗಿದ್ದಾನೆ.

ಈ ವೇಳೆ ರಂಗನಾಥ್ ಮೇಲೆ ಕರಡಿ ಏಕಾಏಕಿ ದಾಳಿ ನಡೆಸಿದ್ದು, ತಲೆಯ ಭಾಗಕ್ಕೆ ಬಾಯಿ ಹಾಕಿ ಕಚ್ಚಿದೆ. ಕೈಯಿಂದ ತರಚಿದಂತೆ ಮಾಡಿದ್ದು ತೀವ್ರ ರಕ್ತಸ್ರಾವವಾಗಿ ಕರಡಿ ದಾಳಿಗೆ ಸಿಲುಕಿ ಬಿಡಿಸಿಕೊಳ್ಳಲಾಗದೆ ಕಿರುಚುತ್ತಿರುವುದನ್ನು ಕೇಳಿ ದೂರದಲ್ಲಿದ್ದ ತಂದೆ ಶಿವಪ್ಪ ಓಡಿ ಬಂದು ಕರಡಿಯನ್ನು ಓಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001727778

ತಕ್ಷಣ ಬೈಕ್ ಸಹಾಯದಿಂದ ಪುತ್ರನನ್ನು ಸಿರಿಗೆರೆ, ದಾವಣಗೆರೆ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಆಗ್ರಹ.

ರೈತರಿಗೆ ಹೆಚ್ಚಾಗಿ ರಾತ್ರಿ ವೇಳೆಯೇ ಬೋರ್ವೆಲ್ ವಿದ್ಯುತ್ ನೀಡುತ್ತಿದ್ದು, ಇತ್ತೀಚೆಗೆ ಕರಡಿ, ಚಿರತೆ ಸೇರಿದಂತೆ ಕಾಡುಪ್ರಾಣಿಗಳ ಹಾವಳಿ ರಾತ್ರಿ ವೇಳೆ ಹೆಚ್ಚಾಗಿದೆ. ಹಲವು ಕಡೆ ರೈತರ ಮೇಲೆ ಪ್ರಾಣಿಗಳ ದಾಳಿ ನೆಡೆದಿವೆ. ಈ ಬಗ್ಗೆ ವಿದ್ಯುತ್ ಇಲಾಖೆ ಕೂಡ ಗಮನಹರಿಸಿ ಹಗಲಿನ ವೇಳೆ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ರೈತ ಮುಖಂಡರು ಒತ್ತಾಯಿಸಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ....

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್...

ಚಿತ್ರದುರ್ಗ | ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...