ಚಿತ್ರದುರ್ಗ | ರೈತಸಂಘದ ಬೇಡಿಕೆಗಳ ಈಡೇರಿಕೆಗಾಗಿ ಬೆಳಗಾವಿ ಸುವರ್ಣಸೌಧ ಚಲೋ

Date:

“ಡಿಸೆಂಬರ್ 9, 2025 ರಂದು ಮಂಗಳವಾರ ಸಂಕಷ್ಟದಲ್ಲಿರುವ ರಾಜ್ಯದ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚಿತ್ರದುರ್ಗ ಜಿಲ್ಲಾ ಘಟಕ ಬೆಳಗಾವಿ ಸುವರ್ಣಸೌಧ ಚಲೋ ನಡೆಸಲಿದೆ” ಎಂದು ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ರೈತ ಸಂಘದ (ವಾಸುದೇವ ಮೇಟಿ ಬಣ) ಮುಖಂಡರು ತಿಳಿಸಿದರು.

ಚಿತ್ರದುರ್ಗದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು “ಖರೀದಿ ಕೇಂದ್ರ, ಬೆಳೆ ಹಾನಿ ಪರಿಹಾರ, ಬೆಳೆ ನಷ್ಟ ಪರಿಹಾರ, ಸಾಗುವಳಿ ಭೂಮಿ ಮಂಜೂರು, ವಿವಾದಿತ ಕೃಷಿ ಕಾಯ್ದೆ ರದ್ದು ಸೇರಿದಂತೆ ಹಲವು ರೈತರ ಸಮಸ್ಯೆ ಬಗೆಹರಿಸಲು ಸರ್ಕಾರ ಆಸಕ್ತಿ ತೋರುತ್ತಿಲ್ಲ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹಲವಾರು ರೈತರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು. ‌

“ರೈತರ ಬೇಡಿಕೆಗಳಾದ ಬೆಳೆ ಪರಿಹಾರವನ್ನು ಎಲ್ಲಾ ರೀತಿಯ ಬೆಳೆಗಳಿಗೂ ಎಕರೆಗೆ ರೂ.40,000/- ಹಣವನ್ನು ನೀಡಬೇಕು. ವಿಮೆ ಕಂತು ಕಟ್ಟಿರುವ ಎಲ್ಲಾ ರೀತಿಯ ಬೆಳೆವಿಮೆ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು. ಮೆಕ್ಕೆಜೋಳದ ಖರೀದಿ ಕೇಂದ್ರಗಳನ್ನು ಜಿಲ್ಲಾ ಮತ್ತು ತಾಲ್ಲೂಕು, ಹೋಬಳಿ ಮಟ್ಟಗಳಲ್ಲಿ ತೆರೆಯಬೇಕು. ಒಬ್ಬ ರೈತನಿಂದ 50 ಕ್ವಿಂಟಲ್ ಮೆಕ್ಕೆಜೋಳ ಖರೀದಿ ಮಾಡಬೇಕು. ಗೋಮಾಳ ಅರಣ್ಯ ಭೂಮಿ, ಬಗುರ್‌ಹುಕುಂ, ಸೇಂದಿವನ, ಹುಲ್ಲುಬನ್ನಿ ಖರಾಬ್, ಸಾಗುವಳಿ ಮಾಡಿರುವಂತಹ ರೈತರಿಗೆ ಶೀಘ್ರವಾಗಿ ಹಕ್ಕುಪತ್ರಗಳನ್ನು ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರ ಸಂಪೂರ್ಣ ಬೆಳೆ ಸಾಲ ಮನ್ನಾಗೊಳಿಸಿ, ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಭದ್ರಾಮೇಲ್ದಂಡೆ ಯೋಜನೆಯಿಂದ ವಂಚಿತವಾಗಿರುವ ಕೆರೆಗಳಿಗೂ ನೀರನ್ನು ಹರಿಸಬೇಕು. ಅನುದಾನವನ್ನು ನೀಡಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಚುರುಕುಗೊಳಿಸಿ, ಶೀಘ್ರವಾಗಿ ಬರದನಾಡು ಚಿತ್ರದುರ್ಗ ಜಿಲ್ಲೆಯನ್ನು ಹಸಿರು ಜಿಲ್ಲೆಯನ್ನಾಗಿ ಮಾಡಬೇಕು. ರೈತರ ಬೆಳೆಗಳಿಗೆ ಸರ್ಕಾರ ಕಾನೂನಾತ್ಮಕ ಬೆಂಬಲ ಬೆಲೆ ನಿಗಧಿಪಡಿಸಬೇಕು. ಮೂರು ಕೃಷಿ ಕಾಯ್ದೆಗಳನ್ನು ಸರ್ಕಾರವು ಕೂಡಲೇ ಹಿಂಪಡೆಯಲು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಹೊಳಲ್ಕೆರೆ ತಾಲ್ಲೂಕಿನಲ್ಲಿ 5 ಸಾವಿರ ಎಕರೆ ಭೂಮಿ ಅಮೃತಕಾವಲ್ ಇದ್ದು, ಜಾನುವಾರ ಗಣತಿ ಮಾಡಿಸಿ, ಉಳಿದ ಭೂಮಿಯನ್ನು ರೈತರಿಗೆ ನೀಡಬೇಕು. ಹೊಳಲ್ಕೆರೆ ತಾಲ್ಲೂಕಿನಲ್ಲಿ ಬಗರ್‌ಹುಕುಂ ಸಮಿತಿಯನ್ನು ರಚನೆ ಮಾಡುವುದು ಸೇರಿದಂತೆ ಹಲವು ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ ಸುವರ್ಣಸೌಧ ಚಲೋ ನಡೆಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಖರೀದಿ ಕೇಂದ್ರ ತೆರೆದು ಬೆಳೆ ಪರಿಹಾರ ಬಿಡುಗಡೆಗೆ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹ

ಸುದ್ದಿಗೋಷ್ಠಿಯಲ್ಲಿ ಮಹಿಳಾ ಜಿಲ್ಲಾಧ್ಯಕ್ಷೆ ಶ್ರೀಮತಿ ಲೋಲಾಕ್ಷಮ್ಮ, ಚಿತ್ರದುರ್ಗ ತಾಲ್ಲೂಕು ಮಹಿಳಾ ಅಧ್ಯಕ್ಷೆ ಶ್ರೀಮತಿ ಪವಿತ್ರ, ಹೊಸದುರ್ಗ ತಾಲೂಕು ಅಧ್ಯಕ್ಷ ವೆಂಕಟೇಶ್, ಚಳ್ಳಕೆರೆ ತಾಲ್ಲೂಕು ಮಹಿಳಾ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮೀ, ಚಿತ್ರದುರ್ಗ ತಾಲೂಕು ಅಧ್ಯಕ್ಷೆ ಶಿವಮೂರ್ತಿ, ಹೊಳಲ್ಕೆರೆ ತಾಲ್ಲೂಕು ಮಹಿಳಾ ಅಧ್ಯಕ್ಷೆ ಹೆಚ್.ಎನ್.ಅಂಜು, ಹಿರಿಯೂರು ತಾಲೂಕು ಅಧ್ಯಕ್ಷ ರಂಗಸ್ವಾಮಿ, ಹಿರಿಯೂರು ತಾಲೂಕು ಮಹಿಳಾ ಅಧ್ಯಕ್ಷೆ ಶ್ರೀಮತಿ ಶಕುಂತಲ, ಮೊಳಕಾಲ್ಕೂರು ತಾಲೂಕು ಅಧ್ಯಕ್ಷ ಅರುಣ್ ಕುಮಾರ್.ಪಿ.ಸಿ, ಚಳ್ಳಕೆರೆ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ್ ಹಾಗೂ ಮಂಜುಳ ಕೊಳಹಾಳ್, ಶಶಿಕಲಾ ಭರಮಸಾಗರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...