ಚಿತ್ರದುರ್ಗ | ಮತ್ತೆ ಬಂದ ಚಿಕನ್‍ಗುನ್ಯಾ, ಭಯ ಬೇಡ, ಮುಂಜಾಗ್ರತೆ ಇರಲಿ; ಟಿಎಚ್ಓ ಡಾ.ಗಿರೀಶ್ ಸಲಹೆ

Date:

“ಚಿಕನ್‍ಗುನ್ಯಾ ಒಂದು ಸೋಂಕಿತ ಈಡೀಸ್ ಈಜಿಪ್ಟಿ ಎಂಬ ಹೆಣ್ಣು ಸೊಳ್ಳೆ ಮನುಷ್ಯರನ್ನು ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ವೈರಸ್‍ನಿಂದ ಬರುವ ಒಂದು ಸಾಂಕ್ರಾಮಿಕ ರೋಗ. ಚಿಕನ್‍ಗುನ್ಯಾದಿಂದ ಭಯ ಬೇಡ, ಮುಂಜಾಗ್ರತೆ ಇರಲಿ” ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಿ.ವಿ.ಗಿರೀಶ್ ಸಲಹೆ ನೀಡಿದರು. ಇದರಿಂದಾಗಿ ಮತ್ತೆ ಚಿಕನ್‍ಗುನ್ಯಾ ಬಂದು ವಕ್ಕರಿಸಿದಂತಾಗಿದೆ.

ಚಿತ್ರದುರ್ಗ ತಾಲ್ಲೂಕಿನ ದೊಡ್ಡ ಸಿದ್ದವ್ವನಹಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗೊಲ್ಲನಕಟ್ಟೆ ಗ್ರಾಮದಲ್ಲಿ ಚಿಕನ್‍ಗುನ್ಯಾ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ರೋಗ ನಿಯಂತ್ರಣ ಕುರಿತು ಮಾಹಿತಿ ನೀಡಿದರು.

1002618401

“ಗೊಲ್ಲನಕಟ್ಟೆ ಗ್ರಾಮದಲ್ಲಿ ಕಳೆದ ಆಗಸ್ಟ್ 26ರಂದು ಸಾರ್ವಜನಿಕರಿಗೆ ಜ್ವರ, ಕೀಲು ಮೂಳೆ ನೋವು ಮತ್ತು ಊತ ಕಂಡು ಬಂದ ಹಿನ್ನೆಲೆಯಲ್ಲಿ ಸಂಬಂಧಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಆಗಸ್ಟ್ 27ರಂದು ಗ್ರಾಮದಲ್ಲಿ ಇರುವ 181 ಮನೆಗಳಲ್ಲಿ ಜ್ವರ ಸಮೀಕ್ಷೆ ಮಾಡಿದಾಗ 15 ಜನರಿಗೆ ಮೈ ಕೈ ನೋವು, ಕೀಲು ನೋವು ಅಂತಹ ಲಕ್ಷಣಗಳು ಕಂಡು ಬಂದಿತ್ತು. ಐದು ಜನರ ರಕ್ತದ ಮಾದರಿ ಸಂಗ್ರಹಿಸಿ ಜಿಲ್ಲಾ ಪ್ರಯೋಗ ಶಾಲೆಯಲ್ಲಿ ಪರೀಕ್ಷಿಸಲಾಗಿ, ನಾಲ್ಕು ಜನರಿಗೆ ಚಿಕನ್‍ಗುನ್ಯಾ ಸೋಂಕು ಇರುವುದಾಗಿ ಕಂಡುಬಂದಿದೆ. ಲಾರ್ವ ಸಮೀಕ್ಷಾ ಕಾರ್ಯ ಕೈಗೊಂಡು ಮುಂಜಾಗ್ರತಾ ಕ್ರಮ ವಹಿಸಿದ್ದಾರೆ. ಗ್ರಾಮದ ಪಂಚಾಯಿತಿ ಸದಸ್ಯರಾದ ತಿಮ್ಮಣ್ಣ ಮತ್ತು ಚಿಕ್ಕಣ್ಣ ಹಾಗೂ ಸಾರ್ವಜನಿಕರ ಸಹಕಾರ ಪಡೆದು ಡಾ ಶಮೈಲಾ ಮತ್ತು ತಂಡ ತಾತ್ಕಾಲಿಕ ಚಿಕಿತ್ಸಾ ಕೇಂದ್ರವನ್ನು ಗ್ರಾಮದಲ್ಲಿ ತೆರೆದು ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್ ಮಾತನಾಡಿ “ಈ ದಿನ ಹೊಸ ರೋಗಿ ಒಬ್ಬರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ. ಆದರೆ ಚಿಕನ್‍ಗುನ್ಯಾ ಬಂದ ನಂತರ ಕೆಲವು ದಿನಗಳವರೆಗೆ ಕೀಲು ನೋವುಗಳು ಇರುವುದು ಸಹಜ. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ” ಎಂದು ಹೇಳಿದರು.

ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಕರಪತ್ರಗಳ ಹಂಚಿಕೆ ಮಾಡಿ ಮಾಹಿತಿ ನೀಡುತ್ತಾ, “ಸಾರ್ವಜನಿಕರು ಸೊಳ್ಳೆ ಕಚ್ಚಿಸಿಕೊಳ್ಳದಂತೆ ನಿಗಾ ವಹಿಸಬೇಕು. ಸಂಜೆ ವೇಳೆ ಬೇವಿನ ಹೊಗೆ ಹಾಕುವುದು, ತುಂಬು ತೋಳಿನ ಬಟ್ಟೆ ಧರಿಸುವುದು, ಮಕ್ಕಳು, ವಯಸ್ಸಾದವರು ಹಗಲು ಹೊತ್ತು ಮಲಗಿದಾಗ ಸೊಳ್ಳೆ ಪರದೆ ಬಳಕೆ ಮಾಡಬೇಕು, ಮನೆಯಲ್ಲಿನ ಸೊಳ್ಳೆ ಉತ್ಪತ್ತಿ ನೀರಿನ ತಾಣಗಳ ಸ್ವಚ್ಛತೆಗೆ ಆದ್ಯತೆ ನೀಡುತ್ತಾ, ಮಳೆಗಾಲವಾದ್ದರಿಂದ ಮನೆಯ ಹೊರಗಡೆ ಘನ ತ್ಯಾಜ್ಯ ಸಂಗ್ರಹವಾಗದಂತೆ ಮಾಡಿದಾಗ ರೋಗ ನಿಯಂತ್ರಣ ಮಾಡಬಹುದು.ಗ್ರಾಮದಲ್ಲಿ ರೋಗ ನಿಯಂತ್ರಣಕ್ಕೆ ಫಾಗಿಂಗ್ ಮತ್ತು ಮುಂಜಾಗ್ರತಾ ಕ್ರಮವಹಿಸಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಗ್ರಾಮಗಳಲ್ಲಿ ಎರಡು ತಿಂಗಳಿಗೆ ಕಡ್ಡಾಯ ನೀರು, ನೈರ್ಮಲ್ಯ ಸಭೆ ನಡೆಸಲು ಜಿಲ್ಲಾ ಪಂಚಾಯತ್ ಸೂಚನೆ

ಈ ಸಂದರ್ಭದಲ್ಲಿ ಎನ್‍ವಿಬಿಡಿಸಿಪಿ ತಂಡದ ಜಿಲ್ಲಾ ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ಸುರೇಶ್ ಬಾಬು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ್, ನಾಗರಾಜ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಬಾಗೇಶ್ ಉಗ್ರಾಣ, ನಾಗರಾಜ, ಯೋಗ ಶಿಕ್ಷಕರಾದ ರವಿಕುಮಾರ್, ಗ್ರಾಮದ ತಿಮ್ಮಣ್ಣ , ಚಿಕ್ಕಣ್ಣ ಸೇರಿದಂತೆ ಮುಖಂಡರು ಹಾಗೂ ಸಾರ್ವಜನಿಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...