ಚಿತ್ರದುರ್ಗ | ಚಳ್ಳಕೆರೆ ರೈಲ್ವೇ ನಿಲ್ದಾಣದಲ್ಲಿ ಅದಿರು ಸಾಗಾಣಿಕೆಯಿಂದ ಜೀವಭಯ, ಮಾಲಿನ್ಯ; ತಾತ್ಕಾಲಿಕ ಸ್ಥಗಿತಕ್ಕೆ ಜಿಲ್ಲಾಧಿಕಾರಿ ಸೂಚನೆ

Date:

ಸಾರ್ವಜನಿಕರಿಗೆ ಅನಾನುಕೂಲ, ಮಾಲಿನ್ಯ, ಜೀವಭಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ರೈಲ್ವೆ ನಿಲ್ದಾಣದ ಮೂಲಕ ಅದಿರು ಸಾಗಾಣಿಕೆ ಮಾಡುವುದನ್ನು ಸ್ಥಗಿತಗೊಳಿಸಲು ಮನವಿ ಮಾಡಿ ರೈಲ್ವೆ ಇಲಾಖೆಗೆ ಪತ್ರ ಬರೆಯಲಾಗುವುದು. ಭೇಟಿ ನೀಡುವವರೆಗೆ ತಾತ್ಕಾಲಿಕವಾಗಿ ಅದಿರು ಸಾಗಾಟ ಸ್ಥಗಿತಗೊಳಿಸಿ” ಎಂದು ಕಂಪನಿಗೆ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

1002468362

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಚಳ್ಳಕೆರೆ ನಗರದ ರೈಲ್ವೆ ಯಾರ್ಡ್ ಬಳಿ ಖಾಸಗಿ ಕಂಪನಿಯ ಅದಿರು ಸಾಗಾಟದ ಧೂಳಿನಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಭೆ ನಡೆಸಿ ಅವರು ಮಾತನಾಡಿದ ಅವರು “ಚಳ್ಳಕೆರೆ ನಗರದ ರೈಲ್ವೆ ನಿಲ್ದಾಣದಲ್ಲಿ ಅದಿರನ್ನು ಲೋಡ್ ಮತ್ತು ಅನ್‍ಲೋಡ್ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹೆಚ್ಚಿನ ಸಂಖ್ಯೆ ಹಾಗೂ ಭಾರೀ ಸಾಮರ್ಥ್ಯದ ಲಾರಿಗಳ ಓಡಾಟದಿಂದ ಅಪಾಯದ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರು ಕೇಳಿ ಬಂದಿವೆ. ಈ ಹಿನ್ನಲೆಯಲ್ಲಿ ಪರಿಸರ ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ಮಾಡಿ ವರದಿ ನೀಡುವಂತೆ ಸೂಚಿಸಿದ್ದೇನೆ. ವಾರದಲ್ಲಿ ಅಧಿಕಾರಿಗಳು ವರದಿ ನೀಡಲಿದ್ದಾರೆ. ಇದನ್ನು ಆಧರಿಸಿ ರೈಲ್ವೆ ಇಲಾಖೆಗೆ ಪತ್ರದ ಮುಖೇನ ಅದಿರು ಸಾಗಾಟ ಸ್ಥಗಿತಗೊಳಿಸಲು ಮನವಿ ಮಾಡಲಾಗುವುದು. ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರೊಂದಿಗೂ ದೂರವಾಣಿ ಮೂಲಕ ಮಾತನಾಡಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವುದಾಗಿ” ಭರವಸೆ ನೀಡಿದರು.

1002468361

“ಅದಿರು ಸಾಗಾಣಿಕೆಯಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಉಪವಿಭಾಗಾಧಿಕಾರಿ, ಗಣಿ ಮತ್ತು ಭೂ ವಿಜ್ಞಾನ, ಲೋಕೋಪಯೋಗಿ, ಪ್ರಾದೇಶಿಕ ಸಾರಿಗೆ, ಚಳ್ಳಕೆರೆ ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಉಪ ಸಮಿತಿ ರಚನೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು. ಈ ಉಪ ಸಮಿತಿ ನಿಯಮಾನುಸಾರ ಅದಿರು ಸಾಗಾಣಿಕೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸುವುದರ ಜೊತೆಗೆ, ಪರ್ಯಾಯ ಮಾರ್ಗಗಳ ಕುರಿತು ಸಲಹೆ ಸೂಚನೆಗಳನ್ನು ಒಂದು ವಾರದಲ್ಲಿ ನೀಡಲಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೋಮವಾರ ಖುದ್ದು ಸ್ಥಳಕ್ಕೆ ಭೇಟಿ ನೀಡುತ್ತೇನೆ. ಈ ಸಮಯದಲ್ಲಿ ತಾತ್ಕಾಲಿಕವಾಗಿ ಅದಿರು ಸಾಗಾಟ ಸ್ಥಗಿತಗೊಳಿಸಿ” ಎಂದು ಕಂಪನಿಗೆ ಸಭೆಯಲ್ಲಿ ತಿಳಿಸಲಾಯಿತು. ಕೂಡಲೇ ಧರಣಿ ನಿಲ್ಲಿಸುವಂತೆ ಮುಖಂಡರಿಗೆ ಜಿಲ್ಲಾಧಿಕಾರಿ ಕೋರಿದರು.

ಈ ಸುದ್ದಿ ಓದಿದ್ದೀರಾ? ಸ್ಮಶಾನ ಒತ್ತುವರಿ | ಹಲವು ವರ್ಷಗಳಾದರೂ ತೆರವುಗೊಳಿಸದೆ ಅಧಿಕಾರಿಗಳ ನಿರ್ಲಕ್ಷ್ಯ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಎಂ.ಜೆ.ಮಹೇಶ್, ಪರಿಸರಾಧಿಕಾರಿ ಆಸಿಫ್ ಖಾನ್, ನಗರಾಭಿವೃದ್ಧಿ ಯೋಜನೆ ನಿರ್ದೇಶಕಿ ರೇಷ್ಮಾ ಹಾನಗಲ್, ಚಳ್ಳಕೆರೆ ತಹಶೀಲ್ದಾರ್ ರೆಹಮಾನ್ ಪಾಷ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ನಾಗರಾಜ್, ಪ್ರಕಾಶ್ ಸ್ಪಾಂಜ್ ಕಂಪನಿ ಪ್ರತಿನಿಧಿಗಳು, ರೈಲ್ವೆ ಇಲಾಖೆ ಅಧಿಕಾರಿಗಳು, ಮುಖಂಡರಾದ ಕೆ.ಟಿ.ಕುಮಾರಸ್ವಾಮಿ, ಸೋಮಶೇಖರ್, ಶ್ರೀನಾಥ್, ಮುರುಳಿ, ಜಯಪಾಲಯ್ಯ ಸೇರಿದಂತೆ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...