ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯ ತರಳಬಾಳು ಮಠದಲ್ಲಿ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಸ್ಥಳೀಯ ಸಂಸದರು, ಶಾಸಕರು, ರೈತ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಸಭೆ ಕರೆದು ಶೀಘ್ರ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಿದರು.
ಸಿರಿಗೆರೆಯಲ್ಲಿ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಹಲವು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದ್ದು, ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ, ಮಾಜಿ ಲೋಕಸಭಾ ಸದಸ್ಯರಾದ ಜಿ.ಎಂ ಸಿದ್ದೇಶ್ವರ್, ರೈತ ಸಂಘದ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪ, ಮುಖ್ಯ ಇಂಜಿನಿಯರ್ ಹಾಗೂ ಸಂಬಂಧಪಟ್ಟ ಶಾಸಕರು, ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಮಾಹಿತಿ ಪಡೆದರು.
ನಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರತಿನಿಧಿಗಳ ಜೊತೆ ಮಾತನಾಡಿದರು. ಮಾರ್ಚ್ 2ನೇ ವಾರದಲ್ಲಿ ದೆಹಲಿಗೆ ಹೋಗಿ ಸಂಬಂಧಪಟ್ಟವರೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಹೊನ್ನೂರು ಮುನಿಯಪ್ಪ, ಚಿಕ್ಕಬ್ಬಿಗೆರೆ ನಾಗರಾಜ್,
ಮರುಳಸಿದ್ದಯ್ಯ, ಡಿ.ಎಸ್ ಹಳ್ಳಿ ಮಲ್ಲಿಕಾರ್ಜುನ, ಆಡನೂರು ಶಿವಕುಮಾರ್, ತಿಪ್ಪೇಸ್ವಾಮಿ, ನಿಜಲಿಂಗಪ್ಪ,
ಆಲೂರು ಸಿದ್ರಾಮಪ್ಪ, ಬೈಲಪ್ಪ, ಕಾಂತರಾಜು, ರಾಜಶೇಖರಪ್ಪ, ಮಂಜುನಾಥ್, ರಾಮರೆಡ್ಡಿ, ಸನಾಉಲ್ಲಾ, ಕೊಟ್ರು ಬಸಪ್ಪ, ಮುದ್ದಾಪುರ ನಾಗಣ್ಣ, ಅಜ್ಜಯ್ಯ, ಲೋಕೇಶ್ ಹಾಗೂ ಶಾಸಕರುಗಳು, ಅಧಿಕಾರಿಗಳು, ರೈತರು ಹಾಜರಿದ್ದರು.





