ಚಿತ್ರದುರ್ಗ |ನೀರು ಸರಬರಾಜು ವಿಳಂಬ; ನಗರಸಭೆ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಸಮಾಧಾನ

Date:

ಚಿತ್ರದುರ್ಗ ನಗರದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದಕ್ಕೆ ನಗರಸಭೆ ಅಧಿಕಾರಿಗಳ ಬಗ್ಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಗರಸಭೆ ಮತ್ತು ಬೆಸ್ಕಾಂ ಅಧಿಕಾರಿಗಳ ಜಂಟಿ ಸಭೆ ನಡೆಸಿ ಅವರು ಮಾತನಾಡಿದರು.
ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಮೂಲಗಳಲ್ಲಿ ಯಾವುದೇ ತೊಂದರೆಯಿಲ್ಲ. ಸಾಕಷ್ಟು ನೀರಿನ ಪ್ರಮಾಣವೂ ಲಭ್ಯವಿದೆ. ನೀರಿನ ಸಮಸ್ಯೆಗೆ ತಾಂತ್ರಿಕ ಕಾರಣಗಳಿಗಿಂತ ಅಧಿಕಾರಿಗಳ ಬೇಜವಾಬ್ದಾರಿಯೇ ಮುಖ್ಯ ಕಾರಣವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಿಡಿಕಾರಿದರು.

ನಗರಸಭೆ ಅಧಿಕಾರಿಗಳು ಪದೇ ಪದೇ ವಿದ್ಯುತ್ ವ್ಯತ್ಯಯದಿಂದಾಗಿ ವಿ.ವಿ.ಸಾಗರದಿಂದ ನೀರು ಎತ್ತಲು ಸಾಧ್ಯವಾಗುತ್ತಿಲ್ಲ ಎಂಬುದಾಗಿ ನೆಪ ಹೇಳುತ್ತಿದ್ದಾರೆ. ಆದರೆ ತಿಂಗಳಿನಲ್ಲಿ ಕೆಲ ದಿನಗಳು ಮಾತ್ರ ದಿನಕ್ಕೆ ಅರ್ಧ ಗಂಟೆ ಅಥವಾ ಒಂದು ಗಂಟೆಯಷ್ಟೆ ವಿದ್ಯುತ್ ವ್ಯತ್ಯಯವಾಗಿದೆ. ಇದು ನಗರದಲ್ಲಿ 15 ದಿನಗಳ ಕಾಲ ನೀರು ಸಬರಾಜು ಮಾಡದೇ ಇರಲು ಕಾರಣವಾಗಲು ಸಾಧ್ಯವಿಲ್ಲ. ನಗರ ಸಭೆಯಲ್ಲಿ ಅಧಿಕಾರಿಗಳು ಯಾರು ಹಣ ನೀಡುತ್ತಾರೋ ಅವರಿಗೆ ಮಾತ್ರ ಸರಿಯಾಗಿ ನೀರು ಬಿಡುತ್ತಾರೆ ಎಂಬ ದೂರುಗಳು ಕೇಳಿಬರುತ್ತಿವೆ. ಇಂತಹ ತಾರತಮ್ಯ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮ ಕನೆಕ್ಷನ್ ಮತ್ತು ಮೋಟಾರ್ ಬಳಕೆ: ರೈಸಿಂಗ್ ಮೇನ್ ಪೈಪ್‍ಲೈನ್‍ಗಳಿಗೆ ಅಕ್ರಮವಾಗಿ ಕನೆಕ್ಷನ್ ಪಡೆದಿರುವುದು ಮತ್ತು ರೈತರು ನೇರವಾಗಿ ಮೋಟಾರ್ ಹಚ್ಚಿ ನೀರು ಪಡೆಯುತ್ತಿರುವುದು ನಗರಕ್ಕೆ ನೀರು ತಲುಪಲು ಅಡ್ಡಿಯಾಗುತ್ತಿದೆ ಎಂಬ ವಿಷಯ ಸಭೆಯಲ್ಲಿ ಚರ್ಚೆಗೆ ಬಂತು. ಅಕ್ರಮ ಕನೆಕ್ಷನ್ ಕಡಿತಗೊಳಿಸಲು ಪೆÇಲೀಸ್ ಬಂದೋಬಸ್ತ್‍ನೊಂದಿಗೆ ತಹಶೀಲ್ದಾರ್ ಹಾಗೂ ನಗರಸಭೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಬೇಕು. ರಾತ್ರಿ ವೇಳೆ ಕಳ್ಳತನದಿಂದ ನೀರು ಪಡೆಯುವವರ ಮೇಲೆ ನಿಗಾ ಇಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಅಧಿಕಾರಿಗಳಿಗೆ ಎಚ್ಚರಿಕೆ : ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಅದನ್ನು ಸರಿಪಡಿಸಲು ನಿರಂತರವಾಗಿ ಕೆಲಸ ಮಾಡಬೇಕು. ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾದರೆ, ಇನ್ನು ಮುಂದೆ ತಕ್ಷಣವೇ ವಿದ್ಯುತ್ ಸಂಪರ್ಕವನ್ನು ಪುನಃಸ್ಥಾಪಿಸಿ ನೀರು ಸರಬರಾಜು ಮಾಡಬೇಕು. ದಿನನಿತ್ಯ ನೂರಾರು ಜನ ಸಾರ್ವಜನಿಕರು ಕಚೇರಿಗೆ ಬಂದು ಕುಡಿಯುವ ನೀರಿನ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಸಾರ್ವಜನಿಕರಿಗೆ ಸಮಪರ್ಕವಾಗಿ ಉತ್ತರಿಸಲಾಗುತ್ತಿಲ್ಲ. ಅಧಿಕಾರಿಗಳ ಬೇಜವಾಬ್ದಾರಿಯನ್ನು ಸಹಿಸುವುದಿಲ್ಲ. ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಗರಸಭೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಬಿ.ಟಿ ಕುಮಾರಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮ ಹಾನಗಲ್, ನಗರಸಭೆ ಆಯುಕ್ತ ಲಕ್ಷ್ಮೀ, ಕುಡಿಯುವ ನೀರು ಪೂರೈಕೆ ಸಂಬಂಧಿಸಿದ ಎಇಇ ರಾಜು ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...

ಚಿತ್ರದುರ್ಗ | ಭದ್ರಾ ಹೋರಾಟಕ್ಕೆ ಸಂಘಟನೆಗಳ ಶಕ್ತಿ

 ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಒನಕೆ ಓಬವ್ವ ವೃತ್ತದಲ್ಲಿ...