ಚಿತ್ರದುರ್ಗ | ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿ-ಚಕ್ರ ವಾಹನಗಳ ವಿತರಣೆ

Date:

      ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸೋಮವಾರ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿ-ಚಕ್ರವಾಹನಗಳ ವಿತರಣೆ ಮಾಡಿದರು.

ಕಾರ್ಮಿಕ ಅಧಿಕಾರಿ ಅನಿಲ್ ಬಿ ಬಗಟಿ ಮಾಹಿತಿ ನೀಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಾವಣಗೆರೆ ಕಾರ್ಖಾನೆಗಳ ಮತ್ತು ಬಾಯ್ಲರ್‍ಗಳ ಇಲಾಖೆ ಇವರುಗಳ ಸಹಯೋಗದಲ್ಲಿ ಸಿಎಸ್‍ಆರ್ ನಿಧಿಯಲ್ಲಿ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿ-ಚಕ್ರವಾಹನಗಳ ವಿತರಿಸಲಾಗಿದೆ ಎಂದು ಹೇಳಿದರು.

ಚಳ್ಳಕೆರೆ ಹೆಗ್ಗೆರೆ ಎಂ/ಎಸ್ ಪ್ರಕಾಶ್ ಸ್ಪಾಂಜ್ ಐರನ್ ಅಂಡ್ ಪವರ್ ಪ್ರೈ.ಲಿ ಅವರು 03 ತ್ರಿ-ಚಕ್ರ ವಾಹನಗಳು, ಚಿತ್ರದುರ್ಗ ಮೋರೇಶ್ವರ ಆಗ್ರೋ ಫೀಡ್ಸ್ ಪ್ರೈ.ಲಿ, ಅರವಿಂದ್ ಲಿಮಿಟೆಡ್, ಹಿರಿಯೂರು ಸ್ನೇಹ ಫಾಮ್ರ್ಸ್ ಪ್ರೈ.ಲಿ ಕೈಗಾರಿಕೆಗಳು ತಲಾ 1 ತ್ರಿ-ಚಕ್ರ ವಾಹನಗಳು ಸೇರಿದಂತೆ ಒಟ್ಟು 6 ತ್ರಿ-ಚಕ್ರ ವಾಹನಗಳನ್ನು ವಿಶೇಷ ಚೇತನರಿಗೆ ಕೊಡುಗೆ ನೀಡಿವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

     ಕಾರ್ಯಕ್ರಮದಲ್ಲಿ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಕಾರ್ಮಿಕ ನಿರೀಕ್ಷಕ ಭೀಮೇಶ್, ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...