ಚಿತ್ರದುರ್ಗ | ಅಲೆಮಾರಿ ಸುಡಗಾಡು ಸಿದ್ದರ ಕಾಲೋನಿಗೆ ಸೋಲಾರ್ ಲೈಟ್ ವಿತರಣೆ; ಕೇತೇಶ್ವರ ಶ್ರೀ ಶ್ಲಾಘನೆ.

Date:

ಚಿತ್ರದುರ್ಗ ನಗರದ ಹೊರವಲಯದ ಶ್ರೀ ಕೇತೇಶ್ವರ ಮಠದ ಪಕ್ಕದಲ್ಲಿರುವ ಅಲೆಮಾರಿ ಸುಡಗಾಡು ಸಿದ್ದರ ಕಾಲೋನಿಯಲ್ಲಿ ಡಿ-ಲೈಟ್ ಎನರ್ಜಿ ಪ್ರೈ.ಲಿ., ವಿಮುಕ್ತಿ ವಿದ್ಯಾಸಂಸ್ಥೆ, ಅಭಿವೃದ್ಧಿ ಸಂಸ್ಥೆ, ಜಿಲ್ಲಾ ಶಾಂತಿ ಮತ್ತು ಸೌಹಾರ್ದ ವೇದಿಕೆ ಚಿತ್ರದುರ್ಗ ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಲೆಮಾರಿ ಜಾಗೃತಿ ಹಾಗೂ ಸೋಲಾರ್ ಲೈಟ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಅಲೆಮಾರಿ ಸುಡಗಾಡು ಸಿದ್ದರ ಕಾಲೋನಿಗೆ ಸೋಲಾರ್ ದೀಪ ವಿತರಣೆ ಮಾಡಿ ಮಾತನಾಡಿದ ಶ್ರೀ ಇಮ್ಮಡಿ ಕೇತೇಶ್ವರ ಸ್ವಾಮೀಜಿ “ಸಮಾಜದ ಮುಖ್ಯವಾಹಿನಿಯಿಂದ ದೂರ ಉಳಿದಿರುವ ಅಲೆಮಾರಿ ಸುಡಗಾಡು ಸಿದ್ದರ ಜನಾಂಗಕ್ಕೆ ಸೋಲಾರ್ ಲೈಟ್ ವಿತರಣೆ
ಮಾಡುತ್ತಿರುವುದು ನಿಜಕ್ಕೂ ಅರ್ಥಪೂರ್ಣ” ಎಂದು ಶ್ಲಾಘಿಸಿದರು.

ಭಿಕ್ಷೆ ಬೇಡುವ ಮತ್ತು ಸಣ್ಣಪುಟ್ಟ ವ್ಯಾಪಾರ ಮಾಡಿಜೀವನ ನಿರ್ವಹಣೆ ಮಾಡುತ್ತಿರುವ ಸುಡಗಾಡು ಸಿದ್ದ ಜನಾಂಗಕ್ಕೆ ನೆಲೆ ಎಂಬುವುದಿಲ್ಲ. ಅವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಯೋಜನೆಯನ್ನು ರೂಪಿಸಿ ಜಾರಿ ಮಾಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002096144

ಜಿಲ್ಲಾ ಕಾಂಗ್ರೆಸ್ ಹಾಗೂ ಕೂಡ ಅಧ್ಯಕ್ಷರಾದ ಶ್ರೀ ಎಂ.ಕೆ.ತಾಜ್‌ಪೀರ್ ಮಾತನಾಡಿ “ಸಮಾಜದ ಮುಖ್ಯವಾಹಿನಿಯಿಂದ ದೂರವಿದ್ದು, ಸರ್ಕಾರಿ
ಸೌಲಭ್ಯಗಳಿಂದ ವಂಚಿತರಾಗಿರುವ ಅಲೆಮಾರಿ ಸುಡುಗಾಡು ಸಿದ್ದ ಜನಾಂಗದವರ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ವಿಶೇಷ ಯೋಜನೆಯನ್ನು ಜಾರಿಮಾಡಿದ್ದು, ಅದರ ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಹೊಂದಬೇಕು” ಎಂದು ತಿಳಿಸಿದರು.

ಅಲೆಮಾರಿ ಸುಡಗಾಡು ಸಿದ್ದರ ಕಾಲೋನಿಗೆ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದಿಂದ ಕುಡಿಯುವ ನೀರಿಗಾಗಿ
ಟ್ಯಾಂಕವೊಂದನ್ನು ನಿರ್ಮಾಣ ಮಾಡಿಕೊಡಲು ತಾವು ಸದಸ್ಯರುಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಿಪಿಐ ಪಕ್ಷ ಮತ್ತು ಎಐಟಿಯುಸಿ ಸಂಘಟನೆಯಿಂದ ಹರಿಹರದಲ್ಲಿ ಮೇ -ಕಾರ್ಮಿಕ ದಿನಾಚರಣೆ

ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಸಿ.ನರಸಿಂಹಮೂರ್ತಿ ಮಾತನಾಡಿ “ಡಿ-ಲೈಟ್ ಎನರ್ಜಿ ಪ್ರೈ.ಲಿ.ಕಂಪನಿ ಜೊತೆಗೆ ಮಾತನಾಡಿ ಅಲೆಮಾರಿ ಸುಡಗಾಡು ಸಿದ್ದ ಜನಾಂಗದವರ ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಸೋಲಾರ್ ಲೈಟ್‌ಗಳನ್ನು ವಿತರಣೆ ಮಾಡಲಾಗಿದ್ದು, ಅಭಿವೃದ್ಧಿ,
ವಿಮುಕ್ತಿ, ಡಿ-ಲೈಟ್ ಸಂಸ್ಥೆಗಳ ನೆರವಿನೊಂದಿಗೆ ಈ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲಾಗಿದೆ “ಎಂದು ಹೇಳಿದರು.

ಈ ವೇಳೆ ಡಿ-ಲೈಟ್ ಎನರ್ಜಿ ಪ್ರೈ.ಲಿ., ವಿಮುಕ್ತಿ ವಿದ್ಯಾಸಂಸ್ಥೆ, ಅಭಿವೃದ್ಧಿ ಸಂಸ್ಥೆ, ಚಿತ್ರದುರ್ಗ ಜಿಲ್ಲಾ ಶಾಂತಿ ಮತ್ತು ಸೌಹಾರ್ದ ವೇದಿಕೆ ಸಂಸ್ಥೆಗಳ ಸದಸ್ಯರು, ಸುಡುಗಾಡು ಸಿದ್ಧರ ಕಾಲೋನಿಯ ಗ್ರಾಮಸ್ಥರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ....

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್...

ಚಿತ್ರದುರ್ಗ | ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...