ಚಿತ್ರದುರ್ಗ | ತುಂಗಾದಿಂದ ಭದ್ರಾ ಕಾಮಗಾರಿ ವಿಳಂಬಕ್ಕೆ ಡಿಕೆಶಿ ಕಾರಣ: ನೀರಾವರಿ ಹೋರಾಟ ಸಮಿತಿ ಆಕ್ರೋಶ

Date:

“ತುಂಗಾದಿಂದ ಭದ್ರಾ ಕಾಲುವೆ ಕಾಮಗಾರಿ ಇನ್ನು ವಿಳಂಬವಾಗಿದ್ದು. ಕಾಮಗಾರಿ ವಿಳಂಬಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾರಣ. ಇನ್ನು ಕೇವಲ ಮೂರು ತಿಂಗಳು ಮಾತ್ರ ಕೆಲಸ ಮಾಡಬಹುದು ಎಂದು ವಿ .ವಿ .ಸಾಗರ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿದ್ದ ನೀರಾವರಿ ಹೋರಾಟ ಸಮಿತಿಯಲ್ಲಿ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

1003510056

ನೀರಾವರಿ ಹೋರಾಟ ಸಮಿತಿಯಲ್ಲಿ ಸಭೆ ಉದ್ದೇಶಿಸಿ ಮಾತನಾಡಿದ ಅವರು “ತುಂಗಾದಿಂರ ಭದ್ರಾ ಕಾಮಗಾರಿ ಇನ್ನು ವಿಳಂಬವಾಗಿದ್ದು. ಇನ್ನು ಕೇವಲ ಮೂರು ತಿಂಗಳು ಮಾತ್ರ ಕೆಲಸ ಮಾಡಬಹುದು ಆನಂತರ ಮಳೆ ಬರುತ್ತದೆ. ಆದರೆ ತುಂಗಾ ಕಾಮಗಾರಿ ಪ್ರದೇಶದಲ್ಲಿ ವೀಕ್ಷಣೆ ಮಾಡಿದಾಗ ಇಂಟೆಕ್ ಕಾಲುವೆಗಳು, ಸಬ್ ಸ್ಟೇಷನ್ ಕಾಮಗಾರಿಗಳು, ಮೋಟಾರ್ ಪಂಪ್ ಜೋಡಣೆ, ಡೆಲವರಿ ಪೈಪ್ ಲೈನ್, ಹಾಗೂ ಸೇತುವೆಗಳು ಸಿವಿಲ್ ಕಾಮಗಾರಿಗಳು ಆಮೆ ಗತಿಯಲ್ಲಿ ನಡೆಯುತ್ತಿವೆ. ಇರುವ ಮೂರು ತಿಂಗಳಲ್ಲಿ ಈ ಕಾಮಗಾರಿಗಳನ್ನು ಮುಗಿಸುವುದು ಅಸಾಧ್ಯದ ಮಾತು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಳೆಯ ಕಾಮಗಾರಿಗಳ ಹಣ ಪಾವತಿ ಮಾಡಿಲ್ಲದ ಕಾರಣ ಗುತ್ತಿಗೆದಾರರು ಕಾಮಗಾರಿಗಳನ್ನು ಮುಂದುವರಿಸಲು ಮೀನಾ ಮೇಷ ಎಣಿಸುತ್ತಿದ್ದಾರೆ, ಭದ್ರಾಕ್ಕೆ ಮೀಸಲಾದ ಅನುದಾನವನ್ನು ಬೇರೆಡೆಗೆ ವರ್ಗಾಯಿಸುವಲ್ಲಿ ಡಿಕೆ ಶಿವಕುಮಾರ್ ಕೈವಾಡವಿದೆ. ಬರುವ ವರ್ಷದಿಂದ ತುಂಗಾ ದಿಂದ ಭದ್ರಕ್ಕೆ ನೀರು ಹರಿಸುತ್ತೇವೆ ಎಂದು ಸರ್ಕಾರ ಸುಳ್ಳು ಹೇಳುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003510057

“ಈಗಾಗಲೇ ಹೇಳಿರುವ ನೂರೊಂದು ಸುಳ್ಳುಗಳ ಜೊತೆ ಈ ಸುಳ್ಳು ಸಹ ಸತ್ಯವಾಗುತ್ತದೆ. ಆದರೆ ಇದು ಸುಳ್ಳಾಗಲಿ, ಭದ್ರಾ ನೀರು ಬಯಲು ಸೀಮೆಗೆ ಹರಿಯಲಿ” ಎಂದು ಆಶಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರೈತಪರ ಎನ್ನುವ ಪಕ್ಷಗಳು ಬೆಂಬಲ ಬೆಲೆ ಘೋಷಿಸಿಲ್ಲ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್

ಸಭೆಯಲ್ಲಿ ನೀರಾವರಿ ಹೋರಾಟ ಸಮಿತಿ ಗೌರವಾಧ್ಯಕ್ಷರಾದ ಎಚ್ಆರ್ ತಿಮ್ಮಯ್ಯ, ಕಾರ್ಯದರ್ಶಿ ಆಲೂರು ಸಿದ್ದರಾಮಣ್ಣ, ಖಜಾಂಚಿ ಬಬ್ಬೂರ್ ಸುರೇಶ್, ಉಪಾಧ್ಯಕ್ಷರಾದ ರಾಜೇಂದ್ರ, ನಿರ್ದೇಶಕರಾದ ಆರ್ ಕೆ ಗೌಡ್ರು ,ಪಿಟ್ಲಾಲಿ ಶ್ರೀನಿವಾಸ್, ಮಂಜುನಾಥ್ ಮಾಳಿಗೆ, ಉದ್ಯಮಿ ಮಹಮದ್ ಶಪಿವುಲ್ಲಾ, ನಾರಾಯಣ್ ಆಚಾರ್ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಹಾಜರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...