ಚಿತ್ರದುರ್ಗ | ಸಬ್ಸಿಡಿ ಆಸೆಗೆ ರೈತ, ಕೃಷಿಯನ್ನು ಕಾರ್ಪೊರೇಟ್ ಗಳ ವಂಚನೆಯ ಜಾಲಕ್ಕೆ; ರೈತಸಂಘ ಪ್ರತಿಭಟನೆ.

Date:

“ಸಬ್ಸಿಡಿ ಆಸೆ ತೋರಿಸಿ ರೈತ ಮತ್ತು ಕೃಷಿ ಕ್ಷೇತ್ರವನ್ನು ಬಂಡವಾಳ ಶಾಹಿಗಳಿಗೆ, ಕಾರ್ಪೊರೇಟ್ ಸಂಸ್ಥೆಗಳ ತೆಕ್ಕೆಗೆ ನೂಕಿ ಸರ್ಕಾರ ದ್ರೋಹ ಮಾಡುತ್ತಿದೆ” ಎಂದು ಚಿತ್ರದುರ್ಗದ ರೈತ ಸಂಘದ ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ಕಚೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗೆ ಈಡೇರಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಚಳ್ಳಕೆರೆ ಘಟಕ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಸಬ್ಸಿಡಿ ಸೇರಿದಂತೆ ವಿವಿಧ ಆಮಿಷ ತೋರಿಸಿ ಸರ್ಕಾರಗಳು ರೈತ ಮತ್ತು ಕೃಷಿ ಕ್ಷೇತ್ರವನ್ನು ಯಾವುದೇ ಕಾರಣಕ್ಕೆ ಕಾರ್ಪೋರೇಟ್ ಕಂಪನಿಗಳ ಹಿಡಿತಕ್ಕೆ ನೂಕುವುದು ಅಪರಾಧ.‌ ರೈತ ಮತ್ತು ಕೃಷಿ ಕ್ಷೇತ್ರಕ್ಕೆ ಮಾಡುವ ವಂಚನೆ. ಆದ್ದರಿಂದ 2022-23ನೇ ಸಾಲಿನಲ್ಲಿ ಇದ್ದಂತಹ ಆಕ್ರಮ-ಸಕ್ರಮದ ಕಾನೂನು ಅಡಿಯಲ್ಲಿ ರೈತರಿಗೆ ಕೊಡಬೇಕಾದ ಸೌಲತ್ತುಗಳನ್ನು ಕೊಟ್ಟು ಮೊದಲಿನಂತೆ ಇರುವ ಕಾನೂನನ್ನು ಮುಂದುವರೆಸಿಕೊಂಡು ಹೋಗಬೇಕೆಂದು ರೈತ ಸಂಘ ಒತ್ತಾಯಿಸುತ್ತದೆ” ಎಂದು ಆಗ್ರಹಿಸಿದರು.

1001962426
ಚಳ್ಳಕೆರೆ ತಾಲೂಕು ಕಚೇರಿ ಮುಂಭಾಗದಲ್ಲಿ ರೈತ ಸಂಘ ಪ್ರತಿಭಟನೆ

“ರೈತರು ವಿದ್ಯುತ್ತನ್ನು ತನ್ನ ಸ್ವಂತಕ್ಕಾಗಲಿ, ತನ್ನ ಕುಟುಂಬಕ್ಕಾಗಲಿ ಬಳಸುತ್ತಿಲ್ಲ. ರೈತರು ಬಳಸುವಂತಹ ವಿದ್ಯುತ್ ದೇಶದ ಆಹಾರದ ಭದ್ರತೆಗಾಗಿ ಮತ್ತು ರಾಜ್ಯದಲ್ಲಿರುವ ಕಾರ್ಖಾನೆಗಳನ್ನು ಚಾಲನೆ ಮಾಡಲು, ನಿರುದ್ಯೋಗಿಗಳಿಗೆ ಕೆಲಸ ಕೊಡಲು ಮತ್ತು ಪಶು-ಪಕ್ಷಿ ಮತ್ತು ಪ್ರಾಣಿಗಳಿಗೆ ಸಹಕಾರಿಯಾಗಲು ಹಾಗೂ ದೇಶದ ಅಭಿವೃದ್ಧಿಗಾಗಿ ಬಳಸುತ್ತಿದ್ದಾರೆ.‌ ಆದರೆ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದರೂ ಸಹ ರೈತರಿಗೆ ಇದುವರೆಗೂ ಕೊಡಬೇಕಾದಂತಹ ಸವಲತ್ತುಗಳನ್ನು ಕೊಟ್ಟಿಲ್ಲ. ಸರ್ಕಾರಗಳು ಮಾಡಬೇಕಾದ ಕೆಲಸಗಳನ್ನು ರೈತರೇ ಸ್ವಂತ ಬಂಡವಾಳದಿಂದ ಸುಮಾರು 32 ಲಕ್ಷ ಬೋರ್‌ವೆಲ್‌ಗಳನ್ನು ಕೊರೆದು ಬೆಳೆ ಬೆಳೆಯುವ ಮೂಲಕ ದೇಶದ ಆಹಾರದ ಭದ್ರತೆಯನ್ನು ಕಾಪಾಡಿದ್ದಾರೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲಾ ರಾಜಕಾರಣೆಗಳು ಚುನಾವಣೆಗೆ ಮುಂಚಿತವಾಗಿ ಕೊಟ್ಟಂತಹ ಆಶ್ವಾಸನೆಗಳನ್ನು ಇದುವರೆಗೂ ಜಾರಿ ಮಾಡದೇ ಮೋಸ ಮಾಡುತ್ತಿದ್ದಾರೆ. ಆದ್ದರಿಂದ ರೈತವಿರೋಧಿ 3 ಕೃಷಿ ಕಾಯಿದೆಗಳು ರದ್ದಾಗಬೇಕು ಮತ್ತು ಡಾ॥ ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಿ ರೈತರಿಗೆ M.S.P. ಜಾರಿಯಾಗುವವರೆಗೆ ರೈತರಿಗೆ ಕೊಟ್ಟಿರುವಂತಹ ಯಾವುದೇ ಕಾನೂನುಗಳನ್ನು ಬದಲಾವಣೆ ಮಾಡುವಂತಿಲ್ಲ. ಈಗ ರೈತರು ಕೃಷಿಗಾಗಿ ವಿದ್ಯುತ್ ಬಳಸುತ್ತಿದ್ದು, ಯಾವುದೇ ಕಾರಣಕ್ಕೂ ರೈತರು ಬಳಸುವ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ತನ್ನು ಕಟ್ ಮಾಡಬಾರದು” ಎಂದು ಎಚ್ಚರಿಸಿದರು.

1001962425

“ರೈತರ ಎಚ್ಚರಿಕೆ ಉಲ್ಲಂಘಿಸಿ ಮುಂದುವರೆದರೆ ರೈತರು ತಾಳ್ಮೆ ಕಳೆದುಕೊಂಡು ಹೋರಾಟಕ್ಕೆ ಧುಮಿಕಿದರೆ ಆಗುವ ಕಷ್ಟನಷ್ಟಗಳು, ಮಾನ ಹಾನಿ ಮತ್ತು ಪ್ರಾಣಹಾನಿಗೆ ಆಳುವ ಸರ್ಕಾರಗಳೇ ಹೊಣೆಗಾರರಾಗುತ್ತಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಎಚ್ಚರಿಸುತ್ತದೆ. ಹಾಗಾಗಿ ರೈತ ಬೇಡಿಕೆಗಳಾದ
1.ರೈತರು ಬಳಸುವ ವಿದ್ಯುತ್ ಅಕ್ರಮವಲ್ಲ, ಅದು ಯಾವಾಗಲೂ ಸಕ್ರಮ. ಆದ್ದರಿಂದ ಸೋಲಾರ್ ಕಂಪನಿಗೆ ವರ್ಗಾವಣೆ ಮಾಡುವುದನ್ನು ಕೈ ಬಿಡಬೇಕು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬಸವಣ್ಣ, ಅಂಬೇಡ್ಕರ್ ಜೀವನದುದ್ದಕ್ಕೂ ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದರು; ದಸಂಸ ಮುಖಂಡ ಗುರುಮೂರ್ತಿ.

  1. 2022-23 ನೇ ಸಾಲಿನಲ್ಲಿ ಅಕ್ರಮ-ಸಕ್ರಮದ ಕಾನೂನಿನಲ್ಲಿ ಜಾರಿಯಾಗಿರುವ ಸವಲತ್ತುಗಳನ್ನು ಕೊಟ್ಟು, ಅದೇ ರೀತಿ ಇರುವ ಕಾನೂನನ್ನು ಮುಂದುವರೆಸಿಕೊಂಡು ಹೋಗಬೇಕು. ಕೃಷಿ ಈ ದೇಶದ ಸಂಪತ್ತಾಗಿರುವುದರಿಂದ ಕೃಷಿ ಕ್ಷೇತ್ರವನ್ನು ಯಾವುದೇ ಕಾರಣಕ್ಕೆ, ಯಾವುದೇ ಕಂಪನಿಗಳಿಗೆ ವರ್ಗಾವಣೆ ಮಾಡಬಾರದು. ಈ ಬೇಡಿಕೆಗಳನ್ನು ಸರ್ಕಾರಗಳು ಉಲ್ಲಂಘಿಸಿದರೆ ರಾಜ್ಯಾಧ್ಯಂತ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಸರ್ಕಾರಗಳಿಗೆ ಎಚ್ಚರಿಕೆಯನ್ನು ಕೊಡುತ್ತಿದ್ದೇವೆ” ಎಂದು ಎಚ್ಚರಿಸಿದರು.‌
1001962449 1

ಪ್ರತಿಭಟನೆಯಲ್ಲಿ ಬೇಡಿಕೆ ಈಡೇರಿಕೆಗಾಗಿ ತಹಶೀಲ್ದಾರ್ ರೆಹಾನ್ ಪಾಷಾ ಅವರ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮನವಿ ಪತ್ರ ನೀಡಿ ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠ ಮೂರ್ತಿ, ಮುಖಂಡರಾದ ಶಿವಕುಮಾರ್, ರಾಜಣ್ಣ, ತಿಪ್ಪೇಸ್ವಾಮಿ, ಓಬಯ್ಯ, ತಿಪ್ಪೇಸ್ವಾಮಿ, ಸಣ್ಣ ಪಾಲಯ್ಯ, ಬೊಮ್ಮಣ್ಣ, ಈರಣ್ಣ, ಜಯಣ್ಣ, ಹನುಮಂತಪ್ಪ, ತಿಮ್ಮಾರೆಡ್ಡಿ, ಶಿವಕುಮಾರ್, ರಂಗಸ್ವಾಮಿ, ಉಪ್ಪಾರಹಟ್ಟಿ ಗ್ರಾಮದ ರೈತರಾದ ರತ್ನಮ್ಮ, ಶಿವಮ್ಮ, ಲಕ್ಷ್ಮೀದೇವಿ, ರಾಜಣ್ಣ ಸೇರಿದಂತೆ ನೂರಾರು ರೈತರು ಮಹಿಳೆಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...