ಚಿತ್ರದುರ್ಗ | ರೈತರ ಪಂಪ್ ಸೆಟ್ಗೆ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರ ತಮಟೆ ಚಳುವಳಿ

Date:

ಅಕ್ರಮ ಸಕ್ರಮ ಯೋಜನೆಯನ್ನು ಮತ್ತೆ ಮೊದಲಿನಂತೆ ಜಾರಿಗೊಳಿಸಬೇಕು ಹಾಗೂ ರೈತರ ಪಂಪ್ ಸೆಟ್ಗಳಿಗೆ ಮತ್ತು ವಿದ್ಯುತ್ ಮಾರ್ಗದಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಮತ್ತು ಚಳ್ಳಕೆರೆ ತಾಲೂಕಿನ ಘಟಕಗಳ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಪ್ರತಿಭಟನಾ ಜಾಥಾ ಮೂಲಕ ಬೆಸ್ಕಾಂ ಕಚೇರಿ ಮುಂಭಾಗ ನೂರಾರು ರೈತರು ಬೃಹತ್ ತಮಟೆ ಚಳುವಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಮುಖಂಡರು “ರೈತರ ಪಂಪ್ ಸೆಟ್ ಗಳಿಗೆ ಸರಬರಾಜು ಮಾಡುತ್ತಿರುವ ಬೆಸ್ಕಾಂನ 11 ಕೆವಿ ಎಲ್ ಟಿ ಮತ್ತು ಎಚ್‌ಟಿ ವಿದ್ಯುತ್ ಲೈನ್ ಗಳ ಅಡಿಯಲ್ಲಿ ಮರ, ಗಿಡ-ಬಳ್ಳಿ ಬೆಳೆದು ಹತ್ತಾರು ವರ್ಷಗಳಿಂದಲೂ ಸ್ವಚ್ಛಗೊಳಿಸದೆ ಕಾಡು ಸೃಷ್ಟಿಯಾಗಿದೆ. ಇದರಿಂದಾಗಿ ವಿದ್ಯುತ್ ಸಂಪರ್ಕ ಏರುಪೇರಾಗಿ ರೈತರ ವಿದ್ಯುತ್ ಪರಿವರ್ತಕ ಮತ್ತು ಕೃಷಿ ಪಂಪ್ ಸಟ್ ಗಳು ಸುಟ್ಟು ಹಾಳಾಗುತ್ತಿವೆ. ಇದರಿಂದಾಗಿ ರೈತರ ಸಾವಿರಾರು ಕೋಟಿ ಮೌಲ್ಯದ ಬೆಳೆಗಳು ಚಳ್ಳಕೆರೆ, ಮೊಳಕಾಲ್ಮೂರು ತಾಲೂಕಿನಲ್ಲಿ ನಷ್ಟವಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

1003499076

“ಬೀದಿ ದೀಪಗಳ ಸಾವಿರಾರು ಸಂಖ್ಯೆಯಲ್ಲಿ ಹಗಲು ಹೊತ್ತಿನಲ್ಲಿ ಬೆಳಗುತ್ತಿದ್ದರೂ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಗಮನಹರಿಸದೇ, ಕಚೇರಿಯಲ್ಲಿ ನಿದ್ರೆಗೆ ಜಾರಿದ್ದಾರೆ. ಇವರಿಂದ ರಾಷ್ಟ್ರೀಯ ಸಂಪತ್ತು ನಷ್ಟವಾಗುತ್ತಿದ್ದು, ವಿದ್ಯುತ್ ಉಳಿಸಿ ರೈತರ ಕೃಷಿಗೆ ನಿರಂತರ ವಿದ್ಯುತ್ ಪೂರೈಸಬೇಕೆಂದು ಒತ್ತಾಯಿಸಿ ರೈತರ ಬೃಹತ್ ತಮಟೆ ಚಳುವಳಿಯನ್ನು ಹಮ್ಮಿಕೊಂಡಿದ್ದೇವೆ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರ ಬೇಡಿಕೆಗಳಾದ ಅಕ್ರಮ ಸಕ್ರಮ ಯೋಜನೆಯಲ್ಲಿ ರೈತರ ವಿದ್ಯುತ್ ಪಂಪ್ಸೆಟ್ಗಳಿಗೆ ಸಾಮಗ್ರಿ ಅಳವಡಿಕೆಯಲ್ಲಿ ಗೋಲ್ಮಾಲ್ ನಡೆದಿದ್ದು, ತನಿಖೆ ಮಾಡಬೇಕು. ಎಲ್ಲ ರೈತರಿಗೂ 63ಕೆವಿ ವಿದ್ಯುತ್ ಪರಿವರ್ತಕ ಅಳವಡಿಸಬೇಕು. ಎಲ್ಲ ರೈತರಿಗೂ 24 ಗಂಟೆ ನಿರಂತರ ವಿದ್ಯುತ್ ನೀಡಬೇಕು. ಹಿರೇಹಳ್ಳಿ, ಘಟಪರ್ತಿ ಗ್ರಾಮಗಳಲ್ಲಿ ಪವರ್ ಸ್ಟೇಷನ್ ನನ್ನು ಪ್ರಾರಂಭಿಸಬೇಕು. ತಳಕು ಗ್ರಾಮದಲ್ಲಿ ಎಬಿಸಿ ಕೇಬಲ್ ಕಾಮಗಾರಿ ಅಪೂರ್ಣಗೊಂಡಿದ್ದು, ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಬಂಜಗೆರೆ ಗ್ರಾಮದಲ್ಲಿ ನಿರಂತರ ಜ್ಯೋತಿ ವಿದ್ಯುತ್ ಮಾರ್ಗದ ರೈಲ್ವೇ ಅಂಡರ್ ಪಾಸ್ ಕೇಬಲ್ ಸುಟ್ಟಿದ್ದು, ಈವರೆಗೂ ಕೇಬಲ್ ಅಳವಡಿಸದೆ ನಿರ್ಲಕ್ಷ ವಹಿಸಿದ್ದು, ಶೀಘ್ರವೇ ಅದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ, ತಮಟೆ ಚಳುವಳಿ ಹಮ್ಮಿಕೊಂಡಿದ್ದೇವೆ. ಸಂಬಂಧಪಟ್ಟ ಬೆಸ್ಕಾಂ ಅಧಿಕಾರಿಗಳು ಶೀಘ್ರವೇ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಆರಂಭಿಸಲಾಗುವುದು” ಎಂದು ಎಚ್ಚರಿಸಿದರು.

1003499075

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಳೆದುಕೊಂಡ ಆಭರಣ ಕೆಲವೇ ಗಂಟೆಗಳಲ್ಲಿ ಪತ್ತೆ: ಪೊಲೀಸರ ಕರ್ತವ್ಯಕ್ಕೆ ಶ್ಲಾಘನೆ

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಬೇಡ ರೆಡ್ಡಿಹಳ್ಳಿ ಬಸವ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ರೆಡ್ಡಿ, ಜಿಲ್ಲಾಧ್ಯಕ್ಷ ಮರ್ಲಹಳ್ಳಿ ರವಿಕುಮಾರ್, ತಿಪ್ಪೇಸ್ವಾಮಿ, ಟಿ ಗಂಗಾಧರ್, ಎಸ್ ಟಿ ಚಂದ್ರಣ್ಣ, ರುದ್ರಮ್ಮನಹಳ್ಳಿ ತಿಪ್ಪೇಸ್ವಾಮಿ, ಕಾಕಿ ಬೋರಯ್ಯನಹಟ್ಟಿ ತಿಪ್ಪೇಸ್ವಾಮಿ, ಸೂರಮ್ಮನಹಳ್ಳಿ ರಾಜಣ್ಣ, ಹೇಮಣ್ಣ, ಡಿ ಚಂದ್ರಶೇಖರ ನಾಯ್ಕ, ಮೊಗನಹಳ್ಳಿ ತಿಪ್ಪೇಸ್ವಾಮಿ, ನಿಂಗಣ್ಣ ಪಿಟಿ ಹಟ್ಟಿ, ಈರಣ್ಣ, ಹಿರೇಮಾನ್ ನಾಯ್ಕ, ಡಿಆರ್ ಅಶೋಕ್,
ಐನಳ್ಳಿ ವೀರೇಶ್, ಹಿರೇಹಳ್ಳಿ ನಾಗೇಂದ್ರಪ್ಪ, ಎಂ ಸುರೇಶ್, ಜವಳಿ ಶೇಖರ್, ಮಲ್ಲಸಮುದ್ರ ಚಿತ್ತಯ್ಯ, ಅಂಜನಪ್ಪ, ತಿಮ್ಮಾರೆಡ್ಡಿ, ಹೊಸೂರು ಮಧು, ತಿಮ್ಮಪ್ಪನಹಳ್ಳಿ ಮೈಲಾರಿ, ಕಪಿಲೆ ವೀರಣ್ಣ, ಗೊರಪ್ಪನವರ ಮಹೇಶ್, ವೆಂಕಟೇಶ್ ನಾಯ್ಕ್, ಶಿವಾರೆಡ್ಡಿ, ದಡ್ಡೆಯ್ಯ, ರಾಯಪುರ ಬಸವರಾಜು, ಹಿರೇಹಳ್ಳಿ ಬಸವರಾಜ್, ದಸಂಸ ಮುಖಂಡರಾದ ಹಿರೇಹಳ್ಳಿ ರಾಜಣ್ಣ, ವಕೀಲ ರುದ್ರಮನಿ, ರಾಮಸ್ವಾಮಿ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...