ಚಿತ್ರದುರ್ಗ | ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಕೃಷಿ ಇಲಾಖೆ ನೌಕರ ಸಾವು

Date:

ದೇವಾಲಯಕ್ಕೆ ತೆರಳುವಾಗ ಕಾರು-ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ತಿರುಮಲ ಡಾಬಾ ಬಳಿ ನಡೆದಿದೆ.

ಚಿತ್ರದುರ್ಗ ಮುನ್ಸಿಪಲ್ ಕಾಲೋನಿಯ 5ನೇ ಕ್ರಾಸ್ ನಿವಾಸಿ ವಿಶಾಲ್ (28) ಮೃತ ದುರ್ದೈವಿ. ಇವರು ಹೊಳಲ್ಕೆರೆಯ ಕೃಷಿ ಇಲಾಖೆಯಲ್ಲಿ ಟೆಕ್ನಿಕಲ್‌ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಭಾನುವಾರ ಇವರ ಎಂಗೇಜ್ಮೆಂಟ್ ಕಾರ್ಯವಿತ್ತು. ಇಂದು ಶನಿವಾರದ ನಿಮಿತ್ತ ಹೊಳಲ್ಕೆರೆ ರಸ್ತೆಯಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಚಿತ್ರದುರ್ಗದ ತಿರುಮಲ ಡಾಬಾದ ಬಳಿ ಬರುತ್ತಿದ್ದಂತೆ ಕಾರು ಮತ್ತು ಲಾರಿ ಮಧ್ಯೆ ಭೀಕರವಾದ ಅಪಘಾತ ಸಂಭವಿಸಿದೆ. ಪರಿಣಾಮ ವಿಶಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಜ 25ರವರೆಗೆ ರೂಟ್ ಮಾರ್ಚ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತದಿಂದ ಲಾರಿ ನೆಲಕ್ಕೆ ಉರುಳಿ ಬಿದ್ದಿದ್ದರೇ, ಕಾರು ಕೆಲಸಕ್ಕೆ ಬಾರದ ರೀತಿ ಫುಲ್ ಜಖಂ ಆಗಿದೆ. ವಿಶಾಲ್​ಗೆ ಶಿವಮೊಗ್ಗದ ಸಾಗರ ಮೂಲದ ಯುವತಿಯೊಂದಿಗೆ ನಾಳೆ ಎಂಗೇಜ್ಮೆಂಟ್ ನಡೆಯಬೇಕಿತ್ತು. ಖುಷಿಯಲ್ಲಿ ಇರುವಾಗಲೇ ದುರ್ಘಟನೆ ಸಂಭವಿಸಿದೆ. ಇದು ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...