ಚಿತ್ರದುರ್ಗ | ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ

Date:

ಚಿತ್ರದುರ್ಗದ ಚಳ್ಳಕೆರೆ ಗೇಟ್‌ ಬಳಿ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿವೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿದಾಗ ಅಸ್ಥಿಪಂಜರಗಳು ಕಂಡುಬಂದಿವೆ.

ಘಟನೆ ಸಂಬಂಧ ಪವನ್ ಕುಮಾರ್ ಎಂಬವರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆ ಮನೆಯಲ್ಲಿ ತಮ್ಮ ಸಂಬಂಧಿ, ನಿವೃತ್ತ ಇಂಜಿನಿಯರ್ ಜಗನ್ನಾಥರೆಡ್ಡಿ, ಅವರ ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ ಹಾಗೂ ನರೇಂದ್ರರೆಡ್ಡಿ ವಾಸವಾಗಿದ್ದರು ಎಂದು ಪವನ್ ಕುಮಾರ್ ತಿಳಿಸಿದ್ದಾರೆ. ಈ ಅಸ್ಥಿಪಂಜರಗಳು ಅವರದ್ದೇ ಇರಬಹುದು ಎಂದು ಹೇಳಲಾಗಿದೆ.

ಆ ಐವರು ಆತ್ಮಹತ್ಯೆ ಮಾಡಿಕೊಂಡಿರಬಹುದೇ? ಅಥವಾ ಯಾರಾದರೂ ಕೊಲೆ ಮಾಡಿರಬಹುದೇ? ಎಂಬ ಅನುಮಾನಗಳು ವ್ಯಕ್ತವಾಗಿವೆ. ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳಿಸಲಾಗಿದೆ. ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಗೊತ್ತಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2023 12 29 at 1.14.30 PM

ಬುಧವಾರ ಯಾರೋ ಮನೆಯ ಬಾಗಿಲು ಹೊಡೆದಿದ್ದಾರೆ. ಹೀಗಾಗಿ, ನಾಯಿಗಳು ಮನೆ ಒಳಗೆ ಹೋಗಿದ್ದು, ಅಲ್ಲಿದ್ದ ಅಸ್ಥಿಪಂಜರದ ತಲೆಬುರುಡೆಯನ್ನು ಹೊರತಂದು ಹಾಕಿವೆ. ಅದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

“ಆ ಮನೆಯಲ್ಲಿ 2019ರ ಕ್ಯಾಲೆಂಡರ್ ಸಿಕ್ಕಿದೆ. ಕೊರೊನಾ ಸಮಯದಲ್ಲಿ ಅವರು ಸಾವಿಗೀಡಾಗಿರುವ ಅನುಮಾನವಿದೆ” ಎಂದು ಸ್ಥಳೀಯರು ಹೇಳಿದ್ದಾರೆ.

“ಜಗನ್ನಾಥರೆಡ್ಡಿ ಹಲವು ವರ್ಷಗಳಿಂದ ನಮ್ಮ ಸಂಪರ್ಕದಲ್ಲಿ ಇರಲಿಲ್ಲ. ಕೆಲ ವರ್ಷಗಳಿಂದ ಅವರ ಕುಟುಂಬ ಕಾಣಿಸಿರಲಿಲ್ಲ. ಅವರ ಮನೆಯಲ್ಲಿ ಪತ್ತೆಯಾಗಿರುವ ಅಸ್ಥಿಪಂಜರಗಳು ಅವರದ್ದೇ ಇರಬಹುದು. ವರ್ಷಗಳ ಹಿಂದೆಯೇ ಅವರು ಮೃತಪಟ್ಟಿರುವ ಸಾಧ್ಯತೆಗಳಿವೆ” ಎಂದು ಪವನ್ ಕುಮಾರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...