ಚಿತ್ರದುರ್ಗ | ನರೇಗಾದಲ್ಲಿ ಕಡ್ಡಾಯ ನೂರು ದಿನಗಳ ಕೆಲಸ, ಬೇಡಿಕೆಗಳ ಈಡೇರಿಕೆಗಾಗಿ ಗ್ರಾಕೂಸ್ ಮನವಿ

Date:

ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ನಿಯಮಾವಳಿಯಂತೆ ಕೆಲವು ಪಂಚಾಯತಿಗಳಲ್ಲಿ ಸರಿಯಾಗಿ ಕೆಲಸ ಕೊಟ್ಟಿರುವುದಿಲ್ಲ. ಅಲ್ಲದೇ ನೂರು ದಿನಗಳ ಸಂಪೂರ್ಣ ಕೆಲಸ ನೀಡಿರುವುದಿಲ್ಲ. ಪಂಚಾಯಿತಿಗಳಲ್ಲಿ ವಿವಿಧ ಸಮಸ್ಯೆಗಳಲ್ಲಿದ್ದು ಕನಿಷ್ಠ ನೂರು ದಿನಗಳ ಕೆಲಸ ಮತ್ತು ಸಮರ್ಪಕ ಕೂಲಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ- ಗ್ರಾಕೂಸ್ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು “ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಕೆರೆಕಲ್ಲಟ್ಟಿ, ದೊಡ್ಡೇರಿ, ಸಿದ್ದೇಶ್ವರನ ದುರ್ಗಾ, ದೇವರ ಮರಿಕುಂಟೆ, ಜಾಜೂರು ಪಂಚಾಯಿತಿ ಸೇರಿದಂತೆ ಜೆಜೆ ಕಾಲೋನಿ, ಬಸವೇಶ್ವರ ಕಾಲೋನಿ, ಅಲ್ಲಾಪುರ, ಬೊಮ್ಮನ ಕುಂಟೆ, ಗ್ರಾಮ ಪಂಚಾಯತಿಗಳಲ್ಲಿ ನಿರಂತರವಾಗಿ ಕೂಲಿಕಾರ್ಮಿಕರಿಗೆ ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಕೆಲಸ ಬೇಕಾಗಿದ್ದು, ನಿರಂತರ ಕೆಲಸಕ್ಕೆ ಪಂಚಾಯತ್ ಅಧಿಕಾರಿಗಳಿಗೆ ನಿರ್ದೇಶಿಸಬೇಕು” ಎಂದು ಒತ್ತಾಯಿಸಿದರು.

1002491214

“ಬೊಮ್ಮನ ಕುಂಟೆ ಗ್ರಾಮದ ಕೂಲಿಕಾರರ ಕೆಲಸಕ್ಕೆ ಎನ್ ಎಂ ಆರ್ (NMR) ತೆಗೆದಿದ್ದು ಉದ್ಯೋಗ ಖಾತ್ರಿಯ ಕೆರೆಯ ಕೆಲಸಕ್ಕೆ ಹೋಗಲು ದಾರಿ ಇಲ್ಲದ್ದರಿಂದ ಅಕ್ಕಪಕ್ಕದ ಜಮೀನಿನವರು ಹೋಗಲು ದಾರಿ ಕೊಡುತ್ತಿಲ್ಲ. ಕೆಲಸಕ್ಕೆ ಕಾರ್ಮಿಕರು ತೆರಳಲು ಸಾಧ್ಯವಾಗಿಲ್ಲದಿರುವುದರಿಂದ ದಾರಿ ಕುರಿತು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಅಲ್ಲದೇ ಕಾಮಸಮುದ್ರ ನಾಗಗೊಂಡನಹಳ್ಳಿ ಗ್ರಾಮ ಪಂಚಾಯತಿಯ ಕೂಲಿಕಾರ್ಮಿಕರಿಗೆ ‘ಸಮಸ್ಯೆ ಇದ್ದು ಕೆಲಸಕ್ಕೆ ಹೋಗಬೇಡಿ’ ಎಂದು ಪಂಚಾಯಿತಿ ಸಿಬ್ಬಂದಿಯೇ ತಿಳಿಸಿದ್ದಾರೆ. ಅಲ್ಲದೆ ನಮೂನೆ ಆರು ವಿತರಿಸಿ, ಕೆಲಸ ಕೊಟ್ಟಿರುವುದಿಲ್ಲ. ಸಿದ್ದೇಶ್ವರನ ದುರ್ಗಾ ಪಂಚಾಯತಿಯಲ್ಲಿ 3 ವಾರದ ಉದ್ಯೋಗ ಖಾತ್ರಿಯ ಕೂಲಿ ಹಣ ಬಾಕಿ ಇದ್ದು ಇದುವರೆಗೂ ಪಾವತಿ ಆಗಿರುವುದಿಲ್ಲ. ಈ ಎಲ್ಲ ಸಮಸ್ಯೆಗಳ ಬಗೆಹರಿಸಲು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಸಾಕಷ್ಟು ಆರ್ಥಿಕ ನೆರವು, ಬಲ ತುಂಬ ಯೋಜನೆಯಾಗಿದ್ದು ಚಳ್ಳಕೆರೆ ತಾಲೂಕಿನಲ್ಲಿ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ. ಗ್ರಾಕೂಸ್ ಸಂಘಟನೆಯು ಚಳ್ಳಕೆರೆ ತಾಲೂಕಿನಲ್ಲಿ ಹಲವು ಹಳ್ಳಿಗಳಲ್ಲಿ ಭೇಟಿ ಮಾಡಿ ಬಡ ಕಾರ್ಮಿಕರ ಗುಂಪುಗಳನ್ನು ಮಾಡಿಸಿದೆ. ಕಾರ್ಮಿಕರಿಗಾಗಿ ಸಾಕಷ್ಟು ಕೆಲಸ ಮಾಡುತ್ತಿದ್ದು, ಕಾರ್ಮಿಕರಿಗೆ ನಿರಂತರವಾಗಿ ಕೆಲಸ ಕೊಡಬೇಕೆಂದು” ವಿನಂತಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶ್ರಮಿಕ ಶಕ್ತಿ ಸಂಯೋಜಿತ ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ ಘಟಕ ಉದ್ಘಾಟನೆ

“ಅಲ್ಲದೆ ಕೂಲಿ ಕಾರ್ಮಿಕರ ಬೇಡಿಕೆಗಳಾದ ಕಡ್ಡಾಯ ನೂರು ದಿನಗಳ ಕೆಲಸ ಮತ್ತು ಜಾಬ್ ಕಾರ್ಡ್ಗಳನ್ನು ಅನುಮತಿ ಇಲ್ಲದೆ ಬೇರೆಯವರು ಬಳಕೆ ಮಾಡಿದರೆ ಕೂಡಲೇ ಕ್ರಮ ಜರುಗಿಸಬೇಕು, ಕಾರ್ಮಿಕರಿಗೆ ಮಾತ್ರ ಜಾಬ್ ಕಾರ್ಡ್ ನೀಡಬೇಕು. ಕಾರ್ಮಿಕರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆಯನ್ನು ಕೊಡಬೇಕು ಹಾಗೂ ನಿರಂತರವಾಗಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಿಸಬೇಕು ಅಲ್ಲದೇ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಇಂಜಿನಿಯರ್ ಬಿ ಎಫ್ ಟಿಗಳಿಗೆ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಹಿರಿಯ ಅಧಿಕಾರಿಗಳು ಮತ್ತು ತಾವು ಕಾಲಕಾಲಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎನ್ನುವ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.‌

ಮನವಿ ಸಲ್ಲಿಸುವ ವೇಳೆ ಚಳ್ಳಕೆರೆ ಗ್ರಾಕೂಸ್ ಸಂಘಟನಾ ಸಂಚಾಲಕರಾದ ಮಂಜಮ್ಮ ಪರಶುರಾಂಪುರ,
ಸಂಧ್ಯಾ ಎಂಆರ್ ಸಿದ್ದೇಶ್ವರನದುರ್ಗ,
ಪರಮೇಶ್ ಬಿ ಜುಂಜರಗುಂಟೆ,
ತಿಪ್ಪೇಸ್ವಾಮಿ ಸಿ ಉಪ್ಪಾರಟ್ಟಿ ಸೇರಿದಂತೆ ಗ್ರಾಕೂಸ್ ಸಂಘಟನೆಯು ಕಾರ್ಯಕರ್ತರು ಪಾಲ್ಗೊಂಡಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...