ಚಿತ್ರದುರ್ಗ | ಕೂಲಿ ಕಾರ್ಮಿಕರಿಗೆ ನರೇಗಾ ಉದ್ಯೋಗಕ್ಕೆ ಒತ್ತಾಯಿಸಿ ಗ್ರಾಕೂಸ್ ಪ್ರತಿಭಟನೆ.

Date:

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ-ಗ್ರಾಕೂಸ್ ಕಾರ್ಯಕರ್ತರು ಚಿತ್ರದುರ್ಗ ನಗರದ ಡಿಸಿ ಕಚೇರಿ ಮುಂಭಾಗದ ಒನಕೆ ಓಬವ್ವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿತು.

‘ಹಲವು ಗ್ರಾಮ ಪಂಚಾಯಿತಿಗಳಲ್ಲಿ ಸರಿಯಾಗಿ ಕೂಲಿ ಕಾರ್ಮಿಕರಿಗೆ ನರೇಗಾ ಉದ್ಯೋಗ ನೀಡಿರುವುದಿಲ್ಲ. ಕೆಲವೆಡೆ ಕೇವಲ ಒಂದು ವಾರ ಕೆಲಸ ಕೊಡಿ ಕೊಟ್ಟು ಜಾಬ್ ಕಾರ್ಡ್ಗಳಲ್ಲಿ ಉದ್ಯೋಗ ಅವಧಿ ಮುಗಿದಿದೆ ಎಂದು ತಿಳಿಸುತ್ತಾರೆ. ಯಂತ್ರಗಳಲ್ಲಿ ಕೆಲಸ ಮಾಡುತ್ತಿದ್ದು ನೈಜಕೂಲಿ ಕಾರ್ಮಿಕರಿಗೆ ಕೆಲಸ ಸಿಗುತ್ತಿಲ್ಲ’ ಎಂದು ಆರೋಪಿಸಿದರು.

1001674587
ಜಿಲ್ಲಾ ಪಂಚಾಯತ್ ಮುಂಬಾಗ ಗ್ರಾಕೂಸ್ ಕಾರ್ಯಕರ್ತರ ಮಧ್ಯಾಹ್ನದ ಉಪಹಾರ

ಈ ವೇಳೆ ಮಾತನಾಡಿದ ಚಳ್ಳಕೆರೆ ತಾಲೂಕಿನ ಗ್ರಾಕೂಸ್ ಸಂಘಟನೆಯ ಓಬಯ್ಯ “ದೊಡ್ಡೇರಿ, ಪರಶುರಾಂಪುರ, ಜಾಜೂರು ಗ್ರಾಮ ಪಂಚಾಯಿತಿಗಳಲ್ಲಿ ಸರಿಯಾಗಿ ಉದ್ಯೋಗ ನೀಡುತ್ತಿಲ್ಲ. ಪಿಡಿಒಗಳು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿಕೊಂಡು ಕೂಲಿ ಕಾರ್ಮಿಕರಿಗೆ ಉದ್ಯೋಗ ನಿರಾಕರಿಸುತ್ತಿದ್ದಾರೆ. ಕೆಲವೆಡೆ ಯಂತ್ರಗಳಲ್ಲಿ ಕೆಲಸಗಳಾಗುತ್ತಿದೆ. ಮೇಲಾಧಿಕಾರಿಗಳು ಗಮನಹರಿಸಿ ಕೂಲಿ ಕಾರ್ಮಿಕರಿಗೆ ಕೆಲಸ ಕೊಡಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಳ್ಳಕೆರೆ ತಾಲೂಕಿನ ಗ್ರಾಕೂಸ್ ಸಂಘಟನೆಯ ಮಂಜಮ್ಮ ಮಾತನಾಡಿ,”ನರೇಗಾ ಪ್ರಕಾರ ಒಂದು ಕುಟುಂಬಕ್ಕೆ ನೂರು ದಿನಗಳ ಉದ್ಯೋಗ ಅವಧಿ ದೊರಕಬೇಕು. ಆದರೆ ಅದು ನಮ್ಮ ತಾಲೂಕಿನಲ್ಲಿ ಸರಿಯಾಗಿ ಜಾರಿಯಾಗುತ್ತಿಲ್ಲ. ಅತಿ ಹೆಚ್ಚು ಮಾನವ ದಿನಗಳು ಅಲ್ಲಿ ಯಂತ್ರಗಳಿಂದ ಕೆಲಸ ಮಾಡುತ್ತಿರುವ ಜನಪ್ರತಿನಿಧಿಗಳಿಗೆ ಸಿಗುತ್ತಿದೆ. ಅದರಿಂದಲೇ ಜೀವನ ಮಾಡುವ ನೈಜ ಕೂಲಿ ಕಾರ್ಮಿಕರಿಗೆ ಉದ್ಯೋಗ ಕೊಡದೆ ವಂಚಿಸಲಾಗುತ್ತಿದೆ. ಮತ್ತು ಕೊಟ್ಟಿರುವ ಅಲ್ಪ ಸ್ವಲ್ಪ ಕೆಲಸಕ್ಕೂ ಸರಿಯಾದ ಸಮಯಕ್ಕೆ ಕೂಲಿ ಪಾವತಿಸದೆ ತಿಂಗಳಗಟ್ಟಲೆ ಅಲೆದಾಡಿಸಿ ವಂಚಿಸಲಾಗುತ್ತಿದೆ” ಎಂದು ಆರೋಪಿಸಿದರು.

1001674585
ಮನವಿ ಸ್ವೀಕರಿಸಿದ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ

ಪ್ರತಿಭಟನೆಯ ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ತಿಮ್ಮಣ್ಣ, “ನರೇಗಾ ಪ್ರಕಾರ ಅಲ್ಲಿನ ಕೂಲಿಕಾರ್ಮಿಕರಿಗೆ ನೂರು ದಿನಗಳ ಉದ್ಯೋಗ ನೀಡಬೇಕು. ಸಂಘಟನೆಯವರು ನೀಡಿರುವ ಮನವಿ ಪ್ರಕಾರ ಆಯಾ ತಾಲೂಕಿನ ಗ್ರಾಮ ಪಂಚಾಯಿತಿ ಪಿಡಿಒಗಳು ಮತ್ತು ಎಡಿಗಳ ತುರ್ತು ಸಭೆಯನ್ನು ಶುಕ್ರವಾರ ಕರೆಯುತ್ತಿದ್ದೇನೆ. ಸಂಘಟನೆಯ ಕಾರ್ಮಿಕರನ್ನು ಎದುರಿಗೆ ಕೂರಿಸಿಕೊಂಡು ಸಮಸ್ಯೆ ಇರುವ ಪಂಚಾಯತಿಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಕೂಡಲೇ ನರೇಗಾ ಉದ್ಯೋಗ ನೀಡುವಂತೆ ಕ್ರಮ ಕೈಗೊಳ್ಳುತ್ತೇನೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬ್ಯಾಂಕಿಂಗ್ ವ್ಯವಸ್ಥೆ ಸುಧಾರಿಸಿ: ಯುಎಫ್‌ಬಿಯು-ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ ಆಗ್ರಹ.

ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಮಲ್ಲೇಶ್, ಚಿತ್ರದುರ್ಗ ತಾಲೂಕು ಸಂಚಾಲಕಿ ತೇಜೇಶ್ವರಿ, ಭಾರತಿ, ಕರಿಯಮ್ಮ, ಚಿದಾನಂದ, ಆನಂದ, ಚೆನ್ನಮ್ಮ, ನಾಗರಾಜ, ಶಿವಮ್ಮ, ಚಿತ್ತಮ್ಮ, ನೇತ್ರಾವತಿ, ರಾಮಪ್ಪ, ಕವಿತಾ, ಗೀತಮ್ಮ, ಭಾಗ್ಯಮ್ಮ, ವಿನೋದಮ್ಮ ಸೇರಿದಂತೆ ಹಲವಾರು ಗ್ರಾಕೂಸ್ ಕಾರ್ಯಕರ್ತರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ |ನೀರು ಸರಬರಾಜು ವಿಳಂಬ; ನಗರಸಭೆ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಸಮಾಧಾನ

ಚಿತ್ರದುರ್ಗ ನಗರದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದಕ್ಕೆ ನಗರಸಭೆ...

ಶಿವಮೊಗ್ಗ | ಬಜೆಟ್ 2026-27ರಲ್ಲಿ ಜಿಲ್ಲೆಗೆ ನೀಡಿದ ಅನುದಾನ ಹಾಗೂ ಘೋಷಣೆಗಳೆಷ್ಟು?

ಅವಿಭಜಿತ ಶಿವಮೊಗ್ಗ ಜಿಲ್ಲೆಯಿಂದ ಕರ್ನಾಟಕ ರಾಜ್ಯಕ್ಕೆ ಮೂರು ಮುಖ್ಯಮಂತ್ರಿಗಳನ್ನು ನೀಡಿದ ಕೀರ್ತಿ...

ಚಿತ್ರದುರ್ಗ | ದಂತ ವೈದ್ಯಕೀಯ ಸ್ನಾತಕೋತ್ತರ ಪದವಿಯಲ್ಲಿ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಡಾ. ಸಾಧನಾ ಎಸ್. ಎಂ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆಸಿದ ದಂತ ವೈದ್ಯಕೀಯ ಸ್ನಾತಕೋತ್ತರ...