ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

Date:

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ. ಇದನ್ನು ತಪ್ಪಿಸಲು ನೀಡುವ ಎಚ್.ಪಿ.ವಿ ಲಸಿಕೆ ಸುರಕ್ಷಿತವಾಗಿದ್ದು, ಗರ್ಭಕಂಠದ ಕ್ಯಾನ್ಸರ್ ಬಾರದಂತೆ ತಡೆಗಟ್ಟುತ್ತದೆ ಎಂದು ಲಸಿಕಾಕಾರಣದ ರಾಜ್ಯ ಯೋಜನಾಧಿಕಾರಿ ಡಾ.ಮೆಲ್ವಿನ್ ಕುಮಾರ್ ಹೇಳಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ ತಾಲೂಕಾ ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ನಗರದ ನೆಹರು ನಗರ ಆರೋಗ್ಯ ಕೇಂದ್ರದಲ್ಲಿ, ಶುಕ್ರವಾರ ಆಯೋಜಿಸಿದ ಎಚ್.ಪಿ.ವಿ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಎಚ್.ಪಿ.ವಿ ಜನನಾಂಗದ ಸೋಂಕುಗಳಿಗೆ ಕಾರಣವಾಗುವ ಒಂದು ಸಾಮಾನ್ಯ ವೈರಸ್. ಭಾರತದಲ್ಲಿ ಕ್ಯಾನ್ಸರ್ ಪತ್ತೆಯಾದ ಮಹಿಳೆಯರ ಪೈಕಿ ಗರ್ಭಕಂಠದ ಕ್ಯಾನ್ಸರ್ ತುತ್ತಾದವರ ಸಂಖ್ಯೆ ಎರಡನೇ ಸ್ಥಾನದಲ್ಲಿದೆ. ದೇಶಾದ್ಯಂತ ನಡೆಯುತ್ತಿರುವ ಲಿಸಿಕಾಕರಣದ ಅಭಿಯಾನದಲ್ಲಿ ಮುಖ್ಯವಾಗಿ 14 ವರ್ಷ ತುಂಬಿದ 15 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಎಚ್.ಪಿ.ವಿ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ತಾಲೂಕಾ ಆರೋಗ್ಯ ಅಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡುತ್ತಾ ಎಚ್.ಪಿ.ವಿ ಲಸಿಕೆ ಹೊಸದೇನಲ್ಲ ಜಗತ್ತಿನಾದ್ಯಂತ ಈಗಾಗಲೇ 50 ಕೋಟಿ ಲಸಿಕೆಗಳನ್ನು ನೀಡಲಾಗಿದೆ. ಕಳೆದ 15 ವರ್ಷಗಳ ಅಂಕಿ ಅಂಶಗಳು ಎಚ್.ಪಿ.ವಿ ಲಸಿಕೆ ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಸಾಬೀತುಪಡಿಸಿವೆ ಎಂದರು.

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ ಮೂಗಪ್ಪ ಮಾಹಿತಿ ನೀಡುತ್ತಾ ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ ಪೋಷಕರು 14 ವರ್ಷ ತುಂಬಿದ 15 ವರ್ಷದ ಒಳಗಿನ ಹೆಣ್ಣು ಮಕ್ಕಳನ್ನು ಲಸಿಕಾ ಕೇಂದ್ರಕ್ಕೆ ಕರೆತಂದು ಲಸಿಕೆಗಳನ್ನು ಹಾಕಿಸಿ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಯಲು ಮುಂದೆ ಬರಬೇಕೆಂದರು.

ನೆಹರು ನಗರ ಆರೋಗ್ಯ ಕೇಂದ್ರದಲ್ಲಿ 8 ಅರ್ಹ ಮಕ್ಕಳಿಗೆ ಎಚ್.ಪಿ.ವಿ ಲಸಿಕೆ ನೀಡಲಾಯಿತು. 

ಈ ವೇಳೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಕೃಷ್ಣನಾಯಕ್ , ಡಾ. ಸೈಯದ್ ಬಿಲಾಲ್. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಜಾನಕಿ, ಬಿ.ಪಿ.ಎಂ ಯೂನಿಟ್ ಸಂತೋಷ್, ವ್ಯಾಕ್ಸಿನ್ ಕೋಲ್ಡ್ ಚೈನ್ ಮ್ಯಾನೇಜರ್ ವೀರೇಶ್, ಆಶಾ ಮೆಂಟರ್ ತಬಿತಾ, ಎಚ್‌ಓ ಹನುಮಂತಪ್ಪ. ಪಿ.ಎಚ್.ಸಿ.ಓ ಮನು, ಸಿಬ್ಬಂದಿ ಲಿಖಿತ, ಪದ್ಮ, ಆಶಾ ಕಾರ್ಯಕರ್ತೆಯರಾದ ಕೆಂಚಮ್ಮ, ಭಾಗ್ಯಮ್ಮ, ನಮ್ರತಾ, ನೇತ್ರಾವತಿ ಇತರೆ ಸಿಬ್ಬಂದಿ ವರ್ಗದವರು ಪೋಷಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...

ಚಿತ್ರದುರ್ಗ | ಭದ್ರಾ ಹೋರಾಟಕ್ಕೆ ಸಂಘಟನೆಗಳ ಶಕ್ತಿ

 ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಒನಕೆ ಓಬವ್ವ ವೃತ್ತದಲ್ಲಿ...