ಚಿತ್ರದುರ್ಗ | ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ ವಿಮೆ ಯೋಜನೆಯಡಿ ರೈತರ ನೋಂದಣಿಗೆ ಜುಲೈವರೆಗೆ ಕಾಲಾವಕಾಶ

Date:

ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಟೊಮ್ಯಾಟೋ ಹಾಗೂ ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ವಿಮೆ ನೊಂದಣಿಗೆ ಅವಕಾಶ ಕಲ್ಪಿಸಲಾಗಿದೆ.‌

1002184344

ಚಿತ್ರದುರ್ಗ ಜಿಲ್ಲೆಯ ಬೇರೆ ಬೇರೆ ತಾಲೂಕುಗಳಿಗೆ 2025ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅಧಿಸೂಚಿತ ತೋಟಗಾರಿಕೆ ಬೆಳೆಗಳ ತಾಲೂಕುವಾರು ವಿಂಗಡಿಸಿ ವಿಮೆ ನೊಂದಣಿಗೆ ಅವಕಾಶ ನೀಡಲಾಗಿದೆ. 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ. ನೀರಾವರಿ ಆಶ್ರಿತ ಈರುಳ್ಳಿ ಬೆಳೆ ವಿಮೆ ನೊಂದಣಿಗೆ ಜುಲೈ 15 ಕಡೆಯ ದಿನ. ಚಿತ್ರದುರ್ಗ ಜಿಲ್ಲೆಗೆ ವಿಮಾ ಕಂಪನಿಯಾಗಿ ದಿ ಓರಿಎಂಟಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಅನ್ನು ನಿಗಧಿಪಡಿಸಲಾಗಿದೆ.

1002184345

ಚಿತ್ರದುರ್ಗ ತಾಲೂಕಿನ ಕಸಬಾ, ತುರುವನೂರು ಹಾಗೂ ಹಿರೇಗುಂಟನೂರು ಹೋಬಳಿ (ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ), ಭರಮಸಾಗರ ಹೋಬಳಿ (ಈರುಳ್ಳಿ ನೀರಾವರಿ, ಟೊಮೋಟೊ). ಹಿರಿಯೂರು ತಾಲೂಕಿನ ಕಸಬಾ ಹೋಬಳಿ (ಈರುಳ್ಳಿ ನೀರಾವರಿ) ಧರ್ಮಪುರ ಹೋಬಳಿ (ಈರುಳ್ಳಿ ನೀರಾವರಿ, ಟೊಮೋಟೋ) ಐಮಂಗಲ, ಜೆ.ಜಿ.ಹಳ್ಳಿ ಹೋಬಳಿಗೆ (ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ). ಹೊಳಲ್ಕೆರೆ ತಾಲೂಕಿನ ರಾಮಗಿರಿ ಹಾಗೂ ತಾಳ್ಯ ಹೋಬಳಿ (ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ, ಟೊಮೋಟೊ), ಹೊಸದುರ್ಗ ತಾಲೂಕಿನ ಕಸಬಾ ಹೋಬಳಿ (ಈರುಳ್ಳಿ ಮಳೆಯಾಶ್ರಿತ, ಟೊಮೊಟೊ, ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ). ಚಳ್ಳಕೆರೆ ತಾಲೂಕಿನ ಕಸಬಾ, ನಾಯಕನಹಟ್ಟಿ, ಪರುಶುರಾಂಪುರ ಹಾಗೂ ತಳಕು ಹೋಬಳಿಗೆ (ಈರುಳ್ಳಿ ನೀರಾವರಿ, ಟೊಮೋಟೊ).‌ಮೊಳಕಾಲ್ಮುರು ತಾಲೂಕಿನ ದೇವಸಮುದ್ರ ಹಾಗೂ ಕಸಬಾ ಹೋಬಳಿ (ಈರುಳ್ಳಿ ನೀರಾವರಿ, ಟೊಮೋಟೊ) ಬೆಳೆಗಳ ನೋಂದಣಿಗೆ ಅವಕಾಶವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002184343

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನ್ಯಾಯವಾದಿಗಳು ಸಂವಿಧಾನದ ರಾಯಭಾರಿಗಳು ಮೂಲಭೂತ ಹಕ್ಕುಗಳ ರಕ್ಷಕರು; ನ್ಯಾ. ಶಿವರಾಜ ವಿ. ಪಾಟೀಲ

ಟೊಮ್ಯಾಟೋ ಬೆಳೆಯ ವಿಮೆ ಮೊತ್ತ ಹೆಕ್ಟೇರಿಗೆ ರೂ.141500 ಇದ್ದು, ರೈತರ ವಿಮಾ ಕಂತು ರೂ.7075 ಆಗಿದೆ. ನೀರಾವರಿ ಈರುಳ್ಳಿ ವಿಮೆ ಮೊತ್ತ ಹೆಕ್ಟೇರಿಗೆ ರೂ.80500 ಇದ್ದು, ರೈತರ ವಿಮಾ ಕಂತು ರೂ.4025 ಆಗಿದೆ. ಮಳೆ ಆಶ್ರಿತ ಈರುಳ್ಳಿ ವಿಮಾ ಮೊತ್ತ ಹೆಕ್ಟೇರಿಗೆ ರೂ. 75750 ಆಗಿದ್ದು, ರೈತರ ವಿಮಾ ಕಂತು ರೂ.3787.50 ಆಗಿದೆ. ಮಳೆ ಆಶ್ರಿತ ಕೆಂಪು ಮೆಣಸಿಕಾಯಿ ವಿಮಾ ಮೊತ್ತ ಹೆಕ್ಟೇರಿಗೆ ರೂ.78750 ಆಗಿದ್ದು, ರೈತರ ವಿಮಾ ಕಂತು 3937.50 ಆಗಿದೆ. ಅಧಿಸೂಚಿತ ಬೆಳೆಗಳ ವಿಮೆಯನ್ನು ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ ಹಾಗೂ ಗ್ರಾಮ ಒನ್ ಹಾಗೂ ಇತರ ಅಧಿಕೃತ ಕೇಂದ್ರಗಳಲ್ಲಿ ನೊಂದಣಿ ಮಾಡಬಹುದು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಹಾಯ್ಕಲ್ ಗ್ರಾಮದಲ್ಲಿ ಚರಂಡಿ ಅವ್ಯವಸ್ಥೆ; ಅನುದಾನವಿಲ್ಲ ಎಂದ ಪಂಚಾಯಿತಿ, ಶಾಸಕರಿಗೆ ದೂರು

​ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿ ಬೆಳಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಯ್ಕಲ್...

ಚಿತ್ರದುರ್ಗ | ಲಿಂಗ ಸಮಾನತೆಯಿಂದ ಮಹಿಳಾ ಸಬಲೀಕರಣ ಸಾಧ್ಯ : ನ್ಯಾ.ಎಂ.ವಿಜಯ್

ಸಮಾಜದಲ್ಲಿ ಲಿಂಗ ಸಮಾನತೆ ಕಾಯ್ದುಕೊಳ್ಳುವ ಮೂಲಕ ಮಹಿಳೆಯರಿಗೆ ಗೌರವ ಮತ್ತು ಸಮಾನ...

ಚಿತ್ರದುರ್ಗ |ನೀರು ಸರಬರಾಜು ವಿಳಂಬ; ನಗರಸಭೆ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಸಮಾಧಾನ

ಚಿತ್ರದುರ್ಗ ನಗರದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದಕ್ಕೆ ನಗರಸಭೆ...

ಚಿತ್ರದುರ್ಗ | ದಂತ ವೈದ್ಯಕೀಯ ಸ್ನಾತಕೋತ್ತರ ಪದವಿಯಲ್ಲಿ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಡಾ. ಸಾಧನಾ ಎಸ್. ಎಂ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆಸಿದ ದಂತ ವೈದ್ಯಕೀಯ ಸ್ನಾತಕೋತ್ತರ...