ಚಿತ್ರದುರ್ಗ | ಗ್ರಾಮ ಪಂಚಾಯಿತಿ ಅಕ್ರಮಗಳ ತನಿಖೆ, ಕರ್ತವ್ಯಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಆಗ್ರಹ.

Date:

ಚಳ್ಳಕೆರೆ ತಾಲೂಕು ನಗರಂಗೆರೆ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮಗಳ ತನಿಖೆ ಮಾಡಬೇಕು ಹಾಗೂ ಪಿಡಿಒ ಸೇವೆಯಿಂದ ವಜಾಗೊಳಿಸಬೇಕು. ಹಾಗೂ ಅಕ್ರಮಗಳ‌ ಬಗ್ಗೆ ಧ್ವನಿಯೆತ್ತಿ ಕ್ರಮಕೈಗೊಳ್ಳಲು ಆಗ್ರಹಿಸಿದ ಕರ್ನಾಟಕ ರಾಷ್ಟ್ರ ಸಮಿತಿಯ ಪಕ್ಷದ ನಾಯಕರ ಮೇಲೆ ಸುಖಾಸುಮ್ಮನೆ ಶಾಂತಿ ಭಂಗ ಆರೋಪ ಪ್ರಕರಣಗಳನ್ನು ದಾಖಲಿಸಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕೆಆರ್ಎಸ್ ಪಕ್ಷದ ರಾಜ್ಯ ಪದಾಧಿಕಾರಿಗಳು ಹಾಗೂ ಸ್ಥಳೀಯ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಿದರು.

1001992827

ಚಳ್ಳಕೆರೆ ತಾಲೂಕು ನಗರಂಗೆರೆ ಗ್ರಾಮ ಪಂಚಾಯಿತಿಯಲ್ಲಿ ಹಲವು ಅಕ್ರಮಗಳು ಹಾಗೂ ಭ್ರಷ್ಟಾಚಾರ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ವತಿಯಿಂದ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಕಚೇರಿಗೆ ಹಲವು ಮನವಿ ಪತ್ರಗಳನ್ನು ನೀಡಿದರೂ, ಇದುವರೆಗೂ ಯಾವುದೇ ರೀತಿಯ ತನಿಖೆ ನಡೆಸದೆ ಹಾಗೂ ಅಕ್ರಮಗಳ ಬಗ್ಗೆ ಕಾನೂನು ಕ್ರಮ ವಹಿಸದೆ ಮತ್ತು ಅಕ್ರಮಗಳಿಗೆ ಕಾರಣರಾದಂತಹ ಅಧಿಕಾರಿಯ ಮೇಲೆ ಕಾನೂನು ಕ್ರಮ ಜರುಗಿಸದೆ ಇರುವುದಕ್ಕೆ ಈ ಎಲ್ಲಾ ಅಂಶಗಳನ್ನು ಗಮನಿಸಿದರೆ ತಾವುಗಳು ಈ ಭ್ರಷ್ಟಾಧಿಕಾರಿಯನ್ನು ರಕ್ಷಣೆ ಮಾಡುವ ರೀತಿ ಭಾಸವಾಗುತ್ತಿದೆ ಎಂದು ರಾಜ್ಯ ಮುಖಂಡರು ಆರೋಪಿಸಿದರು. ದೂರು ಅಂಶಗಳ ಮೇಲೆ ಸೂಕ್ತ ತನಿಖೆ ನಡೆಸಿ ಅತಿ ತುರ್ತಾಗಿ ಕಾನೂನು ಕ್ರಮವನ್ನು ಜರುಗಿಸಬೇಕೆಂದು ಮನವಿ ಮಾಡಿದರು.

1001992860

ಅಲ್ಲದೇ ಚಳ್ಳಕೆರೆ ತಾಲೂಕು ತಹಶೀಲ್ದಾರ್ ರೆಹಮನ್ ಪಾಷ ಅವರು ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಒತ್ತಡಕ್ಕೆ ಒಳಗಾಗಿ ಕರ್ತವ್ಯ ಲೋಪವೆಸಗಿ ಕೆಆರ್ಎಸ್ ಪಕ್ಷದ ಕಾರ್ಯಕರ್ತ ಮಹೇಶ ಸಿ ತಂದೆ ಚನ್ನಬಸಪ್ಪ ನಗರಂಗೆರೆ ಹತ್ತಿರ ಬಲವಂತವಾಗಿ ಮುಚ್ಚಳಿಕೆ ಬರೆಯಿಸಿಕೊಂಡಿದ್ದಾರೆ. ಇವರ ಮೇಲೆ ತಹಶೀಲ್ದಾರ್ ಕೋರ್ಟಿನಲ್ಲಿ ದಾಖಲಾದ ಸುಳ್ಳು ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದು ತಿಳಿಸಿದರೂ ಕಾಲಾವಕಾಶ ನೀಡದೇ ತುರಾತುರಿಯಲ್ಲಿ ಹಾಜರಾಗಲು ಮೇಲಿನ ಮೇಲೆ ನೋಟೀಸ್ ನೀಡಿ ಕರ್ತವ್ಯ ಲೋಪವೆಸಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಂವಿಧಾನ ಸಾಕ್ಷಿಯಾಗಿ ಮಾದರಿ ಮದುವೆ; ಬುದ್ಧ, ಬಸವ, ಅಂಬೇಡ್ಕರ್ ತತ್ವಗಳ ಪಾಲನೆಗೆ ಕಂಕಣಬದ್ದ

ಚಳ್ಳಕೆರೆ ತಾಲೂಕು ನಗರಂಗೆರೆ ಗ್ರಾಮದ ಮಹೇಶ ಸಿ ತಂದೆ ಚನ್ನಬಸಪ್ಪ ಅವರು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿದ್ದು ಸ್ವಚ್ಛ ಪ್ರಾಮಾಣಿಕ ಜನಪರ ಇರುವಂತ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪದಾಧಿಕಾರಿಯಾಗಿ ಅನ್ಯಾಯ ಒಳಗಾದವರಿಗೆ ಹಾಗೂ ಜನಸಾಮಾನ್ಯರಿಗೆ ನ್ಯಾಯ ಸಮ್ಮತವಾಗಿ ಕರ್ನಾಟಕ ಪಕ್ಷ ವತಿಯಿಂದ ಸ್ಪಂದಿಸುತ್ತಿದ್ದು ಸರ್ಕಾರದ ಯಾವುದೇ ಕೆಲಸ ಕಾರ್ಯಗಳು ವಿಳಂಬ ಹಾಗೂ ಸರ್ಕಾರಿ ಕೆಲಸಕ್ಕೆ ಲಂಚ ಕೇಳಿದರೆ, ಅಂತಹ ಇಲಾಖೆಗಳಲ್ಲಿ ಪ್ರಶ್ನೆ ಮಾಡಿ ನ್ಯಾಯ ಬದ್ಧವಾಗಿ ಜನಸಾಮಾನ್ಯರಿಗೆ ಕೆಲಸವನ್ನು ಮಾಡಿಕೊಂಡು ಬಂದಿರುತ್ತಾರೆ. ಇಂಥವರಿಗೆ ವಿನಾ ಕಾರಣ ತೊಂದರೆ ನೀಡಿದ್ದು, ಇವರ ಮೇಲೆ ತನಿಖೆ ನಡೆಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಿದರು.

ಈ ವೇಳೆ ರಾಜ್ಯ, ಜಿಲ್ಲಾ ಘಟಕದ ಪದಾಧಿಕಾರಿಗಳು, ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...